Pariksha Pe Charcha: ವಿದ್ಯಾರ್ಥಿಗಳೊಂದಿಗೆ ನರೇಂದ್ರ ಮೋದಿ ‘ಪರೀಕ್ಷಾ ಪೆ ಚರ್ಚಾ’; 'ಭವಿಷ್ಯದ ನಾಯಕ'ರಿಗೆ ಪ್ರಧಾನಿ ಟಿಪ್ಸ್!

ಇದೀಗ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮ ಆರಂಭವಾಗಿದೆ. ದೇಶದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸುತ್ತಾ ಇದ್ದಾರೆ. ದೂರ ದರ್ಶನದಲ್ಲಿ ಈ ಕಾರ್ಯಕ್ರಮ ನೇರ ಪ್ರಸಾರವಾಗುತ್ತಿದೆ.

ಪರೀಕ್ಷಾ ಪೆ ಚರ್ಚಾ 2022

ಪರೀಕ್ಷಾ ಪೆ ಚರ್ಚಾ 2022

  • Share this:
ನವದೆಹಲಿ: ಇದೀಗ ದೇಶಾದ್ಯಂತ ವಿದ್ಯಾರ್ಥಿಗಳೊಂದಿಗೆ (Students) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಂವಾದ (Conversation) ನಡೆಸಲಿರುವ ‘ಪರೀಕ್ಷಾ ಪೆ ಚರ್ಚಾ (Pariksha Pe Cahrcha) ಕಾರ್ಯಕ್ರಮ ನಡೆಯುತ್ತಿದೆ. ಬೆಳಗ್ಗೆ 11ಕ್ಕೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ದೇಶದ ಶಿಕ್ಷಣ ತಜ್ಞರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿರೆ. ಈ ಕಾರ್ಯಕ್ರಮ ದೂರದರ್ಶನದಲ್ಲಿ (DD) ನೇರ ಪ್ರಸಾರವಾಗುತ್ತಿದೆ (Live Telecast). ನವದೆಹಲಿ (New Delhi) ಶಾಲಾ ಶಿಕ್ಷಣ ಸಚಿವಾಲಯ ಮತ್ತು ಸಾಕ್ಷರತಾ ವಿಭಾಗ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣ(Talkatora stadium)ದಲ್ಲಿ ಒಂದು ಸಾವಿರ ಶಾಲಾ ವಿದ್ಯಾರ್ಥಿಗಳೊಂದಿಗೆ, ಪರೀಕ್ಷಾ ಒತ್ತಡವನ್ನು ಹೇಗೆ ಕಡಿಮೆ ಮಾಡಬಹುದು ಎಂಬುದರ ಬಗ್ಗೆ ಸಂವಾದ ನಡೆಸುತ್ತಿದ್ದಾರೆ.

ವಿವಿಧ ಭಾಷೆಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರ

ಪ್ರಧಾನಮಂತ್ರಿ ಅವರೊಂದಿಗೆ 9 ರಿಂದ 12ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಸಂವಾದ ನಡೆಸಲಿದ್ದಾರೆ.  ಈ ಕಾರ್ಯಕ್ರಮವು ದೂರದರ್ಶನದ ಡಿಡಿ ನ್ಯಾಷನಲ್, ಡಿಡಿ ನ್ಯೂಸ್ ಮತ್ತು ಡಿಡಿ ಇಂಡಿಯಾ ಚಾನೆಲ್‍ಗಳ ಮೂಲಕ ಮಾಧ್ಯಮಗಳಲ್ಲಿ ಹಿಂದಿ ಮತ್ತು ಇತರೆ ಪ್ರಮುಖ ಭಾರತೀಯ ಭಾಷೆಗಳಲ್ಲಿ ನೇರ ಪ್ರಸಾರವಾಗುತ್ತಿದೆ.

ಮಹತ್ವ ಪಡೆದ ಪರೀಕ್ಷಾ ಪೇ ಚರ್ಚಾ

ದೇಶ ಕೋವಿಡ್-19 ಸಾಂಕ್ರಾಮಿಕದಿಂದ ಹೊರಬರುತ್ತಿರುವ ಮತ್ತು ಪರೀಕ್ಷೆಗಳು ಆಫ್ ಲೈನ್ ಮಾದರಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ 5ನೇ ಆವೃತ್ತಿಯ ಈ ಕಾರ್ಯಕ್ರಮ ವಿಶೇಷ ಮಹತ್ವ ಪಡೆದುಕೊಂಡಿದೆ. ಪ್ರಧಾನಮಂತ್ರಿ ಅವರನ್ನು ಪ್ರಶ್ನೆ ಕೇಳಲು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರನ್ನು ಹಲವು ವಿಷಯಗಳ ಕುರಿತು ಆನ್ ಲೈನ್ ಸೃಜನಾತ್ಮಕ ಬರವಣಿಗೆ ಸ್ಪರ್ಧೆ ಆಧರಿಸಿ ಅಂತಿಮ ಪಟ್ಟಿ ಸಿದ್ಧಪಡಿಸಲಾಗಿದೆ. ಈ ಸ್ಪರ್ಧೆಯನ್ನು ಮೈಗೌವ್ ವೇದಿಕೆಯ ಮೂಲಕ 2021ರ ಡಿಸೆಂಬರ್ 28ರಿಂದ 2022ರ ಫೆಬ್ರವರಿ 3ರವರೆಗೆ ಆಯೋಜಿಸಲಾಗಿತ್ತು.

ಇದನ್ನೂ ಓದಿ: IISc Bengaluruಲ್ಲಿ ಗಣಿತ ಮತ್ತು ಕಂಪ್ಯೂಟಿಂಗ್‌ನಲ್ಲಿ ಹೊಸ BTech ಕೋರ್ಸ್! ಪ್ರವೇಶ ಪಡೆಯೋದು ಹೇಗೆ?

ವಿದ್ಯಾರ್ಥಿಗಳು, ಶಿಕ್ಷಕರ ಜೊತೆ ಮೋದಿ ಚರ್ಚೆ

ಪ್ರಧಾನಿ ಮೋದಿಯವರ ಪರೀಕ್ಷಾ ಪೆ ಚರ್ಚಾವನ್ನು 2018 ರಿಂದ ವಾರ್ಷಿಕವಾಗಿ ನಡೆಸಲಾಗುತ್ತಿದೆ. ಇಲ್ಲಿ ಪ್ರಧಾನ ಮಂತ್ರಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ನೇರವಾಗಿ ಸಂವಾದ ಮಾಡುತ್ತಾರೆ. ದೇಶದಲ್ಲಿ ಪರೀಕ್ಷೆಯ ಋತುವಿನ ಪ್ರಾರಂಭದಲ್ಲಿ ಈವೆಂಟ್ ನಡೆಯುತ್ತದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಸೇರಿದಂತೆ ಹಲವಾರು ಬೋರ್ಡ್‌ಗಳು ಏಪ್ರಿಲ್ 26 ರಿಂದ ಟರ್ಮ್ 2 ಬೋರ್ಡ್ ಪರೀಕ್ಷೆಗಳನ್ನು ನಡೆಸುತ್ತವೆ. ಜಂಟಿ ಪ್ರವೇಶ ಪರೀಕ್ಷೆ (JEE) ಮುಖ್ಯ ಸೇರಿದಂತೆ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳು ಸಹ ಏಪ್ರಿಲ್‌ನಲ್ಲಿ ನಡೆಯಲಿದೆ. PPC 2022 ಕ್ಕೆ 12.12 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 2.71 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಈ ವರ್ಷದ PPC ಗಾಗಿ ನೋಂದಾಯಿಸಿಕೊಂಡಿದ್ದಾರೆ.

ಪರೀಕ್ಷಾ ಪೆ ಚರ್ಚಾಗೆ ಆಯ್ಕೆ ಹೇಗೆ?

‘ಪರೀಕ್ಷಾ ಪೆ ಚರ್ಚಾ’ಗೆ ಪ್ರವೇಶವು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರಿಗೆ ಕೆಲವು ಆನ್‌ಲೈನ್ ಸ್ಪರ್ಧೆಗಳನ್ನು ಆಧರಿಸಿರುತ್ತದೆ. ವಿಜೇತರು ನೇರವಾಗಿ ಪ್ರಧಾನ ಮಂತ್ರಿಯೊಂದಿಗೆ ಸಂವಾದ ನಡೆಸುವ ಅವಕಾಶವನ್ನು ಪಡೆಯುತ್ತಾರೆ. ಈ ವಿಶೇಷ ವಿಜೇತರು ತಮ್ಮ ಹಸ್ತಾಕ್ಷರದ ಛಾಯಾಚಿತ್ರದ ಡಿಜಿಟಲ್ ಸ್ಮರಣಿಕೆಯನ್ನು ಪಡೆಯುತ್ತಾರೆ. ಅವರಿಗೆ ಭಾಗವಹಿಸುವಿಕೆ ಪ್ರಮಾಣ ಪತ್ರವನ್ನೂ ನೀಡಲಾಗುವುದು.

ಇದನ್ನೂ ಓದಿ: Explained: ಅಲ್ಲೂ ಇಲ್ಲ, ಇಲ್ಲೂ ಆಗುತ್ತೋ ಗೊತ್ತಿಲ್ಲ! ಉಕ್ರೇನ್‌ನಿಂದ ಬಂದ ವಿದ್ಯಾರ್ಥಿಗಳ ಮುಂದಿನ ಭವಿಷ್ಯವೇನು?

ಕಾರ್ಯಕ್ರಮದಲ್ಲಿ ರಾಜ್ಯದ 60 ವಿದ್ಯಾರ್ಥಿಗಳು

ಪ್ರಧಾನಿ ನರೇಂದ್ರ ಮೋದಿ ಅವರ ಐದನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಕರ್ನಾಟಕದ ವಿವಿಧ ಜಿಲ್ಲೆಯ 60 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ಪೈಕಿ  ಎಂ.ಬಿ. ಜವಾಹರ್ ನವೋದಯ ವಿದ್ಯಾಲಯದ ವಿದ್ಯಾರ್ಥಿ ತರುಣ್  ಪ್ರಶ್ನೆ ಕೇಳಲಿದ್ದಾರೆ.
Published by:Annappa Achari
First published: