Morning Digest: 6 ರಾಜ್ಯಗಳಲ್ಲಿ ಕರ್ಫ್ಯೂ ಜಾರಿ, ಚಿನ್ನದ ಬೆಲೆ ಸ್ಥಿರ, ಪೆಟ್ರೋಲ್​ ದರ ಏರಿಕೆ; ಬೆಳಗಿನ ಟಾಪ್​ ನ್ಯೂಸ್​​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
1.Karnataka Weather Today: ರಾಜ್ಯದಲ್ಲಿ ಹೆಚ್ಚಾದ ಶೀತಗಾಳಿ, ಇಂದಿನ ಹವಾಮಾನ ವರದಿ ಹೀಗಿದೆ

Karnataka Weather Report Dec 25, 2021: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಚಳಿಯ ಪ್ರಮಾಣ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಚಳಿ ಹಾಗೂ ಶೀತಗಾಳಿ ಹೆಚ್ಚಾಗುತ್ತಿದ್ದು, ಗಢ-ಗಢ ಚಳಿ(Winter)ಗೆ ಜನರು ನಡುಗುತ್ತಿದ್ದಾರೆ. ಡಿಸೆಂಬರ್(December) ಮೊದಲ ವಾರದವರೆಗೂ ಸುರಿದ ಮಳೆ ಈಗ ಕೊಂಚ ಬ್ರೇಕ್​​ ಕೊಟ್ಟಿದ್ದು, ಎಲ್ಲೆಡೆ ಶೀತಗಾಳಿ ಬೀಸುತ್ತಿದೆ. ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಂತೂ ದಟ್ಟ ಚಳಿಗೆ ಜನರು ತತ್ತರಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ (Bengaluru Weather) ಇಂದು ಗರಿಷ್ಠ 29 ಮತ್ತು ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಇನ್ನು, ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ಬೇರೆ ರಾಜ್ಯಗಳಲ್ಲಿ ವರುಣ ಇನ್ನೂ ಸಹ ತನ್ನ ಆರ್ಭಟ ನಿಲ್ಲಿಸಿಲ್ಲ. ದೇಶದ ವಿವಿಧ ರಾಜ್ಯಗಳಲ್ಲಿ ಇನ್ನೂ ಕೆಲ ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. ಬೀದರ್​​ನಲ್ಲಿ ಅತೀ ಕನಿಷ್ಠ ತಾಪಮಾನ ಅಂದರೆ 11 ಡಿಗ್ರಿ ಸೆಲ್ಸಿಯಸ್​ ದಾಖಲಾಗಲಿದೆ.

2.Omicron: ಹೆಚ್ಚುತ್ತಿರುವ ಓಮೈಕ್ರಾನ್ ಪ್ರಕರಣಗಳ ಹಿನ್ನೆಲೆ ದೇಶದ 6 ರಾಜ್ಯಗಳಲ್ಲಿ ಕರ್ಫ್ಯೂ -ಕೆಲವೆಡೆ ಸೆಕ್ಷನ್ 144 ಜಾರಿ

ದೇಶದಲ್ಲಿ ಓಮೈಕ್ರಾನ್ (Omicron) ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಹಲವಾರು ರಾಜ್ಯಗಳು (Sates) ಹೊಸ ರೂಪಾಂತರ ಸೋಂಕು ಹರಡಬಾರದು ಎನ್ನುವ ದೃಷ್ಠಿಯಿಂದ ನಿರ್ಬಂಧಗಳನ್ನು (Curfew) ಘೋಷಿಸಿದ್ದು, ಕ್ರಿಸ್‌ಮಸ್ (Christmas) ಮತ್ತು ಹೊಸ ವರ್ಷದ ಪಾರ್ಟಿಗಳ (New Year Party) ಮೇಲೆ ನಿರ್ಬಂಧ ಹೇರಿದೆ. ಭಾರತದ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 358 ಹೊಸ ರೂಪಾಂತರದ ಪ್ರಕರಣಗಳು ವರದಿಯಾಗಿದ್ದು, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಅತಿ ಹೆಚ್ಚು ಸೋಂಕು ಪ್ರಕರಣ ದೃಢಪಟ್ಟಿದೆ. ಒಬ್ಬರ ಮೂಲಕ ಮತ್ತೊಬ್ಬರಿಗೆ ಓಮೈಕ್ರಾನ್ ವೇಗವಾಗಿ ಹರಡುತ್ತಿದ್ದು, ಮತ್ತು ರೂಪಾಂತರದ ದ್ವಿಗುಣ ದರವು 1.5 ದಿನಗಳು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಶುಕ್ರವಾರ ಎಚ್ಚರಿಸಿದ್ದರಿಂದ ರಾಜ್ಯಗಳು ನಿರ್ಬಂಧ ಹೇರಿವೆ. ಯಾವ್ಯವ ರಾಜ್ಯಗಳು ನಿರ್ಬಂಧ ವಿಧಿಸಿದೆ ಎಂಬುದು ಇಲ್ಲಿದೆ.

3.Gold Price Today: ಚಿನ್ನ ಖರೀದಿಗೆ ಹೋಗ್ತಿದಿರಾ? ಹಾಗಿದ್ರೆ ಇಂದಿನ ಹಳದಿ ಲೋಹದ ಬೆಲೆ ತಿಳಿದುಕೊಳ್ಳಿ

Gold Rate on Dec 25, 2021: ಕಳೆದ ಕೆಲ ದಿನಗಳಿಂದ ಏರಿಳಿತ ಕಂಡಿದ್ದ ಚಿನ್ನದ ಬೆಲೆ(Gold Price) ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ (Bengaluru) ಸಹ ಇಂದು ಬಂಗಾರದ ಬೆಲೆ ಸ್ಥಿರವಾಗಿದೆ. ನೀವು ಚಿನ್ನ ಖರೀದಿಗೆ ಹೋಗುತ್ತಿದ್ರೆ ಇವತ್ತಿನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಇದರಿಂದ ಚಿನ್ನ (Gold) ಖರೀದಿ ಸುಲಭವಾಗಲಿದೆ. ಕಳೆದೊಂದು ವಾರದಿಂದ ಚಿನ್ನದ ಬೆಲೆ ಸಾಕಷ್ಟು ಏರಿಳಿತ ಕಾಣುತ್ತಿದೆ. ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,300 ರೂ. ಇತ್ತು. ಇಂದೂ ಸಹ ಅದೇ ಬೆಲೆಯನ್ನು ಕಾಯ್ದುಕೊಂಡಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,300 ರೂ. ಇತ್ತು. ಇಂದು ಆ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

4.Petrol Price Today: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏರಿಕೆ ಕಂಡ ಪೆಟ್ರೋಲ್​ ಬೆಲೆ, ನಿಮ್ಮ ನಗರದಲ್ಲಿ ಎಷ್ಟಿದೆ?

ಕೇಂದ್ರ (Central Government) ಹಾಗೂ ರಾಜ್ಯ ಸರ್ಕಾರದ (State Government) ದೀಪಾವಳಿ ಕೊಡುಗೆಯಾಗಿ ಪೆಟ್ರೋಲ್‌, ಡೀಸೆಲ್‌ (Petrol and Diesel) ಮೇಲಿನ ಸುಂಕವನ್ನು ಕಡಿತಗೊಳಿಸಿದ್ದವು. ಇದರ ಪರಿಣಾಮವಾಗಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ (Rate) ಕೊಂಚ ಇಳಿಕೆಯಾಗಿದೆ. ಎಲ್​ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿದ್ದ ಜನ ದಿನನಿತ್ಯ ಏರುತ್ತಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ ಜನ ಸಾಮಾನ್ಯರಿಗೆ ತೈಲ ದರದ ಹೊರೆ ಸ್ವಲ್ಪ ಕಡಿಮೆಯಾಗಿದೆ. ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಯಥಾಸ್ಥಿತಿ. ಉಳಿದ ಹಲವು ಜಿಲ್ಲೆಗಳಲ್ಲಿ ಏರಿಳಿತ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂದು 1 ಲೀಟರ್ ಪೆಟ್ರೋಲ್​ ಅನ್ನು 100.58 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್​ ಅನ್ನು 85.01 ರೂ. ಗೆ ಮಾರಾಟ ಮಾಡಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ಕುರಿತ ವಿವರ ಇಲ್ಲಿದೆ.
Published by:Latha CG
First published: