• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Morning Digest: ದಾವೋಸ್ ಅಜೆಂಡಾ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ, ರೌಡಿಶೀಟರ್ ಕಾಲಿಗೆ ಗುಂಡೇಟು, ಬೆಳಗಿನ ಟಾಪ್ ನ್ಯೂಸ್​ಗಳು

Morning Digest: ದಾವೋಸ್ ಅಜೆಂಡಾ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ, ರೌಡಿಶೀಟರ್ ಕಾಲಿಗೆ ಗುಂಡೇಟು, ಬೆಳಗಿನ ಟಾಪ್ ನ್ಯೂಸ್​ಗಳು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

  • Share this:

1.Gold Price Today: ಮಕ್ಕಳ ಮದುವೆಗೆ ಚಿನ್ನ ಖರೀದಿಸುವ ಪ್ಲಾನ್ ಇದೆಯಾ? ಅಂಗಡಿ ತೆರೆಯುವ ಮೊದಲು ಇವತ್ತಿನ ಬೆಲೆ ತಿಳಿದುಕೊಳ್ಳಿ


Gold Rate on Jan 17, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಬಂಗಾರದ ಬೆಲೆ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,080 ರೂ. ಇತ್ತು. ಇಂದು 10 ರೂ. ಹೆಚ್ಚಾಗಿ 47,090 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,080 ರೂ. ಇತ್ತು. ಇಂದು 10 ರೂ. ಹೆಚ್ಚಾಗಿ 49,090 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ದರ ಎಷ್ಟಿದೆ ಎಂಬುದನ್ನು ಇಲ್ಲಿ ನೋಡೋಣ.


2.WEF: ಇಂದು ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಅಜೆಂಡಾ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ


ಪ್ರಧಾನಿ ನರೇಂದ್ರ ಮೋದಿಯವರು(PM Narendra Modi) ಇಂದು ವಿಶ್ವ ಆರ್ಥಿಕ ವೇದಿಕೆಯ(World Economic Forum) ದಾವೋಸ್ ಅಜೆಂಡಾ ಸಭೆಯನ್ನು(Davos Agenda Virtual Event) ಉದ್ದೇಶಿಸಿ ಮಾತನಾಡಲಿದ್ದಾರೆ. ಕೊರೋನಾ ಮತ್ತು ಓಮೈಕ್ರಾನ್ ಕಾರಣದಿಂದಾಗಿ ಸತತ ಎರಡನೇ ಬಾರಿಯೂ ಸಹ ವಿಶ್ವ ಆರ್ಥಿಕ ದಾವೋಸ್ ಅಜೆಂಡಾ ಸಭೆ ವರ್ಚುಯಲ್ ಆಗಿ ನಡೆಯುತ್ತಿದೆ. ಈ ಸಭೆಯು ಇಂದಿನಿಂದ ಜನವರಿ 21ರವರೆಗೆ ನಡೆಯಲಿದೆ. ಉದ್ಘಾಟನಾ ದಿನವಾದ (Inauguration Day) ಇಂದು ಪ್ರಧಾನಿ ಮೋದಿ ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಅಜೆಂಡಾ ವರ್ಚುಯಲ್​ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅನೇಕ ಜಾಗತಿಕ ನಾಯಕರು(World Leaders) ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.


3.Corona Virus: ಇಂದು ಸಂಜೆ ಸಿಎಂ‌ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಿದ್ಧತೆ ಕುರಿತು ಸಭೆ


ಫೆಬ್ರವರಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹಿನ್ನೆಲೆ ಇಂದು ಸಂಜೆ 4 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕೋವಿಡ್ ಸಿದ್ಧತೆಯ ಕುರಿತು ಚರ್ಚೆಗಳು ನಡೆಯಲಿವೆ. ಮುಖ್ಯಮಂತ್ರಿಗಳಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ವರ್ಚುವಲ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಆರೋಗ್ಯ ಸಚಿವ ಸುಧಾಕರ್, ಆರ್ ಅಶೋಕ್, ಅಶ್ವಥ್ ನಾರಾಯಣ, ಗೃಹ ಸಚಿವ ಆರಗ ಜ್ಞಾನೇಂದ್ರ, ಬಿ ಸಿ ನಾಗೇಶ್ ಸೇರಿದಂತೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ಹಾಗೂ ಬಿಬಿಎಂಪಿ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.


4.Karnataka Weather Report: ಮಲೆನಾಡು ಭಾಗದಲ್ಲಿ ದಟ್ಟವಾದ ಮಂಜು; ಈ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ


Karnataka Weather Today: ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಹವಾಮಾನದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಎಂದಿನಂತೆ ಮೈಸೂರು ಭಾಗದಲ್ಲಿ ಚಳಿಯ ವಾತಾವರಣದ (Cold Weather) ಜೊತೆ ಒಣ ಹವೆ ಇರಲಿದೆ. ಇನ್ನುಳಿದಂತೆ ಉತ್ತರ ಕರ್ನಾಟಕದ (North Karnataka) ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ (Cloudy Weather) ಇರಲಿದ್ದು, ಸಣ್ಣ ಸುಳಿಗಾಳಿ (Cold Wave) ಹಿರಿಯ ಜನರನ್ನು ಮನೆಯಲ್ಲಿ ಕೂರುವಂತೆ ಮಾಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಮಲೆನಾಡು ಭಾಗದಲ್ಲಿ ದಟ್ಟವಾದ ಮಂಜು ಕಾಣಿಸಿಕೊಳ್ಳುತ್ತಿದೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ (Bengaluru Weather) ಗರಿಷ್ಠ 27 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.


5.Bengaluru: ಬೆಳ್ಳಂ‌ಬೆಳಗ್ಗೆ ರೌಡಿಶೀಟರ್ ಕಾಲು ಸೀಳಿದ ಪೊಲೀಸರ ಗುಂಡು


ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿದೆ. ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವ ಆರೋಪಗಳು ರಾಹುಲ್ ಮೇಲಿವೆ. ಇಂದು ಬೆಳಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ರಾಹುಲ್ ಬಂಧನಕ್ಕೆ ಹನುಮಂತನಗರ ಪೊಲೀಸರು ತೆರಳಿದ್ದರು.

Published by:Latha CG
First published: