Morning Digest: ಈ ರಾಜ್ಯಗಳಲ್ಲಿ ಹಿಮಪಾತ-ಮಳೆ, ಬೆಂಗಳೂರಿನಲ್ಲಿ ಪವರ್ ಕಟ್, ಚಿನ್ನದ ಬೆಲೆ ಏರಿಕೆ; ಬೆಳಗಿನ ಟಾಪ್ ನ್ಯೂಸ್​​​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
1.Karnataka Weather Today: ಕರ್ನಾಟಕದಲ್ಲಿ ಹೆಚ್ಚಿದ ಚಳಿ, ಈ ರಾಜ್ಯಗಳಲ್ಲಿ ಶೀತಗಾಳಿ, ಮಳೆ ಜೊತೆಗೆ ಹಿಮಪಾತ

ಮುಂದಿನ 24 ಗಂಟೆಗಳಲ್ಲಿ ಉತ್ತರ ಪ್ರದೇಶ ಮತ್ತು ಪಂಜಾಬ್​ನ ಹಲವು ಪ್ರದೇಶಗಳಲ್ಲಿ ಶೀತಗಾಳಿ ಇರಲಿದೆ. ಅರುಣಾಚಲ ಪ್ರದೇಶದ ಕೆಲ ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೊತೆಗೆ ಸಿಕ್ಕಿಂ ಹಾಗೂ ಈಶಾನ್ಯ ಭಾಗದ ರಾಜ್ಯಗಳಲ್ಲಿ ಲಘು ಮಳೆಯಾಗಲಿದೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಹಗುರ ಮಳೆಯ ಜೊತೆಗೆ ಹಿಮಪಾತ ಆಗುವ ಸಾಧ್ಯತೆ ಇದೆ IMD ಮುನ್ಸೂಚನೆ ನೀಡಿದೆ. ಇನ್ನು, ಆಂಧ್ರಪ್ರದೇಶದ ಕರಾವಳಿ, ರಾಯಲ್​ಸೀಮಾ, ತಮಿಳುನಾಡು, ಕೇರಳ ಹಾಗೂ ಅಂಡಮಾನ್​ & ನಿಕೋಬಾರ್​​ನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

2.ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ BK Hariprasad ನೇಮಕ

ನವದೆಹಲಿ, (ಜ. 27): ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ನಿರ್ಮಾಣವಾಗುತ್ತಿದೆ. ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗುತ್ತಿರುವುದರ ನಡುವೆ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ (Former Chief Minister and Opposition Leader Siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (KPCC President D.K.Shivakumar) ಮಧ್ಯೆ ಮುಖ್ಯಮಂತ್ರಿ ಆಗಲು ಪೈಪೋಟಿ ಕೂಡ ಶುರುವಾಗಿದೆ. ಈ ನಡುವೆ ಪಕ್ಷದ ಹಿರಿಯ ಮುಖಂಡ, ಲಿಂಗಾಯತ ಸಮುದಾಯದ ಮುಂಚೂಣಿ ನಾಯಕ, ಉತ್ತರ ಕರ್ನಾಟಕ ಮೂಲದ ಎಂ.ಬಿ. ಪಾಟೀಲ್ ಅವರನ್ನು ನಿನ್ನೆ (ಜನವರಿ 25ರಂದು) ಕೆಪಿಸಿಸಿ ಪ್ರಚಾರ ಸಮಿತಿ (Campaigning Committee) ಅಧ್ಯಕ್ಷರನ್ನಾಗಿ ನೇಮಿಸಿದ್ದ ಕಾಂಗ್ರೆಸ್ ಹೈಕಮಾಂಡ್ (Congress High Command) ಇಂದು ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರನ್ನಾಗಿ ಹಿರಿಯ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಅವರನ್ನು ನೇಮಕ ಮಾಡಿದೆ.

3.Gold Price Today: ದೇಶದಲ್ಲಿ ಹೆಚ್ಚಾದ ಚಿನ್ನ, ಬೆಳ್ಳಿ ದರ; ನಿಮ್ಮ ನಗರದಲ್ಲಿ ಎಷ್ಟಿದೆ ರೇಟು?

Gold Rate on Jan 27, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಇಂದು ಬಂಗಾರದ ಬೆಲೆ ಹೆಚ್ಚಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇತ್ತು. ಇಂದು 150 ರೂ. ಹೆಚ್ಚಾಗಿ 47,900 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,680 ರೂ. ಇತ್ತು. ಇಂದು 150 ರೂ. ಹೆಚ್ಚಾಗಿ 49,830 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ(Gold-Silver Rate) ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..

4.Bengaluru Power Cut: ಬೆಂಗಳೂರಿಗರಿಗೆ ಬೆಸ್ಕಾಂ ಶಾಕ್- ಇಂದು ಈ ಏರಿಯಾಗಳಲ್ಲಿ ವಿದ್ಯುತ್​ ವ್ಯತ್ಯಯ

ಕೊರೋನಾ(Corona) ಮಹಾಮಾರಿ ಓಮಿಕ್ರಾನ್(Omicron) ಹೆಸರಲ್ಲಿ ತನ್ನ ಆರ್ಭಟವನ್ನ ಮತ್ತೆ ಶುರು ಮಾಡಿದೆ. ರಾಜ್ಯದಲ್ಲಿ(State) ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರಕರಣಗಳು(Case) ಪತ್ತೆಯಾಗುತ್ತಿವೆ. ಜನರು ಮನೆಯಿಂದ(Home) ಆಚೆ ಹೋಗಲು ಭಯ(Fear) ಪಡುವ ವಾತವಾರಣ ನಿರ್ಮಾಣವಾಗಿದೆ. ಅದ್ರಲ್ಲೂ ರಾಜಧಾನಿ (Capital)ಬೆಂಗಳೂರಿನ(Bengaluru) ಪರಿಸ್ಥಿತಿ ನಿಜಕ್ಕೂ ಬೆಚ್ಚಿ ಬೀಳುವಂತಿದ್ದು ಜನ ಮನೆಯಿಂದ ಕಾಲಿಡಲು ಹಿಂದೆ-ಮುಂದೆ ನೋಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಮನೆಯಲ್ಲಿ ನೆಮ್ಮದಿಯಾಗಿ ಕಾಲ ಕಳೆಯೋಣಾ ಎಂದು ಬೆಂಗಳೂರಿನ ಜನರು ಅಂದುಕೊಳ್ಳುತ್ತಿರುವ ಸಮಯದಲ್ಲಿ ಬೆಸ್ಕಾಂ(BESCOM) ಎಂದಿನಂತೆ ಶಾಕ್ ನೀಡಿದ್ದು, ಇಂದು ಬೆಂಗಳೂರಿನ ಹಲವೆಡೆ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಡಿತಗೊಳಿಸುತ್ತಿದೆ.

5.ಗೂಗಲ್​​ ಸಿಇಒ Sundar Pichai ವಿರುದ್ಧ ಮುಂಬೈನಲ್ಲಿ ಪ್ರಕರಣ ದಾಖಲು

ಕೃತಿಸ್ವಾಮ್ಯ ಕಾಯ್ದೆ (Copy Right violation) ಉಲ್ಲಂಘನೆ ಆರೋಪದ ಮೇಲೆ ಮುಂಬೈ ಪೊಲೀಸರು ಗೂಗಲ್ ಸಿಇಒ ಸುಂದರ್ ಪಿಚೈ (Google CEO Sundar Pichai) ಮತ್ತು ಇತರ ಐವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ, ಹಕ್ಕುಸ್ವಾಮ್ಯ ಕಾಯ್ದೆ ಉಲ್ಲಂಘನೆಗಾಗಿ ಪ್ರಕರಣ ದಾಖಲಿಸಲಾಗಿದೆ ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು ಇತರ ಐವರು ಕಂಪನಿ ಅಧಿಕಾರಿಗಳ ವಿರುದ್ಧ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
Published by:Latha CG
First published: