Monsoon 2020: ಕೇರಳ, ಕರ್ನಾಟಕ, ಅಸ್ಸಾಂನಲ್ಲಿ 4 ದಿನ ವಿಪರೀತ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

ಮಳೆಯ ಸಾಂದರ್ಭಿಕ ಚಿತ್ರ

ಮಳೆಯ ಸಾಂದರ್ಭಿಕ ಚಿತ್ರ

Kerala Rain: ಕೇರಳದ ಮಲಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರ್​ ಜಿಲ್ಲೆಗಳಲ್ಲಿ ಇಂದಿನಿಂದ ಭಾನುವಾರದವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

  • Share this:

ಬೆಂಗಳೂರು (ಸೆ. 10): ಕೇರಳ, ಅಸ್ಸಾಂ ಮತ್ತು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಇಂದಿನಿಂದ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಶನಿವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಮಹಾರಾಷ್ಟ್ರದ ಕರಾವಳಿ ಪ್ರದೇಶ, ಕೇರಳದ ಉತ್ತರ ಭಾಗ ಮತ್ತು ಕರ್ನಾಟಕದ ಕರಾವಳಿಯಲ್ಲೂ ಮಳೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


ಕರ್ನಾಟಕ, ಕೇರಳ, ಅಸ್ಸಾಂ ಮತ್ತು ಮೇಘಾಲಯದ ಬಹುತೇಕ ಭಾಗಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ಮಹಾರಾಷ್ಟ್ರ, ಕೇರಳ, ಕರ್ನಾಟಕದಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ. ಇಂದಿನಿಂದ ಭಾನುವಾರದವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಗೋವಾದಲ್ಲಿ ಮಳೆ ಹೆಚ್ಚಾಗಲಿದೆ.


ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ; ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್​


ಕೇರಳದ ಮಲಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರ್​ ಜಿಲ್ಲೆಗಳಲ್ಲಿ ಇಂದಿನಿಂದ ಭಾನುವಾರದವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೇರಳದಲ್ಲಿ ಇಂದು ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ತ್ರಿಶೂರ್​, ಕಾಸರಗೋಡು, ಪಲಕ್ಕಾಡ್ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.
ಇಂದು ಮತ್ತು ನಾಳೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಲೆನಾಡು, ಕರಾವಳಿಯಲ್ಲಿ ಇನ್ನೆರಡು ದಿನ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ 2 ದಿನ ಮಳೆ ಹೆಚ್ಚಾಗಲಿದೆ. ಹಾಸನ, ಕೋಲಾರ, ಮಂಡ್ಯ, ಮೈಸೂರು, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೆಂಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

Published by:Sushma Chakre
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು