• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Medical In Hindi: ಮೆಡಿಕಲ್ ಪ್ರಿಸ್ಕ್ರಿಪ್ಷನ್ ಮೇಲೆ ಶ್ರೀ ಹರಿ ಎಂದು ಬರೆಯಬಹುದು! ಶಿವರಾಜ್ ಸಿಂಗ್ ಚೌಹಾಣ್ ಸಲಹೆ

Medical In Hindi: ಮೆಡಿಕಲ್ ಪ್ರಿಸ್ಕ್ರಿಪ್ಷನ್ ಮೇಲೆ ಶ್ರೀ ಹರಿ ಎಂದು ಬರೆಯಬಹುದು! ಶಿವರಾಜ್ ಸಿಂಗ್ ಚೌಹಾಣ್ ಸಲಹೆ

ಶಿವರಾಜ್ ಸಿಂಗ್ ಚೌಹಾಣ್

ಶಿವರಾಜ್ ಸಿಂಗ್ ಚೌಹಾಣ್

ಹಿಂದಿಯಲ್ಲಿ ವೈದ್ಯಕೀಯ ಶಿಕ್ಷಣ ನೀಡುವ ದೇಶದ ಮೊದಲ ರಾಜ್ಯವಾಗಿ ಮಧ್ಯಪ್ರದೇಶ ಹೊರಹೊಮ್ಮಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

ಭೋಪಾಲ್: ವೈದ್ಯರು ಪ್ರಿಸ್ಕ್ರಿಪ್ಷನ್ ಸ್ಲಿಪ್‌ಗಳ ಮೇಲ್ಭಾಗದಲ್ಲಿ 'ಶ್ರೀ ಹರಿ' ಎಂದು (Shri Hari On Prescription Slips) ಬರೆಯಬಹುದು. ಔಷಧಿಗಳ ಪಟ್ಟಿಯನ್ನು ಹಿಂದಿಯಲ್ಲಿ ಬರೆಯಬಹುದು ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಲಘು ಧಾಟಿಯಲ್ಲಿ ಸಲಹೆ ನೀಡಿದ್ದಾರೆ. ಹಿಂದಿಯಲ್ಲಿ ವೈದ್ಯಕೀಯ ಶಿಕ್ಷಣ ನೀಡುವ (Medical Education In Hindi) ಮಧ್ಯಪ್ರದೇಶ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ಕೇಂದ್ರ ಸಚಿವ ಅಮಿತ್ ಶಾ ಅವರು (Union Minister Amit Shah) ಚಾಲನೆ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು (Shivraj Singh Chouhan) ಇಂಗ್ಲಿಷ್ ಗೊತ್ತಿಲ್ಲದ ಕಾರಣ ಅನೇಕ ವಿದ್ಯಾರ್ಥಿಗಳು ವೈದ್ಯಕೀಯ ಕಾಲೇಜುಗಳನ್ನು ತೊರೆಯುತ್ತಾರೆ ಎಂದು ಶನಿವಾರ ಹೇಳಿದ್ದಾರೆ.


ಹಿಂದಿಯಲ್ಲಿ ವೈದ್ಯಕೀಯ ಶಿಕ್ಷಣ ನೀಡುವ ದೇಶದ ಮೊದಲ ರಾಜ್ಯ
ಹಿಂದಿಯಲ್ಲಿ ವೈದ್ಯಕೀಯ ಶಿಕ್ಷಣ ನೀಡುವ ದೇಶದ ಮೊದಲ ರಾಜ್ಯವಾಗಿ ಮಧ್ಯಪ್ರದೇಶ ಹೊರಹೊಮ್ಮಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.


ಹಿಂದಿ ಪಠ್ಯಪುಸ್ತಕಗಳ ಅನಾವರಣ
ಭಾನುವಾರ ಮೋತಿಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸದೀಯ ವೈದ್ಯಕೀಯ ಶಿಕ್ಷಣ ಪಠ್ಯಕ್ರಮದ ಹಿಂದಿ ಪಠ್ಯಪುಸ್ತಕಗಳನ್ನು ಅನಾವರಣಗೊಳಿಸಲಿದ್ದಾರೆ.


ಇದನ್ನೂ ಓದಿ: Supreme Court On Marriage: ಈ ಪತಿಗೆ ಮದುವೆಯೇ ಹನಿಟ್ರ್ಯಾಪ್​ನಂತಾಯ್ತು! ಸುಪ್ರೀಂ ಖಡಕ್ ತೀರ್ಪು


ಈ ವಿನೂತನ ಹೆಜ್ಜೆಯ ಬಗ್ಗೆ ಜನರನ್ನು ಜಾಗೃತಗೊಳಿಸುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಚೌಹಾಣ್, ಇಂಗ್ಲಿಷ್ ಬರದ ಕಾರಣ ವಿದ್ಯಾರ್ಥಿಯೊಬ್ಬ ವೈದ್ಯಕೀಯ ಕಾಲೇಜಿನಿಂದ ಹೊರಗುಳಿಯಬಾರದು. ಹಿರಿಯರು ತಮ್ಮ ಮಕ್ಕಳ ಹಿಂದಿಯ ಮನಸ್ಥಿತಿಯನ್ನು ಬದಲಾಯಿಸಬೇಕು. ಭಾಷೆಯ ಬಗ್ಗೆ ಹೆಮ್ಮೆ ಪಡುವಂತೆ ಮಾಡಬೇಕು ಎಂದು ಹೇಳಿದರು.


ಇದನ್ನೂ ಓದಿ: Weirdest Law: ಹಸು ಸೆಗಣಿ ಹಾಕಿದ್ರೂ ಕೊಡಬೇಕು ಟ್ಯಾಕ್ಸ್! ವಿಚಿತ್ರ ಕಾನೂನಿನಿಂದ ರೈತರು ಕಂಗಾಲು


ಭೋಪಾಲ್‌ನಿಂದ ಹೊಸ ಯುಗ ಪ್ರಾರಂಭವಾಗುತ್ತಿದೆ ಎಂದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣವನ್ನು ಹಿಂದಿಯಲ್ಲಿ ನೀಡುವ ಕ್ರಮವನ್ನು ಉಲ್ಲೇಖಿಸಿ ಇದು ದೇಶದಲ್ಲೇ ಪ್ರಥಮ ಕ್ರಮ ಎಂದು ತಿಳಿಸಿದರು.


ಹಿಂದಿ ವಿರುದ್ಧ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಗುಡುಗು
ಹಿಂದಿ ವಿರುದ್ಧ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಮತ್ತೆ ಗುಡುಗಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ, ನಮ್ಮ ಸಂಸ್ಕೃತಿ ಮತ್ತು ಇತಿಹಾಸವನ್ನು ಅರ್ಥಮಾಡಿಕೊಳ್ಳಲು ಹಿಂದಿಯನ್ನು ಕಲಿಯಬೇಕು ಎಂದು ಹೇಳಿದ ಬೆನ್ನಲ್ಲೇ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅಮಿತ್ ಶಾ ವಿರುದ್ಧ ಗುಡುಗಿದ್ದಾರೆ. ನಮ್ಮ ದೇಶದ ಹೆಸರು ಇಂಡಿಯಾ ಅದನ್ನು ಹಿಂದಿಯಾ ಆಗಿ ಬದಲಾಯಿಸಬೇಡಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆಗ್ರಹಿಸಿದ್ದಾರೆ. ಹಿಂದಿ ರಾಷ್ಟ್ರಭಾಷೆಯಲ್ಲ, ಜೊತೆಗೆ ಹಿಂದಿ ಒಂದೇ ದೇಶದ ಅಧಿಕೃತ ಭಾಷೆಯಲ್ಲ. ದೇಶದ ಸಂಸ್ಕೃತಿಯನ್ನು ಅರಿತುಕೊಳ್ಳಲು ಹಿಂದಿಯನ್ನೇ ಕಲಿಯಬೇಕಿಲ್ಲ ಎಂದು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಿಡಿಕಾರಿದ್ದಾರೆ.


ಕೇಂದ್ರ ಸರ್ಕಾರಕ್ಕೆ ರಾಜ್ಯಗಳ ಹಿತಾಸಕ್ತಿಯನ್ನು ರಕ್ಷಿಸಬೇಕು ಎಂಬ ಇಚ್ಛೆಯಿದ್ದರೆ ಕೇವಲ ಹಿಂದಿ ಮತ್ತು ಸಂಸ್ಕೃತವನ್ನಷ್ಟೇ ದೇಶದಲ್ಲಿ ಪ್ರಚಾರ ಮಾಡಬಾರದು. ತಮಿಳು ಭಾಷೆಯನ್ನೂ ಸೇರಿಸಿ ದೇಶದ ಎಲ್ಲ ಪ್ರಾದೇಶಿಕ ಭಾಷೆಗಳನ್ನು ಪ್ರಚಾರ ಮಾಡಲು ಸಹಕರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.


ತಮಿಳಿಗೆ ಇನ್ನಷ್ಟು ಸ್ಥಾನಮಾನಕ್ಕೆ ಆಗ್ರಹಿಸಿದ್ದ ಸ್ಟಾಲಿನ್
ದೇಶದಲ್ಲಿ ಹಿಂದಿ ಮತ್ತು ಪ್ರಾದೇಶಿಕ ಭಾಷಾ ವೈವಿಧ್ಯತೆಯ ಚರ್ಚೆಯ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಮದ್ರಾಸ್ ಹೈಕೋರ್ಟ್‌ನಲ್ಲಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು (PM Narendra Modi) ಉಪಸ್ಥಿತರಿದ್ದ ಸಮಾರಂಭದಲ್ಲಿಯೇ ಆಗ್ರಹಿಸಿದ್ದರು.

Published by:ಗುರುಗಣೇಶ ಡಬ್ಗುಳಿ
First published: