Kerala Monsoon 2021 | ಕೇರಳಕ್ಕೆ ಇಂದು ಮುಂಗಾರು ಪ್ರವೇಶ; ಕರ್ನಾಟಕದ ಕರಾವಳಿಯಲ್ಲೂ ಮಳೆಯ ಅಬ್ಬರ

ಮಳೆಯ ಸಾಂದರ್ಭಿಕ ಚಿತ್ರ

ಮಳೆಯ ಸಾಂದರ್ಭಿಕ ಚಿತ್ರ

Kerala Weather Today | ಮುಂಗಾರು ಪ್ರವೇಶದಿಂದ ಇಂದು ಕೇರಳದಲ್ಲಿ ಭಾರೀ ಗಾಳಿ, ಗುಡುಗು- ಸಿಡಿಲು ಸಹಿತ ಮಳೆಯ ಅಬ್ಬರವಿರಲಿದೆ. ಹೀಗಾಗಿ, 4 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

  • Share this:

ಬೆಂಗಳೂರು (ಜೂನ್ 3): ಕೇರಳಕ್ಕೆ ಇಂದು ಮುಂಗಾರು ಮಳೆ ಪ್ರವೇಶಿಸಲಿದೆ. ಈ ಬಾರಿ ಕಳೆದ ವರ್ಷಗಳಿಗಿಂತಲೂ 2 ದಿನ ತಡವಾಗಿ ಇಂದು ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗಲಿದೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಲಾಗಿದೆ. ಇಂದು ನೈಋತ್ಯ ಮುಂಗಾರು ಕೇರಳವನ್ನು ಪ್ರವೇಶಿಸುವುದರಿಂದ ಕರ್ನಾಟಕದಲ್ಲೂ ಮಳೆಯ ಅಬ್ಬರ ಹೆಚ್ಚಾಗಲಿದೆ. ಮುಂಗಾರು ಪ್ರವೇಶದಿಂದ ಇಂದು ಕೇರಳದಲ್ಲಿ ಭಾರೀ ಗಾಳಿ, ಗುಡುಗು- ಸಿಡಿಲು ಸಹಿತ ಮಳೆಯ ಅಬ್ಬರವಿರಲಿದೆ. ಹೀಗಾಗಿ, 4 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.


ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ ಕೇರಳ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಇಂದಿನಿಂದ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರ, ಒರಿಸ್ಸಾ, ತಮಿಳುನಾಡಿನ ಕೆಲವು ಭಾಗಗಳಲ್ಲೂ ಮಳೆಯಾಗಲಿದೆ. ಕಳೆದ 2 ವರ್ಷಗಳಿಂದ ದೇಶದಲ್ಲಿ ಉತ್ತಮ ಮಳೆಯಾಗಿದೆ. ಆದರೆ, ಈ ಬಾರಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. 2019 ಮತ್ತು 2020ರಲ್ಲಿ ಭಾರತದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗಿತ್ತು.


ಇಂದು ಕೇರಳ ಮಾತ್ರವಲ್ಲದೆ ಕರ್ನಾಟಕ, ನಾಗಾಲ್ಯಾಂಡ್, ಮಣಿಪುರ, ಅಸ್ಸಾಂ, ಮೇಘಾಲಯ, ಗೋವಾ, ಲಕ್ಷದ್ವೀಪ, ಸಿಕ್ಕಿಂ, ಮಿಜೋರಾಂ, ತ್ರಿಪುರ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಇದನ್ನೂ ಓದಿ: Petrol Price Today June 3: ವಾಹನ ಸವಾರರಿಗೆ ಬೆಲೆಯೇರಿಕೆಯ ಶಾಕ್!; ಒಂದೇ ವರ್ಷದಲ್ಲಿ 43 ಬಾರಿ ಪೆಟ್ರೋಲ್ -ಡೀಸೆಲ್ ಬೆಲೆ ಹೆಚ್ಚಳ


ಇಂದು ಮತ್ತು ನಾಳೆ ಗುಡುಗು ಸಿಡಿಲು ಸಹಿತ ಮಳೆಯಾಗುವುದರಿಂದ ಒಟ್ಟು 17 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಜೂನ್ 6ರವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ. ಇಂದು ನೈಋತ್ಯ ಮುಂಗಾರು ಕೇರಳವನ್ನು ಪ್ರವೇಶಿಸಲಿದೆ. ಹೀಗಾಗಿ, ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರ್ನಾಟಕಕ್ಕೆ ಜೂನ್ 5 ಅಥವಾ 6ರಂದು ಮುಂಗಾರು ಆಗಮನವಾಗುವ ನಿರೀಕ್ಷೆಯಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಜಾಸ್ತಿಯಾದ ಹಿನ್ನೆಲೆ ಮಳೆಯಾಗುತ್ತಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


ಎಲ್ಲೆಲ್ಲಿ ಯೆಲ್ಲೋ ಅಲರ್ಟ್?:
ಕರ್ನಾಟಕದ ಉತ್ತರ ಕನ್ನಡ , ದಕ್ಷಿಣ ಕನ್ನಡ , ಉಡುಪಿ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಕೋಲಾರ, ತುಮಕೂರು, ಹಾಸನ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್​ ಘೋಷಿಸಲಾಗಿದೆ.


ಇದನ್ನೂ ಓದಿ: Karnataka Weather Today | ಕರ್ನಾಟಕದಲ್ಲಿ ಇಂದು, ನಾಳೆ ಭಾರೀ ಮಳೆ; ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ


ಕರ್ನಾಟಕಕ್ಕೆ ಜೂನ್ 5 ಅಥವಾ 6ರಂದು ಮುಂಗಾರಿನ ಪ್ರವೇಶವಾಗಲಿದೆ. ಇಂದಿನಿಂದ ಜೂನ್ 5ರವರೆಗೆ ಕೇರಳ ಮತ್ತು ಮಾಹೆ ಸೇರಿದಂತೆ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಭಾರತದಲ್ಲಿ ಜೂನ್​ನಿಂದ ಸೆಪ್ಟೆಂಬರ್​ವರೆಗೆ ವರ್ಷದ ಶೇ. 70ಕ್ಕೂ ಹೆಚ್ಚು ಪ್ರಮಾಣದ ಮಳೆಯಾಗಲಿದೆ. ಈ ವರ್ಷ ದೇಶದಲ್ಲಿ ಸಾಧಾರಣ ಮಳೆ ದಾಖಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ ಮಳೆ ತೀವ್ರಗೊಳ್ಳುವುದರಿಂದ ಒಂದು ವಾರಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಕೇರಳ ಮತ್ತು ಕರ್ನಾಟಕದ ಕರಾವಳಿ ತೀರದಲ್ಲಿ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

Published by:Sushma Chakre
First published: