Hamsalekha : ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ: ಕೊನೆಗೂ ಕ್ಷಮೆಯಾಚಿಸಿದ `ನಾದ ಬ್ರಹ್ಮ’!

Hamsalekha : ಆ ವೇಳೆ ಅವರು ದಲಿತರು, ಅಸ್ಪೃಶ್ಯತೆ ಕುರಿತಂತೆ ಮಾತಾನಾಡಿದ್ದರು, ಜೊತೆಗೆ ಪೇಜಾವರ ಶ್ರೀಗಳ ಹೆಸರನ್ನು ಪ್ರಸ್ತಾಪ ಮಾಡಿದ್ದರು. ಆ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್(Viral) ಆಗಿತ್ತು. ಇದಾದ ಬಳಿಕ ಕ್ಷಮೆ ಕೇಳುವಂತೆ ಹಲವರು ಒತ್ತಾಯಿಸಿದ್ದಾರೆ. ಇದೀಗ ಹಂಸಲೇಖ ವಿಡಿಯೋ ಮುಖಾಂತರ ಕ್ಷಮೆ ಕೇಳಿದ್ದಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಂಸಲೇಖ

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಂಸಲೇಖ

  • Share this:
ಖ್ಯಾತ ಸಂಗೀತ ನಿರ್ದೇಶಕMusic Director), ಸಿನಿಮಾ ಸಾಹಿತಿ(Literature) ನಾದ ಬ್ರಹ್ಮ ಹಂಸಲೇಖ (Hamasalekha) ಅವರು ಪೇಜಾವರ ಶ್ರೀಗಳ ಕುರಿತು ಆಡಿದ ಮಾತುಗಳಿಗೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿರುವ ವಿಚಾರ ಸಾಮಾಜಿಕ ಜಾಲತಾಣ(Socail Media)ದಲ್ಲಿ ಪರ-ವಿರೋಧದ ಚರ್ಚೆಗೆ ಗ್ರಾಸವಾಗಿತ್ತು. ನೆಟ್ಟಿಗರು ಹಂಸಲೇಖ ಮಾತುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನಾದಬ್ರಹ್ಮ ಹಂಸಲೇಖ ಅವರು ಕ್ಷಮೆ ಕ್ಷೇಳಿದ್ದಾರೆ. ಮೈಸೂರಿ(Mysore)ನಲ್ಲಿ ನಡೆದ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹೋಗಿದ್ದರು. ಆ ವೇಳೆ ಅವರು ದಲಿತರು, ಅಸ್ಪೃಶ್ಯತೆ ಕುರಿತಂತೆ ಮಾತಾನಾಡಿದ್ದರು, ಜೊತೆಗೆ ಪೇಜಾವರ ಶ್ರೀಗಳ ಹೆಸರನ್ನು ಪ್ರಸ್ತಾಪ ಮಾಡಿದ್ದರು. ಆ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್(Viral) ಆಗಿತ್ತು. ಇದಾದ ಬಳಿಕ ಕ್ಷಮೆ ಕೇಳುವಂತೆ ಹಲವರು ಒತ್ತಾಯಿಸಿದ್ದಾರೆ. ಇದೀಗ ಹಂಸಲೇಖ ವಿಡಿಯೋ ಮುಖಾಂತರ ಕ್ಷಮೆ ಕೇಳಿದ್ದಾರೆ.

ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಹೇಳಿದ್ದೇನು?


ಮೈಸೂರಿನಲ್ಲಿ ನಡೆದ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹೋಗಿದ್ದರು. ಈ ವೇಳೆ  'ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ  ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಅಂತ ಹೇಳಿಕೆ ನೀಡಿದ್ದರು. ಇಷ್ಟೇ ಅಲ್ಲದೆ ದಲಿತರನ್ನು ಬಲಿತರು ತಮ್ಮ ಮನೆಗಳಿಗೆ ಕರೆದುಕೊಂಡು ಹೋಗಬೇಕು. ಅವರ ಮನೆಯಲ್ಲಿ ಊಟ ಹಾಕಬೇಕು, ದಲಿತರ ಮುಟ್ಟಿದ ಲೋಟಗಳನ್ನು ನಾವು ತೊಳೆಯುತ್ತೀವಿ ಎಂದು ಬಲಿತರು ಹೇಳಬೇಕು' ಎಂದು ಹಂಸಲೇಖ ಹೇಳಿದ್ದರು.


ಹಂಸಲೇಖ ಮಾತಿಗೆ ವ್ಯಾಪಕ ವಿರೋಧ!


ಸೋಶಿಯಲ್ ಮೀಡಿಯಾದಲ್ಲಿ ಹಂಸಲೇಖ ಅವರು ಮಾತನಾಡಿದ ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ, ಸಾಕಷ್ಟು ಪರ-ವಿರೋಧ ಚರ್ಚೆಗಳು ಆರಂಭಗೊಂಡಿವೆ. ಕೆಲವರು ಹಂಸಲೇಖ ಅವರು ಹೇಳಿದ್ದು ಸರಿಯಾಗಿಯೇ ಇದೆ ಎಂದರೆ, ಇನ್ನೂ ಕೆಲವರು, 'ಹಂಸಲೇಖ ಕ್ಷಮೆ ಕೇಳಬೇಕು. ಬಿಳಿಗಿರಿ ರಂಗಯ್ಯ, ಪೇಜಾವರ ಶ್ರೀಗಳ ಬಗ್ಗೆ ವ್ಯಂಗ್ಯ ಮಾತನಾಡಿದ್ದು ಸರಿಯಲ್ಲ..' ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅವರು ಕ್ಷಮೆ ಕೇಳದಿದ್ದರೆ ಪರಿಣಾಮ ಸರಿಯಿರಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಇದನ್ನು ಓದಿ : ನನ್ನ ತಪ್ಪು ಸಾಬೀತು ಮಾಡಿ ಪದ್ಮಶ್ರೀ ಹಿಂತಿರುಗಿಸುತ್ತೇನೆ: ಕಂಗನಾ ರನೌತ್​

ಕೊನೆಗೂ ಕ್ಷಮೆ ಕೇಳಿದ ಹಂಸಲೇಖ


ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಹಂಸಲೇಖ ಕ್ಷಮೆ ಕೇಳಿದ್ದಾರೆ. ಕ್ಷಮೆ ಕೇಳಿರುವ ವಿಡಿಯೋವನ್ನು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. 'ಮೊದಲಿಗೆ ಕ್ಷಮೆ ಇರಲಿ, ಎರಡನೇದಾಗಿಯೂ ಕ್ಷಮೆ ಇರಲಿ.. ಎಲ್ಲ ಮಾತುಗಳು ವೇದಿಕೆಗೆ ಅಲ್ಲ ಅನ್ನೋದು ನನಗೆ ಗೊತ್ತಿದೆ, ತಪ್ಪು. ಅದು ಒಂದು ಪ್ರಶಸ್ತಿ ಪುರಸ್ಕಾರ ಸಭೆ ಅದು. ಆ ವೇದಿಕೆ ಮೇಲೆ ನುಡಿದರೆ ಮುತ್ತಿನ ಹಾರದಂತೆ ಇರಬೇಕು ಎನ್ನುವಂತೆ ಇರಬೇಕಿತ್ತು. ನಾನು ಹಾಗೇ ಅಲಂಕರಿಸಬೇಕಿತ್ತು, ತಪ್ಪು. ಅಸ್ಪೃಶ್ಯತೆ ನಮ್ಮ ದೇಶಕ್ಕೆ ಅಂಟಿದ ಶಾಪ.  ಅಸ್ಪೃಶ್ಯತೆಯ ಅನಿಷ್ಟವನ್ನು ತೊಡೆದು ಹಾಕೋದಕ್ಕೆ ಪೇಜಾವರ ಶ್ರೀಗಳು ಸೇರಿದಂತೆ ಎಲ್ಲ ಗುರು-ಹಿರಿಯರು ಪ್ರಯತ್ನ, ಸಂಧಾನಗಳನ್ನು ಮಾಡುತ್ತಲೇ ಇದ್ದಾರೆ. ಆ ಪ್ರಯತ್ನ, ಸಂಧಾನಗಳ ಬಗ್ಗೆ ನನಗೆ ಅಪಾರವಾದ ಗೌರವ ಇದೆ.

ಇದನ್ನು ಓದಿ : ನೀವು ಧಾರಾವಾಹಿಗಳಲ್ಲಿ ಆಕ್ಟ್​ ಮಾಡಬೇಕಾ? ಕಲಾವಿದರಿಗೆ ಇಲ್ಲಿದೆ ಸುವರ್ಣ ಅವಕಾಶ!

‘ನಾನು ಅಲ್ಲಿ ಆಡಿದ ಕೆಲ ಮಾತುಗಳು ನನ್ನ ಹೆಂಡತಿಗೂ ಇಷ್ಟವಾಗಲಿಲ್ಲ. ಆಕೆಯ ಕ್ಷಮೆಯನ್ನೂ ನಾನು ಕೇಳಿದ್ದೇನೆ. ನಾನು ಸಂಗೀತಗಾರ. ನನಗ್ಯಾಕೆ ಈ ಟ್ರೋಲ್. ಕಂಟ್ರೋಲ್ ಆಗಿರುವುದಷ್ಟೇ ನಮ್ಮ ಕೆಲಸ. ಯಾರ ಮನಸ್ಸನ್ನು ನೋಯಿಸುವ ಇಷ್ಟವಿಲ್ಲ. ನನ್ನ ಸಂಗೀತ ಹೇಗೆ ಎಲ್ಲರಿಗೂ ಸುಖ ಕೊಡುತ್ತದೆಯೋ, ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ನನ್ನ ಮಾತುಗಳಿಂದ ನಿಮ್ಮ ಮಸನ್ಸುಗಳಿಗೆ ತಪ್ಪಾಗಿದ್ದಾರೆ ಕ್ಷಮಿಸಿ ಎಂದು ಹಂಸಲೇಖ ಹೇಳಿದ್ದಾರೆ.
Published by:Vasudeva M
First published: