• Home
  • »
  • News
  • »
  • national-international
  • »
  • Minority Affairs Ministry: ಮೋದಿ ಸರ್ಕಾರದಿಂದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ರದ್ದು?

Minority Affairs Ministry: ಮೋದಿ ಸರ್ಕಾರದಿಂದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ರದ್ದು?

ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ

ಸಚಿವಾಲಯವು ಜಾರಿಗೊಳಿಸುತ್ತಿರುವ ಎಲ್ಲಾ ಯೋಜನೆಗಳನ್ನು ಸರಕಾರ ಮುಂದುವರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ಅಲ್ಪಸಂಖ್ಯಾತ ವ್ಯವಹಾರಗಳಿಗೆ ಸ್ವತಂತ್ರ ಸಚಿವಾಲಯದ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ ಎಂದು ಸರಕಾರಿ ಮೂಲವು ಸ್ಪಷ್ಟಪಡಿಸಿರುವುದಾಗಿಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮುಂದೆ ಓದಿ ...
  • Share this:

    ನವದೆಹಲಿ: 2006 ರಲ್ಲಿ ಯುಪಿಎ ಆಡಳಿತದಿಂದ ಸ್ಥಾಪಿಸಲಾದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು (Minority Affairs Ministry) ರದ್ದುಗೊಳಿಸಲು ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ವಿಲೀನಗೊಳಿಸಲು ಮೋದಿ ಸರ್ಕಾರ (Modi Govt) ಯೋಜಿಸುತ್ತಿದೆ ಎಂದು ಸುದ್ದಿಪತ್ರಿಕೆ ವರದಿ ಮಾಡಿದೆ. ಸಚಿವಾಲಯವು ಜಾರಿಗೊಳಿಸುತ್ತಿರುವ ಎಲ್ಲಾ ಯೋಜನೆಗಳನ್ನು ಸರಕಾರ ಮುಂದುವರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ಅಲ್ಪಸಂಖ್ಯಾತ ವ್ಯವಹಾರಗಳಿಗೆ ಸ್ವತಂತ್ರ ಸಚಿವಾಲಯದ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ ಎಂದು ಸರಕಾರಿ ಮೂಲವು ಸ್ಪಷ್ಟಪಡಿಸಿರುವುದಾಗಿಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.


    ಯುಪಿಎ ಸಂಧಾನ ನೀತಿಯ ಭಾಗವಾಗಿ ಸಚಿವಾಲಯವನ್ನು ರಚಿಸಲಾಗಿದೆ ಎಂಬುದಾಗಿ ಸರಕಾರಗಳು ನಂಬಿವೆ ಎಂದು ಮೂಲಗಳು ತಿಳಿಸಿವೆ. ಯುಪಿಎ ಸರಕಾರವು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ನಿರ್ಮಿಸಿತ್ತು. ಕೇಂದ್ರ ಸರಕಾರವು ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆಯಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಯಲ್ಲಿ ಸಚಿವಾಲಯವನ್ನು ಮರಳಿ ತರಲು ಬಯಸಿದೆ.


    ಇದನ್ನೂ ಓದಿ: Mallikarjun Kharge: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಖರ್ಗೆ ನಾಮಪತ್ರ, ಕನ್ನಡಿಗನ 'ಕೈ'ಗೆ ಸಿಗುತ್ತಾ ಅಧಿಕಾರ?


    ಅಲ್ಪಸಂಖ್ಯಾತರ ಅಭಿವೃದ್ಧಿ


    2006 ರಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ರಚನೆಯ ಮೊದಲು ಸಚಿವಾಲಯದ ಅಡಿಯಲ್ಲಿ ಇಲಾಖೆ ಕಾರ್ಯ ನಿರ್ವಹಿಸುತ್ತಿತ್ತು. ಮಾಜಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರ ಮೇಲ್ವಿಚಾರಣೆಯಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಕಾರ್ಯನಿರ್ವಹಿಸುತ್ತಿತ್ತು. ಆದರೆ ತಮ್ಮ ರಾಜ್ಯಸಭಾ ಅವಧಿ ಮುಗಿದ ನಂತರ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


    ಸಮಾಜ ವಿಭಜಿಸಲು ಬಿಜೆಪಿ ಯತ್ನ ಎಂದು ಆರೋಪ


    "ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸುವ ಉದ್ದೇಶವು ಅಲ್ಪಸಂಖ್ಯಾತರನ್ನು ಅವರ ಅಭಿವೃದ್ಧಿಗೆ ಕೇಂದ್ರೀಕೃತ ಕಾರ್ಯಕ್ರಮಗಳೊಂದಿಗೆ ಮುಖ್ಯವಾಹಿನಿಗೆ ತರುವುದಾಗಿದೆ. ಆದರೆ, ಬಿಜೆಪಿ ಸರಕಾರ ಅಲ್ಪಸಂಖ್ಯಾತರ ವಿರುದ್ಧದ ಎಲ್ಲ ಅವಕಾಶಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ,'' ಎಂದು ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಸೈಯದ್ ನಸೀರ್ ಹುಸೇನ್ ಹೇಳಿದ್ದಾರೆ. ಅಲ್ಲದೇ ಉದ್ದೇಶಿತ ನಡೆ ಸಮಾಜವನ್ನು ವಿಭಜಿಸುವ ಬಿಜೆಪಿಯ ಮತ್ತೊಂದು ಪ್ರಯತ್ನ ಎಂದು ಬಣ್ಣಿಸಿದ್ದಾರೆ.




    ಸಚಿವಾಲಯ ರದ್ದುಪಡಿಸುವುದು ಸಂವಿಧಾನದ ಆಶಯಕ್ಕೆ ವಿರುದ್ಧ


    ಮುಸ್ಲಿಮರು, ಕ್ರಿಶ್ಚಿಯನ್ನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಜೈನರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಹೆಚ್ಚು ಕೇಂದ್ರೀಕೃತ ವಿಧಾನವನ್ನು ಖಚಿತಪಡಿಸಿಕೊಳ್ಳಲು ಆಗಿನ ಯುಪಿಎ ಸರ್ಕಾರವು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರೂಪಿಸಿತ್ತು.


    ಸಂವಿಧಾನದ ಆಶಯಕ್ಕೆ ವಿರೋಧ


    ಸಚಿವಾಲಯ ರದ್ದುಪಡಿಸುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇದು ದೇಶದ ಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಹಾನಿ ಮಾಡುತ್ತದೆ. ಬದಲಾಗಿ ಹೆಚ್ಚಿನ ಹಣ ಮಂಜೂರು ಮಾಡುವತ್ತ ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸಚಿವಾಲಯವನ್ನು ಬಲಪಡಿಸುವತ್ತ ಸರಕಾರ ಗಮನಹರಿಸಬೇಕು ಎಂಬುದು ನಸೀರ್ ಅವರ ವಾದವಾಗಿದೆ.


    ಅಲ್ಪಸಂಖ್ಯಾತರಿಗೆ ಒತ್ತು ನೀಡಲು ಆರಂಭವಾದ ಸಚಿವಾಲಯ


    ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ರೂಪಿಸಲಾಗಿದೆ ಮತ್ತು 2006 ರ ಜನವರಿ 29 ರಂದು ಅಧಿಸೂಚಿತ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಸಿಖ್, ಪಾರ್ಸಿಗಳು ಮತ್ತು ಜೈನರಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನಹರಿಸುವ ವಿಧಾನವನ್ನು ಖಚಿತಪಡಿಸಿಕೊಳ್ಳಲು ರಚಿಸಲಾಗಿದೆ. ಸಚಿವಾಲಯದ ಆದೇಶವು ಒಟ್ಟಾರೆ ನೀತಿ ಮತ್ತು ಯೋಜನೆ, ಸಮನ್ವಯ, ಮೌಲ್ಯಮಾಪನ ಮತ್ತು ನಿಯಂತ್ರಕ ಚೌಕಟ್ಟಿನ ಪರಿಶೀಲನೆ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಅನುಕೂಲಕ್ಕಾಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಒಳಗೊಂಡಿದೆ.


    ಇದನ್ನೂ ಓದಿ: Ponniyin Selvan: ಈ ಜನಪ್ರಿಯ ಕಾದಂಬರಿಯೇ ಮಣಿರತ್ನಂ ಸಿನಿಮಾಕ್ಕೆ ಸ್ಫೂರ್ತಿ, ಅಷ್ಟಕ್ಕೂ ‘ಪೊನ್ನಿಯನ್‌ ಸೆಲ್ವನ್‌ʼನಲ್ಲಿ ಏನಿದೆ?


    ಇದನ್ನೂ ಓದಿ: 


    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಪ್ರಸ್ತುತ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿಕೊಂಡಿದ್ದಾರೆ. ಮುಕ್ತಾರ್ ಅಬ್ಬಾಸ್ ನಖ್ವಿ ಅವರು ಜುಲೈನಲ್ಲಿ ತಮ್ಮ ರಾಜ್ಯಸಭಾ ಅವಧಿ ಮುಗಿದ ನಂತರ ರಾಜೀನಾಮೆ ನೀಡಿದರು.

    Published by:Precilla Olivia Dias
    First published: