Morning Digest: ಇಂದು ವೈಕುಂಠ ಏಕಾದಶಿ, ಈ ಜಿಲ್ಲೆಗಳಲ್ಲಿ ಮಳೆ, ಚಿನ್ನದ ಬೆಲೆ ಏರಿಕೆ; ಬೆಳಗಿನ ಟಾಪ್ ನ್ಯೂಸ್​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
1.Karnataka Weather Today: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

Karnataka Weather Today: ಕರ್ನಾಟಕದಲ್ಲಿ(Karnataka) ಸ್ವಲ್ಪ ಮಟ್ಟಿಗೆ ಬಿಡುವು ಕೊಟ್ಟಿದ್ದ ಮಳೆರಾಯ(Rain) ಮತ್ತೆ ತನ್ನ ಆರ್ಭಟ ತೋರಿಸಲು ಸಜ್ಜಾದಂತಿದೆ. ಇಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಇನ್ನೂ 3 ದಿನ ಕರ್ನಾಟಕದ ಉತ್ತರ ಒಳನಾಡು(NIK) ಮತ್ತು ದಕ್ಷಿಣ ಒಳನಾಡಿನಲ್ಲಿ(SIK) ಮಳೆಯಾಗಲಿದೆ. ಅದರಲ್ಲೂ ಇಂದು ಮತ್ತು ನಾಳೆ ಸಿಲಿಕಾನ್​ ಸಿಟಿ ಬೆಂಗಳೂರು(Bengaluru) ಸೇರಿದಂತೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು IMD ಹೇಳಿದೆ. ಅಂತೆಯೇ ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಬಳ್ಳಾಪುರ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರದಲ್ಲಿಯೂ ಮಳೆಯ(Rainfall) ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿದು ಬಂದಿದೆ.

2.Gold Price Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್‌, ಇಂದು ದುಬಾರಿಯಾಯ್ತು ಚಿನ್ನದ ದರ

Gold Rate on Jan 13, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಇಂದು ಬಂಗಾರದ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,590 ರೂ. ಇತ್ತು. ಇಂದು 350 ರೂ. ಹೆಚ್ಚಾಗಿ 46,940 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,590 ರೂ. ಇತ್ತು. ಇಂದು 350 ರೂ. ಹೆಚ್ಚಾಗಿ 48,940 ರೂ. ಆಗಿದೆ.

3. Petrol Price Today: ಏರಿಕೆ ಕಂಡ ತೈಲ ದರ- ನಿಮ್ಮ ನಗರದಲ್ಲಿ ಪೆಟ್ರೋಲ್, ಡೀಸೆಲ್​ ದರ ಹೀಗಿದೆ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಪೆಟ್ರೋಲ್‌, ಡೀಸೆಲ್‌ ಮೇಲಿನ ಸುಂಕವನ್ನು ಕಡಿತಗೊಳಿಸಿದ್ದವು. ಇದರ ಪರಿಣಾಮವಾಗಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಎಲ್​ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿದ್ದ ಜನ ದಿನನಿತ್ಯ ಏರುತ್ತಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ ಜನ ಸಾಮಾನ್ಯರಿಗೆ ತೈಲ ದರದ ಹೊರೆ ಸ್ವಲ್ಪ ಕಡಿಮೆಯಾಗಿದೆ. ಆದರೆ, ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಡಿದೆ. ಉಳಿದ ಹಲವು ಜಿಲ್ಲೆಗಳಲ್ಲಿ ಏರಿಳಿತ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂದು 1 ಲೀಟರ್ ಪೆಟ್ರೋಲ್​ ಅನ್ನು 100.58 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್​ ಅನ್ನು 85.01 ರೂ. ಗೆ ಮಾರಾಟ ಮಾಡಲಾಗುತ್ತಿದೆ.

4.Vaikunta Ekadasi 2022: ಇಂದು ಎಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ, ದೇವಾಲಯಗಳಲ್ಲಿ ವಿಶೇಷ ಪೂಜೆ

Vaikunta Ekadasi 2022: ಬೆಂಗಳೂರು(ಜ.13): ಇಂದು ರಾಜ್ಯದೆಲ್ಲೆಡೆ ವೈಕುಂಠ ಏಕಾದಶಿಯ(Vaikunta Ekadasi) ಸಂಭ್ರಮ. ಹೀಗಾಗಿ ಹಲವು ದೇವಸ್ಥಾನಗಳಲ್ಲಿ(Temples) ವಿಶೇಷ ಪೂಜಾ ಕೈಂಕರ್ಯಗಳು(Special Pooja) ನಡೆಯುತ್ತಿವೆ. ಕೊರೋನಾ-ಓಮೈಕ್ರಾನ್​​(Corona-Omicron) ಆತಂಕದ ನಡುವೆಯೂ ವೈಕುಂಠ ಏಕಾದಶಿ ಸಂಭ್ರಮ ಹೆಚ್ಚಾಗಿದೆ.  ವೈಯಾಲಿಕಾವಲ್​​ನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಮಧ್ಯರಾತ್ರಿ 1:30 ಕ್ಕೆ ದೇಗುಲವನ್ನು ತೆರೆಯಲಾಗಿದೆ. ಸುಪ್ರಭಾತ, ತೋಮಾಲ ಸೇವಾ, 3 ಗಂಟೆಗೆ ಮೊದಲ ನೈವೇದ್ಯ, 4 ಗಂಟೆಗೆ ಅಸ್ತನಾಮ್ ಪೂಜೆ, ವೈಕುಂಠ ದ್ವಾರ ಪೂಜೆ , 5 ಗಂಟೆಗೆ ವೈಕುಂಠ ದ್ವಾರ ಓಪನ್ ಮಾಡಲಾಗಿದೆ.

5.Covid-19 Surge: ಕೊರೋನಾ ಹೆಚ್ಚಳ ಹಿನ್ನೆಲೆ, ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

ನವದೆಹಲಿ(ಜ. 13): ಕೋವಿಡ್ ‌-19 (Covid-19) ಮತ್ತು ಓಮೈಕ್ರಾನ್ (Omicron) ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಈ ಸೋಂಕು ಇನ್ನಷ್ಟು ತೀವ್ರವಾಗಿ ಹರಡಲಿದೆ ಎಂಬ ಮಾತುಗಳು ಕೂಡ ಆರೋಗ್ಯ ಕ್ಷೇತ್ರದ ತಜ್ಞರಿಂದ (Health Experts) ಕೇಳಿಬರುತ್ತಿದೆ. ಕೊರೋನಾ ಮೂರನೇ ಅಲೆ (Corona Third Wave) ತೀವ್ರವಾಗಿ ಅಪ್ಪಳಿಸಿ ಅಪಾರ ಪ್ರಮಾಣದ ದುಷ್ಪರಿಣಾಮ ಬೀರಲಿದೆ ಎಂಬ ಭಯ ಕೂಡ ಸೃಷ್ಟಿಯಾಗಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendra Modi) ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ (Chief Ministers Meet) ಕರೆದಿದ್ದಾರೆ.
Published by:Latha CG
First published: