HOME » NEWS » National-international » MISSION 2024 ON THE CARDS PRASHANT KISHORS MEETING WITH SHARAD PAWAR TRIGGERS SPECULATION MAK

Prashant Kishore| ಮಹಾರಾಷ್ಟ್ರ ಮಿಷನ್ 2024; ಕುತೂಹಲ ಮೂಡಿಸಿದ ಶರದ್ ಪವಾರ್-ಪ್ರಶಾಂತ್ ಕಿಶೋರ್ ಸಭೆ

ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿದ್ದ ಮಮತಾ ಬ್ಯಾನರ್ಜಿ ಮತ್ತು ಎಂ.ಕೆ. ಸ್ಟಾಲಿನ್ ಅವರಿಗೆ ಬೆಂಬಲ ನೀಡಿದ ಪ್ರತಿಯೊಬ್ಬ ನಾಯಕರನ್ನು ಕಿಶೋರ್ ಭೇಟಿ ಮಾಡುವ ನಿರೀಕ್ಷೆಯಿದೆ. ಇದೇ ಕಾರಣಕ್ಕೆ ಪ್ರಶಾಂತ್ ಕಿಶೋರ್ ಅವರು ಶರದ್ ಪವಾರ್ ಅವರನ್ನು ಭೇಟಿಯಾಗಿದ್ದರು ಎಂದು ಒಂದೆಡೆ ಹೇಳಲಾಗುತ್ತಿದೆ.

news18-kannada
Updated:June 11, 2021, 4:20 PM IST
Prashant Kishore| ಮಹಾರಾಷ್ಟ್ರ ಮಿಷನ್ 2024; ಕುತೂಹಲ ಮೂಡಿಸಿದ ಶರದ್ ಪವಾರ್-ಪ್ರಶಾಂತ್ ಕಿಶೋರ್ ಸಭೆ
ಪ್ರಶಾಂತ್ ಕಿಶೋರ್.
  • Share this:
ಮುಂಬೈ (ಜೂನ್ 11); ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ತಂತ್ರಗಾರನಾಗಿ ಕೆಲಸ ಮಾಡಿದ್ದ ಪ್ರಶಾಂತ್ ಕಿಶೋರ್​ ಟಿಎಂಸಿ ಮತ್ತು ಡಿಎಂಕೆ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಫಲಿತಾಂಶದ ನಂತರ ಸಂದರ್ಶನ ನೀಡಿದ್ದ ಪ್ರಶಾಂತ್ ಕಿಶೋರ್​ ತಾನು ನಿವೃತ್ತಿ ಪಡೆಯುವುದಾಗಿ ತಿಳಿಸಿದ್ದರು. ಆದರೆ, ಇದೀಗ ಮಹಾರಾಷ್ಟ್ರ ರಾಜಕಾರಣದ ಮೈತ್ರಿಯಲ್ಲಿ ಸಾಕಷ್ಟು ಗೊಂದಲಗಳು ಉಂಟಾಗಿದ್ದು, ಈ ನಡುವೆಯೇ ಎನ್​ಸಿಪಿ ಪಕ್ಷದ ಮುಖ್ಯಸ್ಥ ಶರದ್​ ಪವಾರ್​ ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಇಬ್ಬರೂ ಇಂದು ಮುಂಬೈನಲ್ಲಿ ಸಭೆ ನಡೆಸಿದ್ದು, 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡುವ ಊಹಾಪೋಹಗಳ ಬಗ್ಗೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆ ನಡೆಸಲಾಗುತ್ತಿದೆ.

ಬಂಗಾಳ ಮತ್ತು ತಮಿಳುನಾಡು ಚುನಾವಣೆಯಲ್ಲಿ ತಾನು ಹಾಗೂ ತನ್ನ ಸಂಸ್ಥೆ ಕೆಲಸ ಮಾಡಿದ್ದರ ಬಗ್ಗೆ ಪ್ರಶಾಂತ್ ಕಿಶೋರ್​ ಬಹಿರಂಗವಾಗಿ ಘೋಷಿಸಿದ್ದರೂ ಸಹ, ಶರದ್ ಪವಾರ್ ಅವರ ದಕ್ಷಿಣ ಮುಂಬೈ ನಿವಾಸದಲ್ಲಿ ಇಬ್ಬರೂ ಸಭೆ ನಡೆಸಿರುವುದು ಹಲವು ವದಂತಿಗಳಿಗೆ ನಾಂದಿ ಹಾಡಿದೆ.

ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿದ್ದ ಮಮತಾ ಬ್ಯಾನರ್ಜಿ ಮತ್ತು ಎಂ.ಕೆ. ಸ್ಟಾಲಿನ್ ಅವರಿಗೆ ಬೆಂಬಲ ನೀಡಿದ ಪ್ರತಿಯೊಬ್ಬ ನಾಯಕರನ್ನು ಕಿಶೋರ್ ಭೇಟಿ ಮಾಡುವ ನಿರೀಕ್ಷೆಯಿದೆ. ಇದೇ ಕಾರಣಕ್ಕೆ ಪ್ರಶಾಂತ್ ಕಿಶೋರ್ ಅವರು ಶರದ್ ಪವಾರ್ ಅವರನ್ನು ಭೇಟಿಯಾಗಿದ್ದರು ಎಂದು ಒಂದೆಡೆ ಹೇಳಲಾಗುತ್ತಿದೆ. ಆದರೂ, ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಯನ್ನು ಪ್ರಶ್ನಿಸಲು ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯ ಬಗ್ಗೆಯೂ ಚರ್ಚೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Nalin Kumar Katil| ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಮಾಡುವುದೇ ರಾಜಕೀಯ; ನಳಿನ್ ಕುಮಾರ್ ಕಟೀಲ್ ತಿರುಗೇಟು

ಕಿಶೋರ್-ಪವಾರ್ ಸಭೆ ಕಾಕತಾಳೀಯವಾಗಿ ನಡೆಯುತ್ತಿದೆ ಎನ್ನಲಾಗಿದೆ. ಮತ್ತೊಂದೆಡೆ ಶಿವಸೇನೆಯ ಉನ್ನತ ನಾಯಕರು ಈಗ ಬಿಜೆಪಿಯ ಜೊತೆಗೆ ರಾಜಕೀಯವಾಗಿ ಒಟ್ಟಿಗೆ ಇಲ್ಲದಿದ್ದರೂ ಸಹ ಪ್ರಧಾನಿ ಮೋದಿ ಅವರೊಂದಿಗಿನ ಸಂಬಂಧ ಮುರಿದುಹೋಗಿಲ್ಲ ಎಂಬುದನ್ನು ಉದ್ಧವ್ ಠಾಕ್ರೆ ಅವರ ಇತ್ತೀಚಿನ ಮಾತು ನಿರೂಪಿಸಿತ್ತು. ಈ ಮಾತು ರಾಜಕೀಯವಾಗಿ ಸಂಚಲನವನ್ನೂ ಸೃಷ್ಟಿಸುತ್ತಿದೆ.

ಬಿಜೆಪಿ ಜೊತೆಗಿನ ಸಂಬಂಧದ ಬಗ್ಗೆ ಬಹಿರಂಗವಾಗಿಯೇ ಮಾತನಾಡಿದ್ದ ಸಿಎಂ ಉದ್ಧವ್ ಠಾಕ್ರೆ, "ನಾವು ರಾಜಕೀಯವಾಗಿ ಒಟ್ಟಿಗೆ ಇಲ್ಲದಿರಬಹುದು, ಆದರೆ ಇದರರ್ಥ ನಮ್ಮ ಸಂಬಂಧವು ಮುರಿದುಹೋಗಿದೆ ಎಂದಲ್ಲ. ನಾನು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಲು ಹೋಗಲಿಲ್ಲ. ಆದ್ದರಿಂದ, ನಾನು ಅವರನ್ನು ಪ್ರತ್ಯೇಕವಾಗಿ ಭೇಟಿಯಾದರೆ, ಅದರಲ್ಲಿ ಯಾವುದೇ ತಪ್ಪಿಲ್ಲ" ಎಂದು ಹೇಳುವ ಮೂಲಕ ಶಿವಸೇನೆ ಪಕ್ಷದ ಉನ್ನತ ನಾಯಕ ಉದ್ಧವ್ ಠಾಕ್ರೆ ಬಿಜೆಪಿ ಪರವಾದ ಹೇಳಿಕೆ ನೀಡಿದ್ದು ಮಹಾ ಅಗಾಡಿ ಮೈತ್ರಿಯಲ್ಲಿ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ.

ಇದನ್ನೂ ಓದಿ: BS Yediyurappa: ಮುಂದಿನ 2 ವರ್ಷ ನಾನೇ ಸಿಎಂ; ಎಲ್ಲಾ ವದಂತಿಗಳಿಗೆ ತೆರೆ ಎಳೆದ ಬಿ.ಎಸ್.ಯಡಿಯೂರಪ್ಪಇದೇ ಸಂದರ್ಭದಲ್ಲಿ ನಿನ್ನೆ, ಶಿವಸೇನೆ ಮುಖಂಡ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್, " ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಉನ್ನತ ನಾಯಕ" ಎಂದು ಬಹಿರಂಗವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೂ ಸಹ ಮೈತ್ರಿಯಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದು, ಶಿವಸೇನೆ ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆಗೆ ಹೊಸ ಮೈತ್ರಿ ಸಾಧಿಸಲಿದೆ ಎನ್ನಲಾಗುತ್ತಿದೆ. ಹೀಗಾಗಿ ಪ್ರಶಾಂತ್ ಕಿಶೋರ್ ಹಾಗೂ ಶರದ್ ಪವಾರ್​ ಭೇಟಿಗೆ ಸಾಕಷ್ಟು ಮಹತ್ವ ಲಭಿಸಿದೆ ಎನ್ನಲಾಗುತ್ತಿದೆ.
Youtube Video

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by: MAshok Kumar
First published: June 11, 2021, 4:18 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories