ಕರ್ನಾಟಕದ ವಿರುದ್ಧ ಮತ್ತೆ ತಮಿಳುನಾಡು ಕಿರಿಕ್! ಪ್ರಧಾನಿ Narendra Modiಗೆ ದೂರು ಕೊಟ್ಟ ಎಂ.ಕೆ. ಸ್ಟಾಲಿನ್

ಪ್ರಧಾನಿಯವರನ್ನು ಭೇಟಿಯಾದ ತಮಿಳುನಾಡು ಸಿಎಂ ಸ್ಟಾಲಿನ್, ಮೇಕೆದಾಟು ಯೋಜನೆ ಬಗ್ಗೆ ಕ್ಯಾತೆ ತೆಗೆದಿದ್ದಾರೆ. ಜೊತೆಗೆ "ತಮಿಳುನಾಡು ಸರ್ಕಾರದ ಅನುಮತಿಯಿಲ್ಲದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಯಾವುದೇ ಯೋಜನೆ ಕೈಗೊಳ್ಳಬಾರದು" ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಧಾನಿಗೆ ಸ್ಟಾಲಿನ್ ಮನವಿ

ಪ್ರಧಾನಿಗೆ ಸ್ಟಾಲಿನ್ ಮನವಿ

  • Share this:
ನವದೆಹಲಿ: ಕರ್ನಾಟಕ (Karnataka) ಹಾಗೂ ತಮಿಳುನಾಡು (Tamil Nadu) ರಾಜ್ಯಗಳ (State) ನಡುವೆ ಜಲ ವಿವಾದ (Water Dispute) ಇಂದು ನಿನ್ನೆಯದ್ದಲ್ಲ. ಅದೆಷ್ಟೋ ವರ್ಷಗಳಿಂದ ಕಾವೇರಿ ನದಿ (Cauvery River) ನೀರಿನ ಹಂಚಿಕೆ ವಿಚಾರದಲ್ಲಿ ಗಲಾಟೆ (Clash) ನಡೆಯುತ್ತಲೇ ಇದೆ. ಕಾವೇರಿ ವಿಚಾರಕ್ಕೆ ಕರ್ನಾಟಕದ ಜೊತೆ ಪದೇ ಪದೇ ಕ್ಯಾತೆ ತೆಗೆಯುವ ತಮಿಳುನಾಡು, ಇದೀಗ ಮೇಕೆದಾಟು ಯೋಜನೆ (Mekedatu Project) ವಿಚಾರಕ್ಕೂ ಕಿರಿಕ್ ಮುಂದುವರೆಸಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿಯಾಗಿರುವ ತಮಿಳುನಾಡು ಸಿಎಂ (Tamil Nadu CM) ಎಂ.ಕೆ. ಸ್ಟಾಲಿನ್ (M.K. Stalin), ಮೇಕೆದಾಟು ವಿಚಾರ ಪ್ರಸ್ತಾಪಿಸಿದ್ದಾರೆ. “ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಡಿ” ಅಂತ ಮನವಿ ಮಾಡಿದ್ದಾರೆ.

 “ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಡಿ”

ದೆಹಲಿ ಪ್ರವಾಸದಲ್ಲಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಮೇಕೆದಾಟು ಯೋಜನೆ ವಿಚಾರ ಪ್ರಸ್ತಾಪಿಸಿದ್ದಾರೆ. ಕುಡಿಯುವ ನೀರಿನ ಹೆಸರಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಮುಂದಾಗಿರುವ ಕರ್ನಾಟಕ ಸರ್ಕಾರದ ಮೇಕೆದಾಟು ಯೋಜನೆಯು 2018ರ ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದೆ. ಹೀಗಾಗಿ ಮೇಕೆದಾಟು ಯೋಜನೆ ಜಾರಿಯು ತಮಿಳುನಾಡು ರೈತ ಸಮುದಾಯದ ಹಿತಾಸಕ್ತಿ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ. ಹೀಗಾಗಿ ಮೇಕೆದಾಟು ಯೋಜನೆಗೆ ಯಾವುದೇ ಕಾರಣಕ್ಕೂ ಒಪ್ಪಿಗೆ ನೀಡಬೇಡಿ ಅಂತ ಮನವಿ ಮಾಡಿದ್ದಾರೆ.

ಕರ್ನಾಟಕದ ವಿರುದ್ಧ ಸ್ಟಾಲಿನ್ ದೂರು

ಯಾವುದೇ ವರ್ಷದಲ್ಲಿ ಉತ್ತಮ ಮಳೆಯಾಗಲಿ ಅಥವಾ ಸಾಮಾನ್ಯ ಮಳೆಯೇ ಆಗಲಿ, ತಮಿಳುನಾಡು ರಾಜ್ಯದ ಪಾಲಿನ ನೀರನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡುವುದಿಲ್ಲ ಎಂದು ಸ್ಟಾಲಿನ್ ದೂರಿದ್ದಾರೆ. ಮೇಕೆದಾಟು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕರ್ನಾಟಕದ ಯಾವುದೇ ಯೋಜನೆಗಳಿಗೆ ಅನುಮೋದನೆ ನೀಡದಂತೆ ಕೇಂದ್ರ ಜಲಶಕ್ತಿ ಇಲಾಖೆಗೆ ನಿರ್ದೇಶನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Karnataka Budget 2022: ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ! ಬಜೆಟ್‌ನಲ್ಲಿ ಕಾಂಗ್ರೆಸ್‌ಗೆ ಟಾಂಗ್‌ ಕೊಟ್ಟ ಸಿಎಂ

“ತಮಿಳುನಾಡು ಸರ್ಕಾರದ ಅನುಮತಿ ಇಲ್ಲದೇ ಯೋಜನೆ ಕೈಗೊಳ್ಳುವಂತಿಲ್ಲ”

ಇನ್ನು ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬಾರದು ಎಂದು ಕಾವೇರಿ ನಿರ್ವಹಣೆ ಪ್ರಾಧಿಕಾರಕ್ಕೂ ಸೂಚನೆ ನೀಡಬೇಕು ಅಂತ ಅವರು ಮನವಿ ಮಾಡಿದ್ರು. ಜೊತೆಗೆ ತಮಿಳುನಾಡು ಸರ್ಕಾರದ ಅನುಮತಿಯಿಲ್ಲದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಯಾವುದೇ ಯೋಜನೆ ಕೈಗೊಳ್ಳಬಾರದು ಎಂದು ಅವರು ಪ್ರಧಾನಿ ಅವರಲ್ಲಿ ಒತ್ತಾಯಿಸಿದರು.

ಮೇಕೆದಾಟು ಯೋಜನೆಗೆ ಅನುದಾನ ನೀಡಿದ್ದ ಸರ್ಕಾರ

ಈ ಬಾರಿಯ ಬಜೆಟ್‌ನಲ್ಲಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಅನುದಾನ ನೀಡಿತ್ತು. ಮೇಕೆದಾಟು ಯೋಜನೆಗಾಗಿ 1 ಸಾವಿರ ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಕುಳಿತು ಮಾತನಾಡಿ Mekedatu ವಿವಾದ ಬಗೆಹರಿಸಿಕೊಳ್ಳಿ; ಕರ್ನಾಟಕ-ತಮಿಳುನಾಡಿಗೆ ಕೇಂದ್ರ ಸಚಿವರ ಸಲಹೆ

ಕೇಂದ್ರ ಸರ್ಕಾರದ ಹಸಿರು ನಿಶಾನೆ ಬಳಿಕ ಯೋಜನೆ

ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ತೋರಿಸಿದ ನಂತರ ಯೋಜನೆ ಆರಂಭಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಬಜೆಟ್‌ ಭಾಷಣದಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗಾಗಿ ಬಜೆಟ್‌ನಲ್ಲಿ 1 ಸಾವಿರ ಕೋಟಿ ರೂಪಾಯಿ ತೆಗೆದಿರಿಸಲಾಗುವುದು ಎಂದು ತಿಳಿಸಿದರು. ಜೊತೆಗೆ ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಗೆ 5ಸಾವಿರ ಕೋಟಿ ರೂಪಾಯಿ, ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ ರೂಪಾಯಿ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ.
Published by:Annappa Achari
First published: