Morning Digest: ರೈಲು ಹಳಿ ತಪ್ಪಿ 8 ಮಂದಿ ಸಾವು, ಚಿನ್ನ & ಪೆಟ್ರೋಲ್ ಬೆಲೆಯಲ್ಲಿ ಏರಿಕೆ; ಬೆಳಗಿನ ಟಾಪ್​ ನ್ಯೂಸ್​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1.Train Accident: ಪಶ್ಚಿಮ ಬಂಗಾಳದಲ್ಲಿ ಹಳಿ ತಪ್ಪಿದ ರೈಲು, ಸಾವಿನ ಸಂಖ್ಯೆ 8ಕ್ಕೆ ಏರಿಕೆ, ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

  Train Accident: ಪಶ್ಚಿಮ ಬಂಗಾಳದಲ್ಲಿ(West Bengal) ಸಂಭವಿಸಿದ ರೈಲು ಅಪಘಾತದಲ್ಲಿ(Train Accident) ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಗುರುವಾರ ಗುವಾಹಟಿ-ಬಿಕಾನೇರ್​​ ಎಕ್ಸ್​​ಪ್ರೆಸ್​ ರೈಲು ಜಲ್ಪೈಗುರಿ ಜಿಲ್ಲೆಯ ಮಾಯ್ನಾಗುರಿ ನಗರದ ಬಳಿ ಹಳಿ ತಪ್ಪಿತ್ತು. ಸುಮಾರು 12 ಬೋಗಿಗಳು ಹಳಿತಪ್ಪಿ ಸುಮಾರು 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಹಲವು ಪ್ರಯಾಣಿಕರು ರೈಲಿನೊಳಗೆ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಸಾಗುತ್ತಿದೆ. ಘಟನೆಯಲ್ಲಿ ಸುಮಾರು 45 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ(PTI) ಹೇಳಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

  2.Karnataka Weather Report: ದಟ್ಟವಾದ ಮಂಜಿನ ಜೊತೆ ಇಬ್ಬನಿ; ಇನ್ನುಳಿದ ಭಾಗಗಳಲ್ಲಿ ಒಣ ಹವೆ

  Karnataka Weather Report: ರಾಜ್ಯದಲ್ಲಿಯ ಹವಾಮಾನ ದಿನದಿಂದ ದಿನಕ್ಕೆ ಬದಲಾಗುತ್ತಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ದಟ್ಟವಾದ ಮಂಜು ಮತ್ತು ಬೆಳಗಿನ ಜಾವ ಇಬ್ಬನಿ ಸಹ ಬೀಳುತ್ತಿದೆ. ಇದರ ನಡುವೆ ಬೆಂಗಳೂರು (Bengaluru Weather) ಸೇರಿದಂತೆ ಮೈಸೂರು ಭಾಗದ ಕೆಲವು ಕಡೆ ಮೋಡ ಕವಿದ ವಾತಾವರಣದ (Cloudy Weather) ಜೊತೆ ಚಳಿ (Winter) ಸಹ ಇದೆ. ಇನ್ನು ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಬೀದರ್, ಯಾದಗಿರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಇರಲಿದೆ. ಎಂದಿನಂತೆ ಬೆಳಗ್ಗೆ ಚಳಿ(Cold)ಯಿಂದ ಕೂಡಿದ ವಾತಾವರಣ ಇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 28 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi Weather)ವಾತಾವರಣ 10 ಡಿಗ್ರಿ ಸೆಲ್ಸಿಯಸ್ ಗಿಂತಲೂ ಕಡಿಮೆ ದಾಖಲಾಗುತ್ತಿದ್ದು, ದಟ್ಟವಾದ ಮಂಜು ಬೆಳಗ್ಗೆ ಟ್ರಾಫಿಕ್​ ಸಮಸ್ಯೆಗೆ ಕಾರಣವಾಗುತ್ತಿದೆ.

  3.Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್​

  ಕೊರೋನಾ(Corona) ಮಹಾಮಾರಿಯ ಕಾಟ ಅಧಿಕವಾಗಿದೆ. ಮನೆಯಿಂದ(Home) ಆಚೆ ಬರಲು ಭಯ ಪಡುವ ವಾತಾವಾರಣ ನಿರ್ಮಾಣವಾಗಿದೆ. ಇತ್ತ ಕಚೇರಿಗಳಿಗೆ(Office) ಹೋಗಿ ಕೆಲಸ ಮಾಡುವವರು ಕೊರೋನಾ ಹಾಗೂ ಓಮಿಕ್ರಾನ್(Omicron) ಮಹಾಮಾರಿಯಿಂದ ವರ್ಕ್ ಫ್ರಮ್ ಹೋಮ್(Work From Home) ಕೆಲಸವೇ ಬೆಸ್ಟ್ ಎಂದು ಮನೆಯಲ್ಲಿಯೇ ಕೆಲಸ ನಿರ್ವಹಣೆ ಮಾಡುತ್ತಿದ್ದಾರೆ. ಮಕ್ಕಳು ಸಹ ಶಾಲೆಗೆ ಹೋಗೋದಕ್ಕಿಂತ ಆನ್ ಲೈನ್ ಕ್ಲಾಸ್(Online Class) ಉತ್ತಮ ಎಂದು ಕೊಂಡು ಮನೆಯಲ್ಲಿಯೇ ಆನ್ ಲೈನ್ ಕ್ಲಾಸ್ ಕೇಳಲು ಸಿದ್ದರಾಗಿದ್ದಾರೆ.. ಕೊರೋನಾ ಇರೋದ್ರಿಂದ್ದ ಹೇಗಿದ್ರು ಮನೆಯಿಂದ ಹೊರಗೆ ಹೋಗೋದಕ್ಕೆ ಆಗೋದಿಲ್ಲ ಹೀಗಾಗಿ ಬೆಳಗ್ಗೆ 10 ಗಂಟೆಯೊಳಗೆ ಮನೆ ಕೆಲಸ ಮುಗಿಸಿ ಸೀರಿಯಲ್(Serial) ನೋಡ್ಬೆಕು ಅಂತ ಅಂದುಕೊಂಡು ನಾನಾ ಪ್ಲಾನ್ ಮಾಡಿರೋ ಜನಗಳಿಗೆ ಎಂದಿನಂತೆ ಬೆಸ್ಕಾಂ(BESCOM) ಶಾಕ್ ನೀಡಲು ಮುಂದಾಗಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಈ ಕುರಿತು ಮಾಹಿತಿ ನೀಡಿದ್ದು, ನಿರ್ವಹಣೆ ಮತ್ತು ಇತರ ಕಾರಣಗಳಿಂದಾಗಿ ವಿದ್ಯುತ್ ಕಡಿತ ಉಂಟಾಗಲಿದೆ ಎಂದಿದೆ.

  4.Gold And Silver Price Today: ಚಿನ್ನದ ಬೆಲೆಯಲ್ಲಿ 160 ಏರಿಕೆ; ಒಂದು ಕೆಜಿ ಬೆಳ್ಳಿಯಲ್ಲಿ 3 ಸಾವಿರ ಇಳಿಕೆ: ಇಲ್ಲಿದೆ ಇವತ್ತಿನ ದರ

  Gold Rate on Jan 14, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಇಂದು ಬಂಗಾರದ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,940 ರೂ. ಇತ್ತು. ಇಂದು 160 ರೂ. ಹೆಚ್ಚಾಗಿ 47,100 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,940 ರೂ. ಇತ್ತು. ಇಂದು 160 ರೂ. ಹೆಚ್ಚಾಗಿ 49,100 ರೂ. ಆಗಿದೆ.

  5.Petrol And Diesel Price Today: ಇಂದು ಈ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ₹ 2.11 ಇಳಿಕೆ: ನಿಮ್ಮ ನಗರದ ಬೆಲೆ ಎಷ್ಟಿದೆ ಗೊತ್ತಾ?

  Petrol And Diesel Price Today: ಕೇಂದ್ರ ಹಾಗೂ ರಾಜ್ಯ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಪೆಟ್ರೋಲ್‌, ಡೀಸೆಲ್‌ ಮೇಲಿನ ಸುಂಕವನ್ನು ಕಡಿತಗೊಳಿಸಿದ್ದವು. ಇದರ ಪರಿಣಾಮವಾಗಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಎಲ್​ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿದ್ದ ಜನ ದಿನನಿತ್ಯ ಏರುತ್ತಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ ಜನ ಸಾಮಾನ್ಯರಿಗೆ ತೈಲ ದರದ ಹೊರೆ ಸ್ವಲ್ಪ ಕಡಿಮೆಯಾಗಿದೆ. ಆದರೆ, ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಡಿದೆ. ಉಳಿದ ಹಲವು ಜಿಲ್ಲೆಗಳಲ್ಲಿ ಏರಿಳಿತ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂದು 1 ಲೀಟರ್ ಪೆಟ್ರೋಲ್​ ಅನ್ನು 100.58 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್​ ಅನ್ನು 85.01 ರೂ. ಗೆ ಮಾರಾಟ ಮಾಡಲಾಗುತ್ತಿದೆ.
  Published by:Latha CG
  First published: