ಕೋಲ್ಕತ್ತಾ (ಮೇ 28); ನಾರದ ಭ್ರಷ್ಟಾಚಾರ ಪ್ರಕರಣ (Narada Sting Case) ಸಂಬಂಧ ಕೇಂದ್ರ ತನಿಖಾ ಸಂಸ್ಥೆ (CBI) ಪಶ್ಚಿಮ ಬಂಗಾಳದ ಆಡಳಿತಾರೂಢ ಪಕ್ಷ ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಹಾಲಿ ಇಬ್ಬರು ಸಚಿವರು ಹಾಗೂ ಓರ್ವ ಶಾಸಕರನ್ನು ಸೋಮವಾರ ಬಂಧಿಸಿತ್ತು. ಸಚಿವರಾದ ಫಿರ್ಹಾದ್ ಹಕೀಂ ಮತ್ತು ಸುಬ್ರಾತ್ ಮುಖರ್ಜಿ ಹಾಗೂ ಓರ್ವ ಶಾಸಕ ಮದನ್ ಮಿತ್ರ, ಕೋಲ್ಕತ್ತಾ ಮಾಜಿ ಮೇಯರ್ ಸೋವನ್ ಚಟರ್ಜಿ ಅವರನ್ನು ಕಳೆದ ವಾರ ಬಂಧಿಸಿತ್ತು. ಆದರೆ, ಮೇ 17 ರಂದು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಯಿಂದ ಬಂಧಿಸಲ್ಪಟ್ಟ ಪಶ್ಚಿಮ ಬಂಗಾಳದ ಇಬ್ಬರು ಮಂತ್ರಿಗಳು ಸೇರಿದಂತೆ ನಾಲ್ವರು ರಾಜಕಾರಣಿಗಳಿಗೆ ಶುಕ್ರವಾರ ಕೊಲ್ಕತ್ತಾ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಕೊಲ್ಕತ್ತಾ ಹೈಕೋರ್ಟ್‌ನ ಐದು ನ್ಯಾಯಾಧೀಶರ ನ್ಯಾಯಪೀಠ ಶುಕ್ರವಾರ ಟಿಎಂಸಿ ನಾಯಕರಾದ ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್, ಮದನ್ ಮಿತ್ರ ಮತ್ತು ಮಾಜಿ ಮೇಯರ್ ಮತ್ತು ಮಾಜಿ ಟಿಎಂಸಿ ಸದಸ್ಯ ಸೋವನ್ ಚಟರ್ಜಿ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.
ನಾರದಾ ಪ್ರಕರಣದಲ್ಲಿ ಬಂಧಿಸಲ್ಪಟ್ಟ ನಾಲ್ವರು ಮುಖಂಡರಿಗೆ ತಲಾ 2 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಅನ್ನು ಇಬ್ಬರು ವ್ಯಕ್ತಿಗಳ ಜಾಮೀನುಗಳೊಂದಿಗೆ ಸಲ್ಲಿಸುವಂತೆ ಹೈಕೋರ್ಟ್ ನ್ಯಾಯಪೀಠ ಕೇಳಿದೆ. ಹಗರಣದ ಬಗ್ಗೆ ಪತ್ರಿಕಾ ಸಂದರ್ಶನಗಳನ್ನು ನೀಡಬಾರದು ಹಾಗೂ ತನಿಖೆಯಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಅದು ಹೇಳಿದೆ. ಜಾಮೀನಿನ ಯಾವುದೇ ಷರತ್ತಿನ ಉಲ್ಲಂಘನೆ ಮಾಡಿದರೆ ಜಾಮೀನು ರದ್ದಾಗುತ್ತದೆ ಎಂದು ಕೊಲ್ಕತ್ತಾ ಹೈಕೋರ್ಟ್ ಎಚ್ಚರಿಸಿದೆ.
ತೃಣಮೂಲ ಕಾಂಗ್ರೆಸ್‌ನ ಉನ್ನತ ನಾಯಕರನ್ನು ಗುರಿಯಾಗಿಸಿಕೊಂಡು ಪತ್ರಕರ್ತ ಮ್ಯಾಥ್ಯೂ ಸ್ಯಾಮ್ಯುಯೆಲ್ ನಡೆಸಿದ ಕುಟುಕು ಕಾರ್ಯಾಚರಣೆಯಾಗಿದೆ ‘ನಾರದಾ ಕುಟುಕು ಕಾರ್ಯಾಚರಣೆ’. ಈ ಕಾರ್ಯಾಚರಣೆಯ ಮೂಲಕ ಹಲವಾರು ರಾಜಕಾರಣಿಗಳು ಮತ್ತು ಉನ್ನತ ದರ್ಜೆಯ ಪೊಲೀಸ್ ಅಧಿಕಾರಿಯೊಬ್ಬರು ಕಂಪನಿಗೆ ಅನಧಿಕೃತವಾಗಿ ಬೆಂಬಲಿಸುತ್ತೇವೆ ಎಂದು ನಗದು ಲಂಚ ಪಡೆದೂದನ್ನು ಬಯಲಿಗೆಳೆದಿತ್ತು. 2016 ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಲಾದ ಈ ಕುಟುಕು ಕಾರ್ಯಾಚರಣೆಯನ್ನು 2014 ರಲ್ಲಿ ಚಿತ್ರೀಕರಿಸಲಾಗಿತ್ತು.
ನಾರದಾ ಲಂಚ ಪ್ರಕರಣವನ್ನು ಉಲ್ಲೇಖಿಸಿ ಕೇಂದ್ರ ತನಿಖಾ ದಳ (ಸಿಬಿಐ) ಮೇ 17 ರಂದು ತೃಣಮೂಲ ಕಾಂಗ್ರೆಸ್ ಶಾಸಕರಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರ ಮತ್ತು ಮಾಜಿ ಸಚಿವ, ಕೋಲ್ಕತಾ ಮೇಯರ್ ಶೋವನ್ ಚಟರ್ಜಿಯನ್ನು ವಶಕ್ಕೆ ತೆಗೆದುಕೊಂಡಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ