Mukesh Ambani Threat Call: ಮಾನಸಿಕ ಅಸ್ವಸ್ಥ ವ್ಯಕ್ತಿಯಿಂದ ಮುಕೇಶ್ ಅಂಬಾನಿಗೆ ಕೊಲೆ ಬೆದರಿಕೆ; ಪೊಲೀಸ್ ಮೂಲಗಳಿಂದ ಮಾಹಿತಿ

ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ಲ್ಯಾಂಡ್‌ಲೈನ್ ಸಂಖ್ಯೆಗೆ ಅಫ್ಜಲ್ ಎಂದು ಗುರುತಿಸಲಾದ ವ್ಯಕ್ತಿ ಹಲವು ಬಾರಿ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಕೇಶ್ ಅಂಬಾನಿ

ಮುಕೇಶ್ ಅಂಬಾನಿ

  • Share this:
    ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಗ್ರೂಪ್‌ನ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani Threat Call) ಅವರಿಕೆ ಕೊಲೆ ಬೆದರಿಕೆ ಕರೆ ಮಾಡಿ ವ್ಯಕ್ತಿಯನ್ನು ಮುಂಬೈ ಪೊಲೀಸರು (Mumbai Police) ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಕರೆ ಮಾಡಿದ ವ್ಯಕ್ತಿ ಮಾನಸಿಕ ರೋಗಿ ಎಂದು ಮುಂಬೈ ಪೊಲೀಸರು ಪ್ರಾಥಮಿಕ ಅಂದಾಜು ವ್ಯಕ್ತಪಡಿಸಿದ್ದಾರೆ. ಕರೆ ಮಾಡಿ ಬೆದರಿಕೆ ಹಾಕಿದ ವ್ಯಕ್ತಿಯನ್ನು ಅಫ್ಜಲ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ (ಆಗಸ್ಟ್ 15) ಮುಂಬೈನ ಗಿರ್‌ಗಾಂವ್‌ನಲ್ಲಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ (Reliance Foundation Hospital) ಲ್ಯಾಂಡ್‌ಲೈನ್ ಸಂಖ್ಯೆಗೆ ಅಫ್ಜಲ್ ಎಂದು ಗುರುತಿಸಲಾದ ವ್ಯಕ್ತಿ ಹಲವು ಬಾರಿ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪೊಲೀಸರು ಕರೆ ಮಾಡಿದ ಫೋನ್ ಸಂಖ್ಯೆಯನ್ನು ಗುರುತಿಸಿದ ನಂತರ ಶಂಕಿತನನ್ನು ಪತ್ತೆಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಕರೆ ಮಾಡಿದ ವ್ಯಕ್ತಿ ಮಾನಸಿಕವಾಗಿ ಅಸ್ಥಿರರಾಗಿದ್ದ ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

    mukesh ambani received threat call claims Mumbai Police
    ಮುಕೇಶ್​ ಅಂಬಾನಿ


    ಕರೆ ಮಾಡಿದ ವ್ಯಕ್ತಿ ತಾನು ನಂಬರ್ 1 ಉಗ್ರಗಾಮಿ ಎಂದು ಕರೆದುಕೊಂಡಿದ್ದಾನೆ. ಅಲ್ಲದೇ ನ್ಯಾಷನಲ್ ಇನ್ವೆಸ್ಟಿಗೇಷನ್ ಬ್ಯೂರೋ (NIA), ATS ಮತ್ತು ಮುಂಬೈ ಪೊಲೀಸರಿಗೆ ಸಹ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.

    ಒಟ್ಟು 8 ಕರೆ
    ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಮತ್ತೊಮ್ಮೆ ಬೆದರಿಕೆ ಹಾಕಲಾಗಿದೆ. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಬೆದರಿಕೆ ಕರೆ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಇಂದು (ಆಗಸ್ಟ್ 15) ಒಟ್ಟು ಎಂಟು ಬೆದರಿಕೆ ಕರೆಗಳು ಬಂದಿವೆ ಎಂದು ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ (Reliance Hospital) ಅಧಿಕಾರಿಗಳು ಡಿಬಿ ಮಾರ್ಗ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಾವು ಆಸ್ಪತ್ರೆಯಿಂದ ಬೆದರಿಕೆ ಕರೆಯ ಕುರಿತು ದೂರು ಸ್ವೀಕರಿಸಿದ್ದೇವೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಎಂದು ಮುಂಬೈ ಪೊಲೀಸರ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಮುಂಬೈ ಪೊಲೀಸರಿಗೆ ದೂರು
    ಈ ವಿಷಯವನ್ನು ಪರಿಶೀಲಿಸಲು ನಾವು ಮುಂಬೈ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಸಿಇಒ ಡಾ ತರಂಗ್ ಗಿಯಾಂಚಂದಾನಿ ತಿಳಿಸಿದ್ದಾರೆ.

    ಇದನ್ನೂ ಓದಿ: Mukesh Ambani: ಮುಕೇಶ್ ಅಂಬಾನಿಗೆ ಬೆದರಿಕೆ ಕರೆ; ತಾನು ನಂಬರ್ 1 ಟೆರರಿಸ್ಟ್ ಎಂದು ಹೇಳಿಕೊಂಡ ವ್ಯಕ್ತಿ

    ಅಂಬಾನಿ ಕುಟುಂಬಕ್ಕೆ ಭದ್ರತೆ ಮುಂದುವರೆಸಲು ಅನುಮತಿ
    ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠ ಅಂಬಾನಿ ಕುಟುಂಬಕ್ಕೆ ಕೇಂದ್ರ ಸರ್ಕಾರ ಭದ್ರತೆ ನೀಡುವುದನ್ನು ಮುಂದುವರಿಸಬಹುದು ಎಂದು ಸ್ಪಷ್ಟಪಡಿಸಿತ್ತು. ಕೇಂದ್ರ ಸರ್ಕಾರ ಅಂಬಾನಿ ಕುಟುಂಬಕ್ಕೆ ನೀಡಿದ ಭದ್ರತೆಯನ್ನು ಪ್ರಶ್ನಿಸಿ ತ್ರಿಪುರಾ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

    ಇದನ್ನೂ ಓದಿ: Independence Day 2022: ಮಹಿಳೆಯರನ್ನು ಗೌರವಿಸಿ; ಮನವಿ ಮಾಡಿದ ಪಿಎಂ ಮೋದಿ

    ಈಗಿನ ಪದ್ಧತಿಯಂತೆ ಅಂಬಾನಿ ಕುಟುಂಬವು ಭದ್ರತೆಗೆ ತಗಲುವ ನಿರ್ವಹಿಸುವ ವೆಚ್ಚವನ್ನು ಭರಿಸಲಿದೆ ಎಂದು ಪೀಠ ಹೇಳಿದೆ. ಲೈವ್ ಲಾ ಜಾಲತಾಣ ವರದಿ ಮಾಡಿದ ಪ್ರಕಾರ ಸಿಜೆಐ ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಪಿಐಎಲ್ ಸಲ್ಲಿಸಿದ ಅರ್ಜಿದಾರರ ಸ್ಥಾನವನ್ನು ಪ್ರಶ್ನಿಸಿತ್ತು.

    ಪಿಐಎಲ್ ವಜಾಗೊಳಿಸಿದ್ದ ಸುಪ್ರೀಂಕೋರ್ಟ್

    ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠ ಅಂಬಾನಿ ಕುಟುಂಬಕ್ಕೆ ಕೇಂದ್ರ ಸರ್ಕಾರ ಭದ್ರತೆ ನೀಡುವುದನ್ನು ಮುಂದುವರಿಸಬಹುದು ಎಂದು ಸ್ಪಷ್ಟಪಡಿಸಿತ್ತು. ಕೇಂದ್ರ ಸರ್ಕಾರ ಅಂಬಾನಿ ಕುಟುಂಬಕ್ಕೆ ನೀಡಿದ ಭದ್ರತೆಯನ್ನು ಪ್ರಶ್ನಿಸಿ ತ್ರಿಪುರಾ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.
    Published by:guruganesh bhat
    First published: