Morning Digest: ರಾಜ್ಯದಲ್ಲಿ ಮತ್ತೆ ಮಳೆಯಬ್ಬರ, ಚಿನ್ನದ ಬೆಲೆಯಲ್ಲಿ ಏರಿಕೆ, 2 ದಿನ ಬ್ಯಾಂಕ್​ ಮುಷ್ಕರ; ಬೆಳಗಿನ ಟಾಪ್​ ನ್ಯೂಸ್​​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
1.Karnataka Weather Report: ರಾಜ್ಯದಲ್ಲಿ ಮತ್ತೆ ಮೂರು ದಿನ ಮಳೆಯ ಅಲರ್ಟ್

ಕಳೆದ ಎರಡು ವಾರದಿಂದ ವಿರಾಮ ನೀಡಿದ್ದ ಮಳೆರಾಯ (Rainfall) ಮತ್ತೆ ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾನೆ. ಡಿಸೆಂಬರ್ 17ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. ಸಾಧಾರಣ ಮಳೆಯಾದ್ರೂ ರೈತ ವರ್ಗಕ್ಕೆ (Agriculture Sector) ಹೊಡೆತ ನೀಡಲಿದೆ. ಚಳಿಗಾಲದಲ್ಲಿಯ (Winter Rain) ಆಕಾಲಿಕ ಮಳೆ ಬೆಳೆಯನ್ನು ಹಾಳು ಮಾಡುವ ಮೂಲಕ ಇಳುವರಿಯನ್ನು ಕುಂಠಿತಗೊಳಿಸುತ್ತದೆ. ಮುಂದಿನ 5 ದಿನಗಳಲ್ಲಿ ತಮಿಳುನಾಡು-ಪುದುಚೇರಿ-ಕಾರೈಕಲ್, ಕೇರಳ- ಮಾಹೆ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತು ಮುಂದಿನ 2 ದಿನಗಳಲ್ಲಿ ದಕ್ಷಿಣ ಆಂಧ್ರಪ್ರದೇಶದಲ್ಲಿ ಪ್ರತ್ಯೇಕ/ಚದುರಿದ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಹೇಳಿದೆ.

2.Gold Price Today: ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ ಚಿನ್ನದ ಬೆಲೆ: ಇವತ್ತು ಹೆಚ್ಚಾಗಿದ್ದು ಎಷ್ಟು ಗೊತ್ತಾ?

Gold Rate on Dec 15, 2021: ನೀವು ಚಿನ್ನ ಖರೀದಿಗೆ ಹೋಗುತ್ತಿದ್ರೆ ಇವತ್ತಿನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಇದರಿಂದ ಚಿನ್ನ (Gold) ಖರೀದಿ ಸುಲಭವಾಗಲಿದೆ. ಕಳೆದೊಂದು ವಾರದಿಂದ ಚಿನ್ನದ ಬೆಲೆ ಸಾಕಷ್ಟು ಏರಿಳಿತ ಕಾಣುತ್ತಿದೆ. ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.ದೇಶದಲ್ಲಿಂದು ಚಿನ್ನದ ಬೆಲೆ (Gold Price) ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ (Bengaluru) ಇಂದು ಬಂಗಾರದ ಬೆಲೆ ಏರಿಕೆ ಕಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,150 ರೂ. ಇತ್ತು. ಇಂದು 10 ರೂ. ಬೆಲೆ ಹೆಚ್ಚಾಗಿದ್ದು, 47,160 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,150 ರೂ. ಇತ್ತು. ಇಂದು 10 ರೂ. ಬೆಲೆ ಹೆಚ್ಚಾಗಿದ್ದು, 48,160 ರೂ. ಆಗಿದೆ.

3.Petrol, Diesel Price Today: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಳಿತ: ಇವತ್ತಿನ ದರ ಇಲ್ಲಿದೆ

Petrol And Diesel Price Today: ಕೇಂದ್ರ ಹಾಗೂ ರಾಜ್ಯ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಪೆಟ್ರೋಲ್‌, ಡೀಸೆಲ್‌ ಮೇಲಿನ ಸುಂಕವನ್ನು ಕಡಿತಗೊಳಿಸಿದ್ದವು. ಇದರ ಪರಿಣಾಮವಾಗಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಎಲ್​ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿದ್ದ ಜನ ದಿನನಿತ್ಯ ಏರುತ್ತಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ ಜನ ಸಾಮಾನ್ಯರಿಗೆ ತೈಲ ದರದ ಹೊರೆ ಸ್ವಲ್ಪ ಕಡಿಮೆಯಾಗಿದೆ. ಆದರೆ, ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಡಿದೆ. ಉಳಿದ ಹಲವು ಜಿಲ್ಲೆಗಳಲ್ಲಿ ಏರಿಳಿತ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂದು 1 ಲೀಟರ್ ಪೆಟ್ರೋಲ್​ ಅನ್ನು 100.58 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್​ ಅನ್ನು 85.01 ರೂ. ಗೆ ಮಾರಾಟ ಮಾಡಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ಕುರಿತ ವಿವರ ಇಲ್ಲಿದೆ.

4. Bank Strike: ಬ್ಯಾಂಕ್ ಮುಷ್ಕರದಿಂದಾಗಿ ದೇಶದ ಪ್ರಮುಖ ಬ್ಯಾಂಕ್ ಸೇವೆಗಳ ಮೇಲೆ ಬೀರಲಿರುವ ಪರಿಣಾಮಗಳೇನು?

ಈ ವಾರದಲ್ಲಿ ನಡೆಯಲಿರುವ ಎರಡು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್(Bank Strike) ಮುಷ್ಕರದಿಂದಾಗಿ ಸ್ಟೇಟ್ ಬ್ಯಾಂಕ್ ಆಫ್ (State Bank of India) ಇಂಡಿಯಾ, ಪಂಜಾಬ್ ನ್ಯಾಶನಲ್ ಬ್ಯಾಂಕ್ ( Punjab National Bank) ಹಾಗೂ ಇತರ ಬ್ಯಾಂಕ್‌ಗಳ ಸೇವೆಗಳ (Services) ಮೇಲೆ ಪರಿಣಾಮ ಬೀರಲಿದೆ. ಸಾರ್ವಜನಿಕ ವಲಯ ಬ್ಯಾಂಕ್‌ಗಳನ್ನು ಖಾಸಗಿಗೊಳಿಸುವ ಕೇಂದ್ರದ ನಿರ್ಧಾರವನ್ನು ಖಂಡಿಸಿ ಮುಷ್ಕರವನ್ನು ಕೈಗೊಳ್ಳಲಾಗಿದೆ ಈ ನಿಟ್ಟಿನಲ್ಲಿ ಬ್ಯಾಂಕ್ ಅಧಿಕಾರಿಗಳು ಹಾಗೂ ಟ್ರೇಡ್ ಯೂನಿಯನ್‌ಗಳು ಡಿಸೆಂಬರ್ (December 1 )1 ರಿಂದ ಜಂತರ್ ಮಂತರ್‌ನಲ್ಲಿ ಬ್ಯಾಂಕ್ ಬಚಾವೊ(Bank Bachao), ದೇಶ್ ಬಚಾವೊ (Desh Bachao) (ಬ್ಯಾಂಕ್ ಉಳಿಸಿ, ದೇಶ ಉಳಿಸಿ) ಎಂಬ ಅಭಿಯಾನವನ್ನು ಕೈಗೊಂಡಿವೆ.
Published by:Latha CG
First published: