MK Stalin Swearing-in: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕಾರ

MK Stalin Swearing-in Ceremony: ಕೊರೋನಾ ಹಿನ್ನೆಲೆಯಲ್ಲಿ ಚೆನ್ನೈನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕಾರ

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕಾರ

  • Share this:
ಚೆನ್ನೈ (ಮೇ 7): ಕಳೆದ ಭಾನುವಾರ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ, ಪುದುಚೆರಿ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಡಿಎಂಕೆ ಜಯಭೇರಿ ಬಾರಿಸಿದ್ದು, ಇದೇ ಮೊದಲ ಬಾರಿಗೆ ಎಂ.ಕೆ. ಸ್ಟಾಲಿನ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಕೊರೋನಾ ಹಿನ್ನೆಲೆಯಲ್ಲಿ ಚೆನ್ನೈನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪ್ರಮಾಣವಚನ ಬೋಧಿಸಿದ್ದಾರೆ. ಸಿಎಂ ಎಂ.ಕೆ. ಸ್ಟಾಲಿನ್ ಅವರೊಂದಿಗೆ ಕೆಲವು ಸಚಿವರು ಕೂಡ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷ 234 ಕ್ಷೇತ್ರಗಳ ಪೈಕಿ 133 ಸ್ಥಾನಗಳನ್ನು ಪಡೆಯುವ ಮೂಲಕ ತಮಿಳುನಾಡಿನ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಡಿಎಂಕೆ ಮೈತ್ರಿಕೂಟ 159 ಸ್ಥಾನಗಳನ್ನು ಪಡೆದು, ಸರ್ಕಾರ ರಚನೆ ಮಾಡಿದೆ. ಬಿಜೆಪಿ, ಪಿಎಂಕೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಎಐಡಿಎಂಕೆ ಕೇವಲ 66 ಸ್ಥಾನಗಳನ್ನು ಪಡೆದು ಹೀನಾಯ ಸೋಲನ್ನು ಅನುಭವಿಸಿದೆ.ಇಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನೂ ಸೇರಿ ಒಟ್ಟು 34 ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ತಮಿಳುನಾಡಿನ ಖ್ಯಾತ ರಾಜಕಾರಣಿ ಹಾಗೂ ಮಾಜಿ ಸಿಎಂ ದಿ. ಕರುಣಾನಿಧಿ ಅವರ ಮಗನಾಗಿರುವ ಎಂ.ಕೆ. ಸ್ಟಾಲಿನ್ ಇದೇ ಮೊದಲ ಬಾರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಅವರು ವಿರೋಧ ಪಕ್ಷದ ನಾಯಕರಾಗಿದ್ದರು.
Published by:Sushma Chakre
First published: