HOME » NEWS » National-international » MORE THAN 1 LAKH COVID CASES IN THE COUNTRY IN A SINGLE DAY DBDEL SKTV

ದೇಶದಲ್ಲಿ ಮತ್ತೆ ಒಂದೇ ದಿನ ಒಂದೂವರೆ ಲಕ್ಷಕ್ಕೂ‌ ಹೆಚ್ಚು ಕೊರೋನಾ ಕೇಸ್

ಭಾನುವಾರ 1,68,912 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 75,086 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,35,27,717ಕ್ಕೆ ಏರಿಕೆ ಆಗಿದೆ.‌ ಭಾನುವಾರ ಒಂದೇ ದಿನ ಕೊರೋನಾಗೆ 905 ಜನರು ಬಲಿ ಆಗಿದ್ದಾರೆ. ಸದ್ಯ ಮಹಾಮಾರಿ ಕೊರೋನಾಗೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈವರೆಗೆ ಕೊರೋನಾ ರೋಗದಿಂದ ಸತ್ತವರ ಸಂಖ್ಯೆ 1,70,179ಕ್ಕೆ ಏರಿಕೆ ಆಗಿದೆ.

news18-kannada
Updated:April 12, 2021, 10:06 AM IST
ದೇಶದಲ್ಲಿ ಮತ್ತೆ ಒಂದೇ ದಿನ ಒಂದೂವರೆ ಲಕ್ಷಕ್ಕೂ‌ ಹೆಚ್ಚು ಕೊರೋನಾ ಕೇಸ್
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ (ಏಪ್ರಿಲ್ 12): ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಕಳೆದ ಭಾನುವಾರದಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದರು. ಬುಧವಾರದಿಂದ ದಿನ ಒಂದರಲ್ಲಿ ಒಂದೂಕಾಲು ಲಕ್ಷಕ್ಕೂ ‌ಹೆಚ್ಚು‌ ಕೊರೋನಾ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದರು. ಈಗ ದಿನ‌ ಒಂದರಲ್ಲಿ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಂಡು ಬರಲು ಆರಂಭಿಸಿದ್ದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಭಾನುವಾರ 1,68,912 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 75,086 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,35,27,717ಕ್ಕೆ ಏರಿಕೆ ಆಗಿದೆ.‌ ಭಾನುವಾರ ಒಂದೇ ದಿನ ಕೊರೋನಾಗೆ 905 ಜನರು ಬಲಿ ಆಗಿದ್ದಾರೆ. ಸದ್ಯ ಮಹಾಮಾರಿ ಕೊರೋನಾಗೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈವರೆಗೆ ಕೊರೋನಾ ರೋಗದಿಂದ ಸತ್ತವರ ಸಂಖ್ಯೆ 1,70,179ಕ್ಕೆ ಏರಿಕೆ ಆಗಿದೆ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕೆಲಸವನ್ನು ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 10,45,28,565 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ. ಏಪ್ರಿಲ್ 11ರಿಂದ ಕೊರೋನಾ ಲಸಿಕೆ ಹಾಕುವ 'ಟಿಕಾ ಉತ್ಸವ'ವನ್ನು ನಡೆಸಲಾಗುತ್ತಿದೆ.

ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು.

ಆದರೆ ಈಗ ಎರಡನೇ ಅಲೆ ಶುರುವಾದ ಮೇಲೆ ಇದೇ ಮೊದಲ ಬಾರಿಗೆ ಏಪ್ರಿಲ್ 4ರಂದು 1,03,558 ಪ್ರಕರಣಗಳು ಪತ್ತೆಯಾಗಿದ್ದವು. ಏಪ್ರಿಲ್ ‌6ರಂದು 1,15,736, ಏಪ್ರಿಲ್ 7ರಂದು 1,26,789, ಏಪ್ರಿಲ್ 8ರಂದು 1,31,968, ಏಪ್ರಿಲ್ 9ರಂದು 1,45,384 ಮತ್ತು ಏಪ್ರಿಲ್ 10ರಂದು 1,52,879 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಏಪ್ರಿಲ್ 11ರಂದು 1,68,912 ಹೊಸ ಪ್ರಕರಣಗಳು ಕಂಡುಬಂದಿವೆ.

ದೇಶದಲ್ಲಿ ದಾಖಲಾಗುತ್ತಿರುವ ಒಟ್ಟು ಕೊರೋನಾ ಪ್ರಕರಣಗಳ ಪೈಕಿ ಶೇಕಡಾ 90ರಷ್ಟು ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ದೆಹಲಿ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಂಡು ಬರುತ್ತಿವೆ.
Published by: Soumya KN
First published: April 12, 2021, 10:06 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories