Mumbai Rains: ಮುಂಬೈನಲ್ಲಿ ಧಾರಾಕಾರ ಮಳೆ, ರೈಲು ಸಂಚಾರ ಅಸ್ತವ್ಯಸ್ತ; ಮುಂದಿನ 2 ದಿನ ರೆಡ್​ ಅಲರ್ಟ್​​ ಘೋಷಣೆ

ಪಾಲ್ಗರ್​, ಥಾಣೆ, ಮುಂಬೈ ಹಾಗೂ ರಾಯ್​​ಗಢದಲ್ಲಿ ಮುಂದಿನ 3 ಗಂಟೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಪಾಟಿಯಾಲದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಗೆ ಮರಗಳು ಧರೆಗುರುಳಿವೆ.

ಮುಂಬೈ ಮಳೆ

ಮುಂಬೈ ಮಳೆ

 • Share this:
  ಮುಂಬೈ(ಜೂ.12): ಮಹಾನಗರಿ ಮುಂಬೈನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಪಾಲ್ಗರ್, ಥಾಣೆ, ರಾಯ್​ಗಢ ಹಾಗೂ ಮುಂಬೈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಪ್ರತಿ ಗಂಟೆಗೆ 30-40 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮಳೆಯ ತೀವ್ರತೆಯೂ ಅಧಿಕವಾಗಿದೆ. ಮುಂಬೈನಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದ್ದು, ರೆಡ್​ ಅಲರ್ಟ್​​​ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮುಂಬೈನಲ್ಲಿ ಶನಿವಾರ ಆರೆಂಜ್​ ಅಲರ್ಟ್​​ ಹಾಗೂ ಭಾನುವಾರ ರೆಡ್​ ಅಲರ್ಟ್​ ಘೋಷಣೆ ಮಾಡಿದೆ. ಮುಂಬೈ ಹಾಗೂ ಥಾಣೆ ಜಿಲ್ಲೆಗಳಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

  ಮುಂದಿನ ನಾಲ್ಕು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಯಥೇಚ್ಛ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೈ ಅಲರ್ಟ್​​ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಇಷ್ಟೇ ಅಲ್ಲದೇ, ಪಾಲ್ಗರ್, ಥಾಣೆ ಮತ್ತು ರಾಯ್​ಗಢ ಜಿಲ್ಲೆಗಳಲ್ಲೂ ಅಧಿಕ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಜೂನ್​ 10ರಿಂದ 15ವರೆಗೆ ಮಳೆ ಮುಂದುವರಿಯಲಿದೆ. ಮುಂಬೈನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹಿರಿಯ ಹವಾಮಾನ ವಿಜ್ಞಾನಿ ಕೆ.ಎಸ್.ಹೊಸಲಿಕರ್​ ಹೇಳಿದ್ದಾರೆ.

  ಮುಂಬೈನಲ್ಲಿ ಮಳೆ ಸುರಿಯುತ್ತಿರುವುದರಿಂದ ರೈಲು ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ. ಸೆಂಟ್ರಲ್​ ರೈಲ್ವೆ ಲೋಕಲ್​ ಟ್ರೈನ್​ಗಳ ಸಂಚಾರವನ್ನು ನಿಷೇಧಿಸಿದೆ. ಧಾರಾಕಾರ ಮಳೆಯಿಂದಾಗಿ ರೈಲ್ವೆ ಹಳಿಗಳು ಜಲಾವೃತವಾಗಿದ್ದು, ದಡಾರ್-ಕುರ್ಲಾ ಮಾರ್ಗದ ರೈಲು ಸಂಚಾರವನ್ನು ಬಂದ್ ಮಾಡಲಾಗಿದೆ ಎಂದು ಎಎನ್​ಐ ವರದಿ ಮಾಡಿದೆ.  ಪಾಲ್ಗರ್​, ಥಾಣೆ, ಮುಂಬೈ ಹಾಗೂ ರಾಯ್​​ಗಢದಲ್ಲಿ ಮುಂದಿನ 3 ಗಂಟೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಪಾಟಿಯಾಲದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಗೆ ಮರಗಳು ಧರೆಗುರುಳಿವೆ.

  ಮಧ್ಯಪ್ರದೇಶಕ್ಕೆ ಮಾನ್ಸೂನ್​ ಎಂಟ್ರಿ ಕೊಟ್ಟಿದ್ದು, ರಾಜ್ಯದ 23 ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಪಶ್ಚಿಮ ಬಂಗಾಳದ ಅನೇಕ ಪ್ರದೇಶಗಳಲ್ಲಿ ಇಂದಿನಿಂದ ಹೆಚ್ಚು ಮಳೆಯಾಗಲಿದೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.
  Published by:Latha CG
  First published: