Farmers Protest: ದೆಹಲಿ ರೈತ ಹೋರಾಟಕ್ಕೆ ನನ್ನ ಬೆಂಬಲವಿದೆ; ಚಿಪ್ಕೋ ಚಳುವಳಿ ನಾಯಕ ಸುಂದರ್​ಲಾಲ್​ ಬಹುಗುಣ ಘೋಷಣೆ

ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರಿಗೆ ನನ್ನ ಬೆಂಬಲ ಇದೆ. ರೈತರ ಹೋರಾಟವನ್ನು ಮನ್ನಿಸಿ ಕೇಂದ್ರ ಸರ್ಕಾರ ಈ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು" ಎಂದು ಒತ್ತಾಯಿಸಿದ್ದಾರೆ ಚಿಪ್ಕೋ ಚಳುವಳಿಯ ನೇತಾರ ಸುಂದರ್​ಲಾಲ್​ ಬಹುಗುಣ ತಿಳಿಸಿದ್ದಾರೆ.

ಚಿಪ್ಕೋ ಚಳುವಳಿಯ ನಾಯಕ ಸುಂದರ್​ಲಾಲ್​ ಬಹುಗುಣ.

ಚಿಪ್ಕೋ ಚಳುವಳಿಯ ನಾಯಕ ಸುಂದರ್​ಲಾಲ್​ ಬಹುಗುಣ.

  • Share this:
    ನವ ದೆಹಲಿ (ಡಿಸೆಂಬರ್​ 18); ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಮಸೂದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ದೇಶದ ರೈತರು ಕಳೆದ 23 ದಿನಗಳಿಂದ ಸತತವಾಗಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ರೈತ ಹೋರಾಟಕ್ಕೆ ಇಡೀ ರಾಷ್ಟ್ರಾದ್ಯಂತ ಜನ ಬೆಂಬಲ ವ್ಯಕ್ತವಾಗುತ್ತಿದೆ. ಈ ನಡುವೆ ಸರ್ಕಾರ ಮತ್ತು ರೈತ ಮುಖಂಡರ ನಡುವಿನ 6 ಸುತ್ತಿನ ಮಾತುಕತೆ ವಿಫಲವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ, ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 35 ಪ್ರತಿನಿಧಿಗಳ‌ ಮಾತುಕತೆ ನಡೆಸಿದ್ದು ಫಲ ನೀಡಿಲ್ಲ. ಈ ನಡುವೆ ರೈತ ಹೋರಾಟದಲ್ಲಿ 24 ಜನ ರೈತರು ಚಳಿ ಗಾಳಿಗೆ ಮೃತಪಟ್ಟಿದ್ದು ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸೂಚನೆ ನೀಡಿದೆ. ಇದರ ಬೆನ್ನಿಗೆ ದೇಶದ ಖ್ಯಾತ ಚಿಪ್ಕೋ ಚಳುವಳಿಯ ನೇತಾರ ಸುಂದರ್​ಲಾಲ್​ ಬಹುಗುಣ ಸಹ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿರುವುದು ರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.



    ರೈತ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಹಿರಿಯ ನಾಯಕರಾದ ಸುಂದರ್​ಲಾಲ್​ ಬಹುಗುಣ, "ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರಿಗೆ ನನ್ನ ಬೆಂಬಲ ಇದೆ. ರೈತರ ಹೋರಾಟವನ್ನು ಮನ್ನಿಸಿ ಕೇಂದ್ರ ಸರ್ಕಾರ ಈ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು" ಎಂದು ಒತ್ತಾಯಿಸಿದ್ದಾರೆ.

    ಇದನ್ನೂ ಓದಿ : Farmers Protest: ದೆಹಲಿ ರೈತ ಹೋರಾಟವನ್ನು ಬೆಂಬಲಿಸಿ ತಮಿಳುನಾಡಿನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಡಿಎಂಕೆ ಪಕ್ಷ

    ಸುಂದರ್ ಲಾಲ್ ಬಹುಗುಣ ರವರು ಉತ್ತರಖಂಡದ ತೆಹ್ರಿ ಬಳಿ ಮರೊಡ ಎಂಬ ಹಳ್ಳಿಯಲ್ಲಿ 9 ಜನವರಿ 1927ರಂದು ಜನಿಸಿದ ಸುಂದರ್​ಲಾಲ್​ ಬಹುಗುಣ ತಮ್ಮ ಜೀವನದಲ್ಲಿ ಗಾಂಧಿವಾದಿ ತತ್ವಗಳನ್ನು ಅಳವಡಿಸಿಕೊಂಡವರು. ಗಾಂಧಿಯವರ ಪ್ರೇರಣೆಯಿಂದಾಗಿ, ಕಾಡಿನ ಮರಗಳನ್ನು ರಕ್ಷಿಸಲು ಉತ್ತರಪ್ರದೇಶದಲ್ಲಿ 26 ಮಾರ್ಚ್ 1974 ಚಿಪ್ಕೊ ಚಳುವಳಿಯನ್ನು ಆರಂಭಿಸಿ ದೇಶದಾದ್ಯಂತ ಪ್ರಖ್ಯಾತರಾದರು. ಕರ್ನಾಟದಲ್ಲಿನ ಅಪ್ಪಿಕೋ ಚಳುವಳಿಗೂ ಈ ಚಳುವಳಿಯೇ ಸ್ಪೂರ್ತಿ.

    ದೆಹಲಿ ರೈತ ಹೋರಾಟಕ್ಕೆ ಅನೇಕ ರಾಜ್ಯ ಸರ್ಕಾರಗಳು ಹಾಗೂ ರಾಷ್ಟ್ರೀಯ ಪಕ್ಷಗಳೂ ಸಹ ಬೆಂಬಲ ಸೂಚಿಸುತ್ತಿರುವುದು ವಿಶೇಷ. ಈ ಹಿನ್ನೆಲೆಯಲ್ಲಿ ಇಂದು ರೈತ ಹೋರಾಟವನ್ನು ಬೆಂಬಲಿಸಿ ತಮಿಳುನಾಡಿನ ಡಿಎಂಕೆ ಪಕ್ಷ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಆಯೋಜಿಸಿದೆ. ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಮತ್ತು ಸಹೋದರಿ ಕನಿಮೊಳಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಉಪವಾಸ ಸತ್ಯಾಗ್ರಹಕ್ಕೆ ಎಲ್ಲಾ ವಿರೋಧ ಪಕ್ಷಗಳೂ ಸಹ ಬೆಂಬಲ ವ್ಯಕ್ತಪಡಿಸಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿವೆ.
    Published by:MAshok Kumar
    First published: