ಚಾಮರಾಜನಗರ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Karnataka Assembly Election 2023) ಹತ್ತಿರ ಬರುತ್ತಿದ್ದಂತೆ ಕರ್ನಾಟಕದತ್ತ ಪದೇ ಪದೇ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಈಗಾಗಲೇ ಆರು ಬಾರಿ ರಾಜ್ಯಕ್ಕೆ ಬಂದಿದ್ದು, ಇದೀಗ ಏಳನೇ ಬಾರಿಗೆ ಮತ್ತೊಮ್ಮೆ ರಾಜ್ಯಕ್ಕೆ ಬರಲಿದ್ದಾರೆ.
ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕರ್ನಾಟಕಕ್ಕೆ ಬರಲಿದ್ದು, ವಿಶೇಷ ಅಂದ್ರೆ ಈ ಬಾರಿ ಮೋದಿ ಅವರು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ. ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆ ರಾಜ್ಯಕ್ಕೆ ಆಗಮಿಸಲಿರುವ ಮೋದಿ, ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜೊತೆಗೆ ಇತ್ತೀಚಿನ ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.
ಇದನ್ನೂ ಓದಿ: Narendra Modi: ಪದ್ಮಶ್ರೀ ಪುರಸ್ಕೃತ ಸಾಧಕರಿಗೆ ನಮೋ ಎಂದ ಮೋದಿ, ಅಷ್ಟಕ್ಕೂ ಹಿರ್ಬಾಯಿ ಇಬ್ರಾಹಿಂ ಲೋಬಿ ಅವರ ಸಾಧನೆಯೇನು?
ಮೈಸೂರಿನಲ್ಲಿ ಕಾರ್ಯಕ್ರಮ ಮುಕ್ತಾಯಗೊಳಿಸಿ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಬಂಡೀಪುರದ ಸಫಾರಿ ರಸ್ತೆಗಳನ್ನು ಇಲಾಖೆ ಸರಿಪಡಿಸುತ್ತಿದ್ದು, ಮೇಲುಕಾಮನಹಳ್ಳಿ ಬಳಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಿರಿಯ ಅಧಿಕಾರಿಗಳು ಈಗಾಗಲೇ ಬಂಡೀಪುರಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸಫಾರಿ ನಂತರ ಮೋದಿ ಅವರು ತಮಿಳುನಾಡಿನ ಮದುಮಲೈ ಅರಣ್ಯಕ್ಕೆ ಭೇಟಿ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಳೆದ ವಾರ ಅಂದ್ರೆ ಮಾರ್ಚ್ 16ರಂದು ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು-ಮೈಸೂರು ಎಕ್ಸಪ್ರೆಸ್ವೇ ಸೇರಿದಂತೆ ಒಟ್ಟು 16,000 ಕೋಟಿ ಮೌಲ್ಯದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಕಾರ್ಯಕ್ರಮ ನೆರವೇರಿಸಿದ್ದರು. ಆ ಬಳಿಕ ಮೋದಿ ಅವರು ರಾಜ್ಯಕ್ಕೆ ಬಂದಿರಲಿಲ್ಲ. ಇದೀಗ ರಾಜ್ಯದಲ್ಲಿ ಚುನಾವಣೆ ಘೋಷಣೆ ಆದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಬರುತ್ತಿದ್ದು, ಚುನಾವಣೆಯೂ ಹತ್ತಿರದಲ್ಲೇ ಇರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರ ಬಂಡೀಪುರ ಸಫಾರಿ ಭೇಟಿ ಯಾವ ರೀತಿ ಕರ್ನಾಟಕದ ಜನರನ್ನು ಮರುಳು ಮಾಡಲಿದೆ ಅನ್ನೋದನ್ನು ಕಾದು ನೋಡಬೇಕಿದೆ.
ಮೈಸೂರಿನಲ್ಲಿ ಕಾರ್ಯಕ್ರಮ ಮುಕ್ತಾಯಗೊಳಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ. ಈ ಹಿನ್ನೆಲೆ ಬಂಡೀಪುರದ ಸಫಾರಿ ರಸ್ತೆಗಳನ್ನು ಇಲಾಖೆ ಸರಿಪಡಿಸುತ್ತಿದ್ದು, ಮೇಲುಕಾಮನಹಳ್ಳಿ ಬಳಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಿರಿಯ ಅಧಿಕಾರಿಗಳು ಈಗಾಗಲೇ ಬಂಡೀಪುರಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸಫಾರಿ ನಂತರ ಮೋದಿ ಅವರು ತಮಿಳುನಾಡಿನ ಮದುಮಲೈ ಅರಣ್ಯಕ್ಕೆ ಭೇಟಿ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ದೇಶದ 9 ಹುಲಿ ಯೋಜನೆಗಳ ಪೈಕಿ ಬಂಡೀಪುರ ಹುಲಿ ಯೋಜನೆ ದೇಶದಲ್ಲೇ ಮೊದಲ ಬಾರಿಗೆ ಘೋಷಣೆಯಾಗಿತ್ತು. ಬಂಡೀಪುರವನ್ನು 1974 ರಲ್ಲಿ ಪ್ರಾಜೆಕ್ಟ್ ಟೈಗರ್ ಅಡಿಯಲ್ಲಿ ಹುಲಿ ಮೀಸಲು ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದೆ. ಈ ಉದ್ಯಾನವನವು ಚಾಮರಾಜನಗರ ಜಿಲ್ಲೆಯ ಗುಂಡ್ಲು ಪೇಟೆ ತಾಲೂಕಿನಲ್ಲಿ ಇದ್ದು, ಮೈಸೂರು ನಗರದಿಂದ 80 ಕಿಲೋಮೀಟರ್ ದೂರದಲ್ಲಿ ಊಟಿಯ ಪ್ರಮುಖ ಪ್ರವಾಸಿ ತಾಣವಾಗಿದೆ. ಹೀಗಾಗಿ ಇಲ್ಲಿಗೆ ಪ್ರತಿನಿತ್ಯ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಉದ್ಯಾನವು 874 ಚದರ ಕಿಲೋ ಮೀಟರ್ ಪ್ರದೇಶವನ್ನು ಹೊಂದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ