ಮಹರಾಷ್ಟ್ರ (ಜುಲೈ 06): ವಿಧಾನಸಭೆಯಲ್ಲಿ ಸ್ಪೀಕರ್ ಭಾಸ್ಕರ್ ಜಾಧವ್ ಅವರೊಂದಿಗೆ ಅನುಚಿತವಾಗಿ ಹಾಗೂ ಕೆಟ್ಟದಾಗಿ ವರ್ತಿಸಿದ, ದೈಹಿಕ ಹಲ್ಲೆ ನಡೆಸಿದ 12 ಬಿಜೆಪಿ ಶಾಸಕರನ್ನು ಸೋಮವಾರ (ಜುಲೈ 5)ರಂದು 1 ವರ್ಷಗಳ ಕಾಲ ಅಮಾನತು ಮಾಡಲಾಗಿದೆ ಎನ್ನುವ ನಿರ್ಣಯವನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಬ್ ಅವರು ಧ್ವನಿ ಮತದ ಮೂಲಕ ಸೋಮವಾರ ವಿಧಾನಸಭೆಯಲ್ಲಿ ಅಂಗೀಕರಿಸಿದರು. ಪರಿಣಾಮ ಸಂಜಯ್ ಕುಟೆ, ಆಶಿಶ್ ಶೆಲಾರ್, ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಖಾಲ್ಕರ್, ಪರಾಗ್ ಅಲವಾನಿ, ಹರೀಶ್ ಪಿಂಪಾಲೆ, ಯೋಗೇಶ್ ಸಾಗರ್, ಜೇ ಕುಮಾರ್ ರಾವತ್, ನಾರಾಯಣ್ ಕುಚೆ, ರಾಮ್ ಸತ್ಪುಟೆ ಮತ್ತು ಬಂಟಿ ಭಂಗ್ಡಿಯಾ ಅವರನ್ನು ಅಮಾನತು ಮಾಡಲಾಗಿತ್ತು. ಆದರೆ ಇದಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಶಾಸಕರು, ದೇವೇಂದ್ರ ಫಡ್ನವೀಸ್ ಅವರ ನೇತೃತ್ವದಲ್ಲಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಮಂಗಳವಾರ “ಕೌಂಟರ್ ಅಸೆಂಬ್ಲಿ” ನಡೆಸಿ ಪ್ರತಿಭಟಿಸಿದ್ದಾರೆ.
ಹಲವಾರು ಬಿಜೆಪಿ ಶಾಸಕರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕುಳಿತು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಶಿವಸೇನೆ, ಎನ್ಸಿಪಿ ಮತ್ತು ಕಾಂಗ್ರೆಸ್) ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್, ಬಿಜೆಪಿ ಶಾಸಕ ಕಾಳಿದಾಸ್ ಕೋಲಂಕರ್ ಅವರನ್ನು ಕೌಂಟರ್ ಸದನದ ಸ್ಪೀಕರ್ ಎಂದು ಘೋಷಿಸಿ ಚರ್ಚೆ ನಡೆಸಲು ಪ್ರಸ್ತಾಪಿಸಿದರು.
"ಪಕ್ಷದ 12 ಶಾಸಕರನ್ನು ಸುಳ್ಳು ಆರೋಪದ ಆಧಾರದ ಮೇಲೆ ಅಮಾನತುಗೊಳಿಸಲಾಗಿದೆ. ನಾನು ಇಲ್ಲಿ ಈ ಸರ್ಕಾರದ ವಿರುದ್ಧ ನಿರ್ಣಯವನ್ನು ಪ್ರಸ್ತಾಪಿಸುತ್ತೇನೆ ಮತ್ತು ಪ್ರಸ್ತಾವನೆಯ ಕುರಿತು ಚರ್ಚೆಯನ್ನು ಪ್ರಾರಂಭಿಸಲು ಸದಸ್ಯರನ್ನು ವಿನಂತಿಸುತ್ತೇನೆ" ಎಂದು ಚರ್ಚೆ ಆರಂಭಿಸಿದರು.
"ಇದು ಪ್ರಜಾಪ್ರಭುತ್ವದ ಕೊಲೆ. ಬಿಜೆಪಿಯ ಎಲ್ಲಾ ಶಾಸಕರು ಈ ಸರ್ಕಾರದ ಕಾರ್ಯಚಟುವಟಿಕೆಯ ವಿರುದ್ಧ ಮಾತನಾಡಲು ಬಯಸುತ್ತಾರೆ. ಭ್ರಷ್ಟ ಸರ್ಕಾರವನ್ನು ಬಹಿರಂಗಪಡಿಸಲು ಬಯಸುತ್ತಾರೆ" ಎಂದು ವಿಪಕ್ಷ ನಾಯಕ ಸರ್ಕಾರದ ಮೇಲೆ ಕಿಡಿ ಕಾರಿದ್ದಾರೆ.
ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಮೆಕ್ಕಾದ ಅಬ್ರಾಜ್ ಕುದೈ ಹೋಟೆಲ್ ವಿಶ್ವದ ಅತಿ ಎತ್ತರದ ಹೋಟೆಲ್ ಅಲ್ಲ..!
ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ಬಿಜೆಪಿ ಸದಸ್ಯರು ಧ್ವನಿವರ್ಧಕಗ ಳನ್ನು ಬಳಸದಂತೆ ಭದ್ರತಾ ಅಧಿಕಾರಿಗಳು ತಡೆದಿದ್ದಾರೆ.ವಿಧಾನಸಭಾ ಭವನ ಮತ್ತು ರಾಜ್ಯದ ಹಲವೆಡೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದರೂ, 12 ಶಾಸಕರನ್ನು ಅಮಾನತು ಗೊಳಿಸಿರುವ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ಶಿವಸೇನೆ ಸಂಸದ ಸಂಜಯ್ ರಾವತ್, ರಾಜ್ಯ ಸರ್ಕಾರ ಇಂತಹ ಅಶಿಸ್ತು ಮತ್ತು ಅವಿವೇಕವನ್ನು ಸಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
"ಪ್ರತಿಪಕ್ಷದ ನಾಯಕರು ನನ್ನ ಕ್ಯಾಬಿನ್ಗೆ ಬಂದು ದೇವೇಂದ್ರ ಫಡ್ನವೀಸ್ ಮತ್ತು ಹಿರಿಯ ನಾಯಕ ಚಂದ್ರಕಾಂತ್ ಪಾಟೀಲ್ ಅವರ ಮುಂದೆಯೇ ಅಸಂಸದೀಯ ಭಾಷೆ ಬಳಸಿ ನನ್ನನ್ನು ನಿಂದಿಸಿದ್ದಾರೆ. ಕೆಲವು ನಾಯಕರು ನನ್ನ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ" ಎಂದು ಅಧಿಕಾರಿ ಭಾಸ್ಕರ್ ಜಾಧವ್ ಮಾಧ್ಯಮಗಳಿಗೆ ತಿಳಿಸಿದರು.
ಇದನ್ನೂ ಓದಿ: Siddaramaiah| ಮುಂದಿನ ಚುನಾವಣೆಯಲ್ಲಿ ನಾನು ಬಾದಾಮಿಯಿಂದಲೇ ಸ್ಪರ್ಧಿಸುತ್ತೇನೆ; ಸಿದ್ದರಾಮಯ್ಯ ಘೋಷಣೆ!
ಸಂಜಯ್ ಕುಟೆ, ಆಶಿಸ್ ಶೆಲಾರ್. ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಕಲ್ಕರ್, ಪರಾಗ್ ಅಲಾವ್ನಿ, ಹರೀಶ್ ಪಿಂಪಾಲೆ, ರಾಮ್ ಸತ್ಪುಟ್, ಯೋಗೇಶ್ ಸಾಗರ್, ಜಯ ಕುಮಾರ್ ರಾವತ್, ನಾರಾಯಣ್ ಕುಚೆ ಮತ್ತು ಕೀರ್ತಿಕುಮಾರ್ ಭಾಂಗ್ಡಿಯಾ ಅಮಾನತುಗೊಂಡ ಶಾಸಕರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ