Morning Digest: ಕೂದಲು ರಫ್ತಿಗೆ ನಿರ್ಬಂಧ, ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್, ಚಿನ್ನದ ಬೆಲೆ ಇಳಿಕೆ, ಬೆಳಗಿನ ಟಾಪ್​ ನ್ಯೂಸ್​​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
1.Karnataka Weather Today: ಇಂದು ಹಲವೆಡೆ ಹಗುರ ಮಳೆ ಸಾಧ್ಯತೆ, ಕರ್ನಾಟಕದ ಹವಾಮಾನ ವರದಿ ಹೀಗಿದೆ

Karnataka Weather Forecast Jan 29th 2022: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಲೇ ಇದೆ. ರಾಜಧಾನಿ ಬೆಂಗಳೂರಿನಲ್ಲಿ (Bengaluru Weather) ಇಂದು ಗರಿಷ್ಠ 28 ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಕರಾವಳಿ ಭಾಗದಲ್ಲಿ(Coastal Area) ಒಣ ಹವೆ ಇರಲಿದೆ. ಚಳಿ ಹೆಚ್ಚಾಗಿರುವ ಹಿನ್ನೆಲೆ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ವಿಶೇಷವಾಗಿ ಬಿಸಿಲು ನಾಡು ಜಿಲ್ಲೆಗಳಲ್ಲಿ ಚಳಿಯ (Winter) ಪ್ರಮಾಣ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಇನ್ನು ಬದಲಾಗುತ್ತಿರುವ ಹವಾಮಾನದಿಂದಾಗಿ ಶೀತ ಸಂಬಂಧಿತ ರೋಗಗಳಿಂದ (Cold Fever) ಜನರು ಬಳಲತೊಡಗಿದ್ದಾರೆ. ಉತ್ತರ ಕರ್ನಾಟಕದ (North Karnataka) ಬೀದರ್, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ದಟ್ಟವಾದ ಮಂಜಿನ ಜೊತೆ ಇಬ್ಬನಿ ಬೀಳುತ್ತಿದೆ. ಕರ್ನಾಟಕದಲ್ಲಿ ವರುಣ ತನ್ನ ಆರ್ಭಟ ನಿಲ್ಲಿಸಿದ್ದರೂ, ಭಾರತದ ಹಲವೆಡೆ ಇನ್ನೂ ಸಹ ಮಳೆಯಾಗುತ್ತಿದೆ. ಹಿಮಪಾತ, ದಟ್ಟ ಮಂಜಿನ ಜೊತೆಗೆ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ.

2.Gold Price Today: ಮತ್ತಷ್ಟು ಇಳಿಕೆಯಾದ ಚಿನ್ನದ ಬೆಲೆ, ಇಂದೇ ಖರೀದಿಗೆ ಹೋಗಿ

Gold Rate on Jan 29, 2022: ದೇಶದಲ್ಲಿ ನಿನ್ನೆಯಿಂದ ಚಿನ್ನದ ಬೆಲೆ (Gold Price)ಯಲ್ಲಿ ಇಳಿಕೆಯಾಗುತ್ತಿದೆ. ಬೆಂಗಳೂರಿನಲ್ಲಿ (Bengaluru) ಸಹ ಇಂದು ಬಂಗಾರದ ಬೆಲೆ ಕಡಿಮೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,500 ರೂ. ಇತ್ತು. ಇಂದು 350 ರೂ. ಕಡಿಮೆಯಾಗಿ 45,150 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,640 ರೂ. ಇತ್ತು. ಇಂದು 390 ರೂ. ಕಡಿಮೆಯಾಗಿ 49,250 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ.

3.Power Cut: ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ.. ನಿಮ್ಮ ಏರಿಯಾ ಕೂಡ ಇದ್ಯಾ ಒಮ್ಮೆ ನೋಡಿ

ಕೊರೋನಾ(Corona) ಮಹಾಮಾರಿ ಓಮಿಕ್ರಾನ್(Omicron) ಹೆಸರಲ್ಲಿ ತನ್ನ ಆರ್ಭಟವನ್ನ ಮತ್ತೆ ಶುರು ಮಾಡಿದೆ. ರಾಜ್ಯದಲ್ಲಿ(State) ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರಕರಣಗಳು(Case) ಪತ್ತೆಯಾಗುತ್ತಿವೆ. ಜನರು ಮನೆಯಿಂದ(Home) ಆಚೆ ಹೋಗಲು ಭಯ(Fear) ಪಡುವ ವಾತವಾರಣ ನಿರ್ಮಾಣವಾಗಿದೆ. ಅದ್ರಲ್ಲೂ ರಾಜಧಾನಿ (Capital)ಬೆಂಗಳೂರಿನ(Bengaluru) ಪರಿಸ್ಥಿತಿ ನಿಜಕ್ಕೂ ಬೆಚ್ಚಿ ಬೀಳುವಂತಿದ್ದು ಜನ ಮನೆಯಿಂದ ಕಾಲಿಡಲು ಹಿಂದೆ-ಮುಂದೆ ನೋಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಮನೆಯಲ್ಲಿ ನೆಮ್ಮದಿಯಾಗಿ ಕಾಲ ಕಳೆಯೋಣಾ ಎಂದು ಬೆಂಗಳೂರಿನ ಜನರು ಅಂದುಕೊಳ್ಳುತ್ತಿರುವ ಸಮಯದಲ್ಲಿ ಬೆಸ್ಕಾಂ ಎಂದಿನಂತೆ ಶಾಕ್ ನೀಡಿದ್ದು, ಇಂದು ಬೆಂಗಳೂರಿನ ಹಲವೆಡೆ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಡಿತಗೊಳಿಸುತ್ತಿದೆ.

4.Hair Export: ವಿದೇಶಕ್ಕೆ ಕೂದಲು ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ: ಕೊಪ್ಪಳದಲ್ಲಿ ಮತ್ತೆ ಗರಿಗೆದರಿದ ಕೂದಲು ಉದ್ಯಮ

ಕೋವಿಡ್‌(Covid) ಸೋಂಕಿನಿಂದ ಕೂದಲು(Hair) ಉದ್ಯಮದ(Business) ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ಸಾವಿರಾರು ಕುಟುಂಬಗಳು(Family) ಬೀದಿಗೆ ಬಂದಿವೆ. ಅದ್ರಲ್ಲೂ ಕೊಪ್ಪಳದ(Koppal) ಭಾಗ್ಯನಗರದಲ್ಲಿ(Bhagyanagara) ನಡೆಯುತ್ತಿದ್ದ ಕೂದಲು ಉದ್ಯಮ ದೇಶ, ವಿದೇಶಕ್ಕೂ ರಫ್ತು (Export)ಆಗುತ್ತಿತ್ತು . ಇಲ್ಲಿನ ಶೇ.60 ರಷ್ಟು ಕುಟುಂಬಗಳು ಕೂದಲು ಉದ್ಯಮವನ್ನೇ ನಂಬಿ ಜೀವನ ಸಾಗಿಸುತ್ತಿವೆ. ಬೆಳಗ್ಗೆ ಎದ್ದ ತಕ್ಷಣವೇ ಕೂದಲು ತೆಗೆದುಕೊಂಡು ಹೋಗಿ ಹಳ್ಳದಲ್ಲಿ ಸ್ವಚ್ಛಗೊಳಿಸಿ, ಹಿಂಜುವ ಕಾಯಕದಲ್ಲಿ ತೊಡಗುತ್ತಾರೆ. ಸಂಸ್ಕರಿಸಿದ ಕೂದಲು ಸಂಗ್ರಹಿಸಿ ವಿದೇಶಗಳಿಗೆ ಕಳುಹಿಸುತ್ತಾರೆ. ಆದರೆ, ಕಳೆದ ವರ್ಷದಿಂದ ಕೋವಿಡ್‌ ಪರಿಣಾಮ ಕೂದಲು ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ವಿದೇಶಕ್ಕೆ ಮಾನವ ಕಚ್ಚಾ ಕೂದಲನ್ನು ರಫ್ತು ಮಾಡುವುದನ್ನು ನಿಷೇಧಿಸಿದೆ. ಹೀಗಾಗಿ ಕೂದಲು ಉದ್ಯಮದಿಂದಲೇ ಗುರುತಿಸಿಕೊಂಡಿದ್ದ ಕೊಪ್ಪಳದ ಭಾಗ್ಯನಗರದಲ್ಲಿ ಮತ್ತೆ ಕೂದಲು ಉದ್ಯಮ ಚಿಗುರೊಡೆದು ಸಾವಿರಾರು ಜನರಿಗೆ ಉದ್ಯೋಗ ಸಿಗುವ ಆಸೆ ಚಿಗುರೊಡೆದಿದೆ.

5.Cristiano Ronaldo: ಗೆಳತಿಯ ಹುಟ್ಟುಹಬ್ಬಕ್ಕೆ ಬುರ್ಜ್ ಖಲೀಫಾ ಮೇಲೆ ಲೇಸರ್ ಶೋ ಏರ್ಪಡಿಸಿ ಮರೆಯಲಾಗದ ಉಡುಗೊರೆ ಕೊಟ್ಟ ರೊನಾಲ್ಡೊ

ಫುಟ್ಬಾಲ್ ದಂತಕಥೆ, ಸ್ಟಾರ್ ಆಟಗಾರ ಮ್ಯಾಂಚೆಸ್ಟರ್ ಯುನೈಟೆಡ್‌ನ ಸ್ಟಾರ್ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಅವರು ತಮ್ಮ ಗೆಳತಿ ಜಾರ್ಜಿನಾ ರೋಡ್ರಿಗಸ್‌ಗೆ ಎಂದು ಮರೆಯದ ಜನ್ಮದಿನದ ಉಡುಗೊರೆಯನ್ನೇ ನೀಡಿದ್ದಾರೆ.. ವಿಶ್ವದ ಅತಿ ಹೆಚ್ಚು ಎತ್ತರವಾದ ಕಟ್ಟಡ ಎಂಬ ಖ್ಯಾತಿಗೆ ಪಾತ್ರವಾಗಿರುವ ದುಬೈ ಬುರ್ಜ್ ಖಲೀಫಾ ಮೇಲೆ ತಮ್ಮ ಮಡದಿಯ ಲೇಸರ್ ಶೋ ವನ್ನ ಲಕ್ಷ ಲಕ್ಷ ರೂಪಾಯಿ ಖರ್ಚು ಮಾಡಿ ಏರ್ಪಡಿಸುವ ಮೂಲಕ ಹುಟ್ಟುಹಬ್ಬಕ್ಕೆ ಮರೆಯಲಾಗದ ಉಡುಗೊರೆಯನ್ನು ಕ್ರಿಸ್ಚಿಯಾನೋ ರೋನಾಲ್ಡೋ ನೀಡಿದ್ದಾರೆ..
Published by:Latha CG
First published: