Mumbai Rape Case: ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆ ಚಿಕಿತ್ಸೆ ಫಲಿಸದೆ ಸಾವು

ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 376(ಅತ್ಯಾಚಾರಕ್ಕೆ ಶಿಕ್ಷೆ) ಹಾಗೂ 307(ಕೊಲೆ ಯತ್ನ) ಪ್ರಕರಣದಡಿಯಲ್ಲಿ ಕೇಸ್​ ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ ಬಳಿಕ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

  • Share this:
    ಮುಂಬೈ(ಸೆ.11): ವಾಣಿಜ್ಯ ನಗರಿ ಮುಂಬೈನಲ್ಲಿ ಸೆ.9ರಂದು ಕ್ರೂರವಾಗಿ ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಈ ಘಟನೆ ಮುಂಬೈನ ಸಕಿ ನಾಕ ಪ್ರದೇಶದ ಖೈರಾನಿ ಪ್ರದೇಶದಲ್ಲಿ ನಡೆದಿತ್ತು. ನಿರ್ಭಯಾ ಪ್ರಕರಣದ ಮಾದರಿಯಲ್ಲಿ ಈ ಭಯಾನಕ ಘಟನೆ ನಡೆದಿತ್ತು. ಕಾಮುಕ ಮಹಿಳೆಯ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದ. ಸಂತ್ರಸ್ತೆಯ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮಹಿಳೆ ಇಂದು ಕೊನೆಯುಸಿರೆಳಿದಿದ್ದಾಳೆ.

    30 ವರ್ಷದ ಮಹಿಳೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದ. ಈ ಪ್ರಕರಣದಲ್ಲಿ ಭಾಗಿಯಾದವರನ್ನು ಸೆರೆ ಹಿಡಿಯಲು ಪೊಲೀಸರು ಈಗಾಗಲೇ ತನಿಖೆ ಶುರು ಮಾಡಿದ್ದರು. ಡಿಸಿಪಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

    ಪೊಲೀಸ್ ಕಂಟ್ರೋಲ್​ ರೂಮ್​ಗೆ ಮಧ್ಯರಾತ್ರಿ 3.30ಕ್ಕೆ ಫೋನ್ ಕರೆಯೊಂದು ಬಂದಿತ್ತು. ‘‘ಸಕಿ ನಾಕ ಪ್ರದೇಶದ ಖೈರಾನಿ ರಸ್ತೆ ಬದಿ ನಿಂತಿರುವ ಟೆಂಪೋದಲ್ಲಿ ಮಹಿಳೆಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾಳೆ‘‘ ಎಂದು ಅನಾಮಿಕ ಧ್ವನಿಯು ಹೇಳಿತು ಎಂದು ಪೊಲೀಸರು ತಿಳಿಸಿದ್ದರು.

    ಇದನ್ನೂ ಓದಿ:ನಾಳೆಯಿಂದ ಭಾರತೀಯರು UAEಗೆ ಪ್ರಯಾಣಿಸಬಹುದು; 2 ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಅವಕಾಶ

    ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸಂತ್ರಸ್ತೆಯನ್ನು ಘಟ್ಕೋಪರ್​ನ ರಾಜವಾಡಿ ಆಸ್ಪತ್ರೆಗೆ ದಾಖಲಿಸಿದ್ರು. ಮಹಿಳೆಯ ಸ್ಥಿತಿ ತೀರಾ ಗಂಭೀರವಾಗಿತ್ತು ಎಂದು ಪೊಲೀಸರು ಹೇಳಿದ್ದರು.

    ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 376(ಅತ್ಯಾಚಾರಕ್ಕೆ ಶಿಕ್ಷೆ) ಹಾಗೂ 307(ಕೊಲೆ ಯತ್ನ) ಪ್ರಕರಣದಡಿಯಲ್ಲಿ ಕೇಸ್​ ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ ಬಳಿಕ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಬಂಧಿತನನ್ನು 42 ವರ್ಷದ ಮೋಹನ್ ಚೌಹಾಣ್ ಎಂದು ಗುರುತಿಸಲಾಗಿದೆ.

    ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ‘‘ಮಹಿಳೆಯು ಕ್ರೂರ ರೀತಿಯಲ್ಲಿ ಅತ್ಯಾಚಾರಕ್ಕೆ ಒಳಗಾಗಿದ್ದಾಳೆ ಹಾಗೂ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್​ನ್ನು ಹಾಕಲಾಗಿದೆ. ರಸ್ತೆ ಬದಿ ನಿಂತಿದ್ದ ಟೆಂಪೋದಲ್ಲಿ ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದಳು‘‘ ಎಂದು ತಿಳಿದು ಬಂದಿದೆ.

    ಇದನ್ನೂ ಓದಿ:Rape Case: ಮತ್ತೊಂದು ನಿರ್ಭಯಾ ಪ್ರಕರಣ; ಮಹಿಳೆ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದ ಕಾಮುಕ

    2012ರಲ್ಲಿ ಡಿಸೆಂಬರ್ ತಿಂಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ನಿರ್ಭಯಾ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಕಾಮುಕರ ಗುಂಪೊಂದು ಚಲಿಸುತ್ತಿದ್ದ ಬಸ್​​ನಲ್ಲಿ ಯುವತಿಯನ್ನು ಬಹಳ ಕ್ರೂರವಾಗಿ ಅತ್ಯಾಚಾರ ಮಾಡಿತ್ತು. ಬಹಳ ದಿನಗಳವರೆಗೆ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಸಂತ್ರಸ್ತೆ ಕೊನೆಗೆ ಸಾವನ್ನಪ್ಪಿದ್ದಳು.
    Published by:Latha CG
    First published: