HOME » NEWS » National-international » MUMBAI EX TOP COP PARAM BIR SINGH MOVED TO SUPREME COURT AGAINST MAHARASHTRA HOME MINISTER ANIL DESHMUKH SCT DBDEL

Anil Deshmukh: ಮಹಾರಾಷ್ಟ್ರದ ಗೃಹ ಸಚಿವ‌ ಅನಿಲ್ ದೇಶಮುಖ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪರಮ್ ಬೀರ್ ಸಿಂಗ್

Anil Deshmukh | ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಥವಾ ಎನ್ ಸಿಪಿ 100 ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪ ಹೊತ್ತ ಅನಿಲ್ ದೇಶಮುಖ್ ಅವರಿಂದ ರಾಜೀನಾಮೆ ಪಡೆಯದ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿದ್ದ‌ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಈಗ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

news18-kannada
Updated:March 23, 2021, 9:50 AM IST
Anil Deshmukh: ಮಹಾರಾಷ್ಟ್ರದ ಗೃಹ ಸಚಿವ‌ ಅನಿಲ್ ದೇಶಮುಖ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪರಮ್ ಬೀರ್ ಸಿಂಗ್
ಅನಿಲ್ ದೇಶಮುಖ್- ಪರಮ್ ಬೀರ್ ಸಿಂಗ್
  • Share this:
ಮುಂಬೈ, ಮಾ. 23: ಹೊಟೆಲ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ವಸೂಲಿ ಮಾಡಿಕೊಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಮಹಾರಾಷ್ಟ್ರದ ಗೃಹ ಸಚಿವ‌ ಅನಿಲ್ ದೇಶಮುಖ್ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಅಲ್ಲಿನ‌ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಎಂಟು ಪುಟಗಳ ಪತ್ರ ಬರೆದಿದ್ದ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದಾರೆ.

ಪರಮ್ ಬೀರ್ ಸಿಂಗ್ ಅವರ ಆರೋಪದ ಮೇರೆಗೆ ಅನಿಲ್ ದೇಶಮುಖ್ ತಮ್ಮ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಆಗ್ರಹ ಮಾಡಿತ್ತು. ವಿಷಯ ವ್ಯಾಪಕವಾಗಿ ಚರ್ಚೆ ಆಗಿತ್ತು. ಮಹಾರಾಷ್ಟ್ರದ ಎನ್ ಸಿಪಿ,‌ ಶಿವಸೇನೆ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮಹಾ ವಿಕಾಸ್ ಅಘಾಡಿ ಸರ್ಕಾರದ ಮಟ್ಟದಲ್ಲೂ ಸಂಚಲನ ಸೃಷ್ಟಿ ಆಗಿತ್ತು. ಎನ್ ಸಿಪಿಯ ಅಗ್ರ ನಾಯಕ ಶರದ್ ಯಾದವ್ ನೇತೃತ್ವದಲ್ಲಿ ಆ ಪಕ್ಷದ ಮುಖಂಡರು ಹಲವು ಸುತ್ತಿನ ಮಾತುಕತೆ ನಡೆಸಿದರು. ಮಿತ್ರಪಕ್ಷಗಳ ಮಟ್ಟದಲ್ಲಿ ಸಮಾಲೋಚನೆ ಆಯಿತು. ಆದರೆ ಇಷ್ಟೆಲ್ಲವಾದರೂ ಅನಿಲ್ ದೇಶ್ಮುಖ್ ರಾಜೀನಾಮೆ ಪಡೆದುಕೊಂಡಿಲ್ಲ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಥವಾ ಎನ್ ಸಿಪಿ 100 ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪ ಹೊತ್ತ ಅನಿಲ್ ದೇಶಮುಖ್ ಅವರಿಂದ ರಾಜೀನಾಮೆ ಪಡೆಯದ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿದ್ದ‌ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಈಗ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಪರಮ್ ಬೀರ್ ಸಿಂಗ್ ಅವರು ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೊಟೆಲ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ವಸೂಲಿ ಮಾಡಿಕೊಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹೇರಿದ ಬಗ್ಗೆ ಗೃಹ ಸಚಿವ‌ ಅನಿಲ್ ದೇಶ್ಮುಖ್ ವಿರುದ್ಧ ಸೂಕ್ತ ತನಿಖೆಗೆ ಆದೇಶಿಸುವಂತೆ ಕೇಳಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ಬುಧವಾರ ಪರಮ್ ಬೀರ್ ಸಿಂಗ್ ಅವರ ಅರ್ಜಿ ವಿಚಾರಣೆ ನಡೆಸಲಿದೆ.

ಇದನ್ನೂ ಓದಿ: Martyrs Day 2021: ರೈತ ಹೋರಾಟ ಬೆಂಬಲಿಸಿ ದೆಹಲಿ ಗಡಿಯಲ್ಲಿ ಇಂದು ಭಗತ್ ಸಿಂಗ್, ರಾಜ್‌ಗುರು, ಸುಖದೇವ್ ಹುತಾತ್ಮ ದಿನಾಚರಣೆ

ಈ ನಡುವೆ ಗೃಹ ಸಚಿವರ ಭ್ರಷ್ಟಾಚಾರದ ಪ್ರಕರಣವನ್ನು ಪ್ರಮುಖ ಅಸ್ತ್ರ ಮಾಡಿಕೊಂಡಿರುವ ಪ್ರತಿಪಕ್ಷ ಬಿಜೆಪಿ ಅನಿಲ್ ದೇಶ್ಮುಖ್ ರಾಜೀನಾಮೆ ನೀಡಲೇಬೇಕೆಂದು ಒತ್ತಡ ಹೇರುತ್ತಿದೆ. ಇದೇ ಹಿನ್ನೆಲೆಯಲ್ಲಿ ನಿನ್ನೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿತ್ತು. ಇಂದು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಹಿಂದೆ ಕೂಡ ಗೃಹ ಸಚಿವರ ಭ್ರಷ್ಟಾಚಾರದ ವಿಚಾರ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿ ಆಗಲೆಂದು ದೇವೇಂದ್ರ ಫಡ್ನವಿಸ್ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು.
ಮೊದಲಿಗೆ ಎನ್ ಸಿಪಿ ನಾಯಕರು ಗೃಹ ಸಚಿವರ ಭ್ರಷ್ಟಾಚಾರದ ಪ್ರಕರಣದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತೀರ್ಮಾನ ಮಾಡಲಿ ಎಂದಿದ್ದರು. ಆನಂತರ ಅನಿಲ್ ದೇಶ್ಮುಖ್ ರಾಜೀನಾಮೆ ಅನಗತ್ಯ ಎಂದು ಪ್ರತಿಪಾದಿಸಿದ್ದರು. ಇನ್ನೊಂದೆಡೆ ಕಾಂಗ್ರೆಸ್ ಪಕ್ಷ ಪ್ರಕರಣದ ತನಿಖೆ ಆಗಲಿ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಯಾವುದೇ ನಿರ್ಧಾರ ಕೈಗೊಳ್ಳದೆ ಸಮಯ ದೂಡುತ್ತಿದ್ದಾರೆ. ನಾಳೆ ಸುಪ್ರೀಂ ಕೋರ್ಟಿನಲ್ಲಿ ನಡೆಯುವ ವಿಚಾರಣೆ ಅನಿಲ್ ದೇಶ್ಮುಖ್ ಅವರಿಗೆ ಮಾತ್ರವಲ್ಲ ಎನ್ ಸಿಪಿ,‌ ಶಿವಸೇನೆ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೂ ನಿರ್ಣಾಯಕ ಆಗಿದೆ.
Published by: Sushma Chakre
First published: March 23, 2021, 9:50 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories