ಲಕ್ನೋ: ಸಮಾಜವಾದಿ ಪಕ್ಷದ ವರಿಷ್ಠ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಇಂದು (Mulayam Singh Yadav Passes Away) ನಿಧನರಾಗಿದ್ದಾರೆ. 82 ವರ್ಷದ ಹಿರಿಯ ರಾಜಕಾರಣಿ ಹರ್ಯಾಣದ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ದಾಖಲಾಗಿದ್ದು, ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪುತ್ರ ಅಖಿಲೇಶ್ ಯಾದವ್ ದೃಢಪಡಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಮುಲಾಯಂ ಸಿಂಗ್ ಯಾದವ್ ಅವರು ತಮ್ಮ ನಿಯಮಿತ ವೈದ್ಯಕೀಯ ತಪಾಸಣೆ ಮತ್ತು ಪರೀಕ್ಷೆಗಳಿಗಾಗಿ ಆಗಸ್ಟ್ 22 ರಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಮುಲಾಯಂ ಸಿಂಗ್ ಯಾದವ್ ಕಿವಿಗೊಡುತ್ತಿದ್ದರು. ಅತ್ಯಂತ ತಳಮಟ್ಟದಿಂದ ಮುಲಾಯಂ ಸಿಂಗ್ ಯಾದವ್ ಅವರು ಬೆಳೆದುಬಂದಿದ್ದರು. ಜಯಪ್ರಕಾಶ್ ನಾರಾಯಣ್ ಮತ್ತು ಲೋಹಿಯಾ ಅವರ ಸಿದ್ಧಾಂತಗಳನ್ನು ಅನುಸರಿಸಿ ಬದ್ಧತೆ ತೋರಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಅನೇಕ ಹಿರಿಯ ನಾಯಕರು ಸಹ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಆರೋಗ್ಯ ಹದಗೆಟ್ಟಿತ್ತು
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (Samajwadi Party) ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಹದಗೆಟ್ಟಿತ್ತು. ಇದಾದ ನಂತರ ಅವರನ್ನು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ (Medanta Hospital) ಐಸಿಯುಗೆ ದಾಖಲಿಸಲಾಗಿತ್ತು. ಮೂತ್ರ ಸೋಂಕಿನ ಜೊತೆಗೆ ಮುಲಾಯಂ ಸಿಂಗ್ ಯಾದವ್ ಅವರಿಗೆ ರಕ್ತದೊತ್ತಡದ ಸಮಸ್ಯೆಯೂ ಹೆಚ್ಚಿತ್ತು. ಉಸಿರಾಟದ ತೊಂದರೆಯಿಂದಾಗಿ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಆದರೆ ಸದ್ಯಕ್ಕೆ ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿರಲಿಲ್ಲ
मेरे आदरणीय पिता जी और सबके नेता जी नहीं रहे - श्री अखिलेश यादव
— Samajwadi Party (@samajwadiparty) October 10, 2022
ಇದನ್ನೂ ಓದಿ: Mulayam Singh Yadav: ಮುಲಾಯಂ ಸಿಂಗ್ ಯಾದವ್ ಆರೋಗ್ಯದಲ್ಲಿ ಸುಧಾರಣೆ ಇಲ್ಲ, ಐಸಿಯುನಲ್ಲಿ ಚಿಕಿತ್ಸೆ!
ಮುಲಾಯಂ ಸಿಂಗ್ ಯಾದವ್ ಅವರ ಪತ್ನಿಯೂ ಇತ್ತೀಚಿಗೆ ನಿಧನ
ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ (Mulayam Singh Yadav Wife )ಸಾಧನಾ ಗುಪ್ತಾ ಇತ್ತೀಚಿಗಷ್ಟೇ ನಿಧನರಾಗಿದ್ದರು. ಶ್ವಾಸಕೋಶದ ಸೋಂಕಿನಿಂದಾಗಿ ಅವರನ್ನು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾಧನಾ ಗುಪ್ತಾ ಅವರ ಪಾರ್ಥಿವ ಶರೀರವನ್ನು ಲಕ್ನೋಗೆ ತರಲಾಗಿತ್ತು ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣ ಮುಲಾಯಂ ಸಿಂಗ್ ಯಾದವ್ ಕೂಡ ಇದೇ ಆಸ್ಪತ್ರೆಗೆ ದಾಖಲಾಗಿದ್ದರು.
In a tweet, Samajwadi Party chief Akhilesh Yadav announces the passing away of his father and party supremo Mulayam Singh Yadav pic.twitter.com/P7EaxdJfPB
— ANI (@ANI) October 10, 2022
ಸಾಧನಾ ಗುಪ್ತಾ ಅವರು ಮುಲಾಯಂ ಸಿಂಗ್ ಯಾದವ್ರ 2ನೇ ಪತ್ನಿಯಾಗಿದ್ದರು. ಮುಲಾಯಂ ಸಿಂಗ್ ಯಾದವ್ ಅವರ ಮೊದಲ ಪತ್ನಿ ಮತ್ತು ಅಖಿಲೇಶ್ ಯಾದವ್ ಅವರ ತಾಯಿ ಮಾಲ್ತಿ ಯಾದವ್ 2003 ರಲ್ಲಿ ನಿಧನರಾಗಿದ್ದರು. ಆನಂತರ ಸಾಧನಾ ಗುಪ್ತಾ ಮುಲಾಯಂ ಸಿಂಗ್ ಯಾದವ್ ಅವರನ್ನು ವಿವಾಹವಾಗಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ