Delhi High Court| ಆಧುನಿಕ ಭಾರತಕ್ಕೆ ಏಕರೂಪ ನಾಗರೀಕ ಸಂಹಿತೆ ಅನಿವಾರ್ಯ, ಕೇಂದ್ರ ಈ ಬಗ್ಗೆ ಕ್ರಮ ತೆಗೆದುಕೊಳ್ಳಲಿ; ದೆಹಲಿ ಹೈಕೋರ್ಟ್
ಪ್ರತಿಭಾ ಎಂ. ಸಿಂಗ್ ಅವರಿದ್ದ ಏಕ ಸದಸ್ಯಪೀಠ, ಮದುವೆ, ವಿಚ್ಛೇಧನ, ಆಸ್ತಿ ಮತ್ತು ವಾರಸುದಾರಿಕೆಗೆ ಸಂಬಂಧಿಸಿದಂತೆ ದೇಶದಲ್ಲಿ ಒಂದು ಸಮಾನ ಕಾನೂನು ಇರುವುದು ಇಂದಿನ ಅವಶ್ಯವಾಗಿದೆ ಎಂದು ತಿಳಿಸಿದ್ದಾರೆ.
ನವ ದೆಹಲಿ (ಜುಲೈ 10); ಏಕರೂಪ ನಾಗರೀಕ ನೀತಿ ಸಂಹಿತೆಯನ್ನು ಜಾರಿಗೊಳಿಸುವ ಬಗ್ಗೆ ಭಾರತದಲ್ಲಿ ಕಳೆದ ಹಲವು ವರ್ಷಗಳಿಂದ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಈ ನಡುವೆ ಏಕರೂಪ ನಾಗರೀಕ ನೀತಿ ಸಂಹಿತೆಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ದೆಹಲಿ ಹೈಕೋರ್ಟ್, "ಆಧುನಿಕ ಭಾರತಕ್ಕೆ ಏಕ ರೂಪ ನಾಗರಿಕ ಸಂಹಿತೆ ಅಥವಾ ಯುನಿ ಫಾರ್ಮ್ ಸಿವಿಲ್ ಕೋಡ್ ಎಂದು ಕರೆಯುವ ಒಂದು ಕಾನೂನು ಅನಿವಾರ್ಯವಾಗಿದೆ" ಎಂದು ತಿಳಿಸಿದೆ. ಅಲ್ಲದೆ, ಯುನಿಫಾರ್ಮ್ ಸಿವಿಲ್ ಕೋಡ್ ಜಾರಿಗೊಳಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಇದೇ ಸಂದರ್ಭದಲ್ಲಿ ಏಕರೂಪ ನಾಗರೀಕ ನೀತಿ ಸಂಹಿತೆಯ ವಾಸ್ತವಿಕ ಅಗತ್ಯದ ಬಗ್ಗೆಯೂ ಮಾತನಾಡಿರುವ ದೆಹಲಿ ಹೈಕೋರ್ಟ್, "ಇಂದಿನ ಯುವಕ ಯುವತಿಯರು ಧರ್ಮ, ಜಾತಿಗಳನ್ನು ಮೀರಿ ಬೆಸೆದುಗೊಂಡಿದ್ದಾರೆ. ಬೇರೆ ಬೇರೆ ಜನಾಂಗ, ಬುಡಕಟ್ಟಿಗೆ ಸೇರಿಯೂ ಒಂದಾಗಿರುವ ಯುವ ಸಮುದಾಯಕ್ಕೆ ದೇಶದ ವಯಕ್ತಿಕ ಕಾನೂನುಗಳು ತೊಡಕಾಗಬಾರದು. ರಾಜ್ಯವು ಪ್ರಜೆಗಳಿಗೆ ಏಕರೂಪದ ನಾಗರಿಕ ಸಂಹಿತೆಯನ್ನು ನೀಡಬೇಕು ಎಂದು ಸಂವಿಧಾನದ ಅನುಚ್ಛೇದವು ನಿರ್ದೇಶಿಸುತ್ತದೆ. ಸರ್ಕಾರ ಈ ನಿಟ್ಟಿನಲ್ಲಿ ಹೆಜ್ಜೆ ಇಡಬೇಕು" ಎಂದು ತಿಳಿಸಿದೆ.
ಪ್ರತಿಭಾ ಎಂ. ಸಿಂಗ್ ಅವರಿದ್ದ ಏಕ ಸದಸ್ಯಪೀಠ, ಮದುವೆ, ವಿಚ್ಛೇಧನ, ಆಸ್ತಿ ಮತ್ತು ವಾರಸುದಾರಿಕೆಗೆ ಸಂಬಂಧಿಸಿದಂತೆ ದೇಶದಲ್ಲಿ ಒಂದು ಸಮಾನ ಕಾನೂನು ಇರುವುದು ಇಂದಿನ ಅವಶ್ಯವಾಗಿದೆ. ಕಾನುನುಗಳಲ್ಲಿನ ಗೊಂದಲದ ಪರಿಣಾಮವಾಗಿಯೇ ಇಂದು ಅನೇಕರು ತಮ್ಮ ಹಕ್ಕುಗಳಿಂದ ವಂಚಿತರಾಗಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿತು.
ನ್ಯಾಯಾಲಯಗಳು ಪದೇ ಪದೇ ವಯಕ್ತಿಕ ಕಾನೂನುಗಳಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸುತ್ತಿವೆ. ಸರ್ಕಾರಗಳು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲು ಆಸಕ್ತಿಯನ್ನು ತೋರಿಸುತ್ತಿಲ್ಲ. 1985ರಲ್ಲಿ ಸುಪ್ರೀಂ ಕೋರ್ಟ್ ಕೂಡ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವಂತೆ ಸರ್ಕಾರಕ್ಕೆ ಸೂಚಿಸಿದೆ. ಅಲ್ಲಿಂದ ಇಲ್ಲಿಯ ವರೆಗೆ ಆ ನಿಟ್ಟಿನಲ್ಲಿ ಯಾವ ಪ್ರಯತ್ನಗಳು ಕಂಡುಬಂದಿಲ್ಲ ಎಂದು ಕೋರ್ಟ್ ಇದೇ ಸಂದರ್ಭದಲ್ಲಿ ವಿಷಾದವನ್ನು ವ್ಯಕ್ತಪಡಿಸಿತು.
ಯುನಿಫಾರ್ಮ್ ಸಿವಿಲ್ ಕೋಡ್ ಜಾರಿಗೆ ತರುವಂತೆ ಸಮುದಾಯಗಳು ಮುಂದೆ ಬರಬೇಕು ಎಂದು ಹೇಳುವುದು ಸಾಧ್ಯವಿಲ್ಲ. ಸಂವಿಧಾನವು ಈ ಕರ್ತವ್ಯವನ್ನು ಸರ್ಕಾರಕ್ಕೆ ಹೊರಿಸಿದೆ. ಬೆಕ್ಕಿಗೆ ಗಂಟೆ ಕಟ್ಟುವವರು ಯಾರು ಎಂಬಂತೆ ಮುಂದೂಡುತ್ತಲೆ ಹೋಗುವುದು ಸರಿಯಲ್ಲ ಎಂದು ನ್ಯಾಯಾಲಯ ಸರ್ಕಾರಕ್ಕೆ ಈ ಸಂಬಂಧ ನಿರ್ದೇಶನವನ್ನು ನೀಡಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ