ಪರಮೇಶ್ವರ್ ಮೇಲೆ ಐಟಿ ದಾಳಿ ಖಂಡಿಸಿ ದೆಹಲಿಯಲ್ಲಿ ವಿತ್ತ ಸಚಿವೆ ನಿವಾಸದ ಮುಂದೆ ಯೂತ್ ಕಾಂಗ್ರೆಸ್ ಪ್ರತಿಭಟನೆ

ಕರ್ನಾಟಕದಲ್ಲಿ ಡಾ.ಜಿ.ಪರಮೇಶ್ವರ್ ಅವರ ಮನೆ ಮೇಲೆ ಐಟಿ ದಾಳಿ ವಿಚಾರವಾಗಿ ಮಾತನಾಡಿದ ಶ್ರೀನಿವಾಸ್, ನಿರ್ಮಲಾ ಸೀತಾರಾಮನ್  ರಾಜ್ಯಸಭೆಗೆ ಕರ್ನಾಟಕದಿಂದಲೇ ಆಯ್ಕೆಯಾಗಿ ಈಗ ಆ ರಾಜ್ಯಕ್ಕೆ ಮೋಸ ಮಾಡಿದ್ದಾರೆ. ರಾಜ್ಯಕ್ಕೆ ಬಂದರೆ ಅವರಿಗೆ ಬಹಿಷ್ಕಾರ ಹಾಕಬೇಕು. ಐಟಿ ದಾಳಿಯಿಂದ ಪರಮೇಶ್ವರ್ ಸಹಾಯಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

HR Ramesh | news18-kannada
Updated:October 12, 2019, 5:16 PM IST
HR Ramesh | news18-kannada
Updated: October 12, 2019, 5:16 PM IST
ನವದೆಹಲಿ: ಡಾ.ಜಿ.ಪರಮೇಶ್ವರ್ ಮನೆ ಮೇಲೆ ಐಟಿ ದಾಳಿ ಸೇರಿದಂತೆ ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ಖಂಡಿಸಿ ರಾಷ್ಟ್ರೀಯ ಯೂತ್ ಕಾಂಗ್ರೆಸ್ ಕಾರ್ಯಕರ್ತರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನಿವಾಸದೆದುರು ಇಂದು ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಎನ್​ಎಸ್​ಯುಐ ಸಹಕಾರ ನೀಡಿತು. ಪ್ರತಿಭಟನೆಯಲ್ಲಿ ಮೋದಿ, ಅಮಿತ್ ಶಾ ವಿರುದ್ದ ಘೋಷಣೆ ಕೂಗಲಾಯಿತು. ಮೋದಿ ಭಾವಚಿತ್ರಕ್ಕೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ನಿರ್ಮಲಾ ಸೀತಾರಾಮನ್ ನಿವಾಸಕ್ಕೆ ಮುತ್ತಿಗೆ ಹಾಕಲು ಕಾರ್ಯಕರ್ತರು ಯತ್ನಿಸಿದರು. ಕೇಂದ್ರ ಸಚಿವರ ನಿವಾಸಕ್ಕೆ ಭಾರೀ ಭದ್ರತೆ ಒದಗಿಸಿದ್ದ ದೆಹಲಿ ಪೊಲೀಸರು ಮುತ್ತಿಗೆ ಯತ್ನವನ್ನು ತಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಇಡಿ, ಐಟಿ, ಸಿಬಿಐ ಸಂಸ್ಥೆಗಳನ್ನು ಪ್ರಧಾನಿ ಮೋದಿ ಅವರು ಪಂಜರಲ್ಲಿ ಇಟ್ಟಿದ್ದಾರೆ. ಸ್ವಾಯತ್ತ ಸಂಸ್ಥೆಗಳು ಸ್ವತಂತ್ರವಾಗಿ ಕೆಲಸ ಮಾಡಲು ಕೇಂದ್ರ ಸರ್ಕಾರ ಅವಕಾಶ ಕೊಡುತ್ತಿಲ್ಲ.  ಮಹಾರಾಷ್ಟ್ರ, ಹರಿಯಾಣದಲ್ಲಿ ಬಿಜೆಪಿ ಸೋಲಲಿದೆ. ಹೀಗಾಗಿ ಕಾಂಗ್ರೆಸ್ ಪ್ರಭಾವಿ ನಾಯಕರ ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ಮಾಡಿಸಲಾಗುತ್ತಿದೆ. ಕಾಂಗ್ರೆಸ್ ನಾಯಕರನ್ನು ಚುನಾವಣೆಯಲ್ಲಿ ಎದುರಿಸುವ ತಾಕತ್ತು ಬಿಜೆಪಿಗೆ ಇಲ್ಲ. ಚುನಾವಣೆಯಲ್ಲಿ ಬಿಜೆಪಿ ತನ್ನ ತಾಕತ್ತು ಪ್ರದರ್ಶನ ಮಾಡಲಿ ಎಂದು ಆಕ್ರೋಶ ಹೊರಹಾಕಿದರು.

ಇದನ್ನು ಓದಿ: ಪರಮೇಶ್ವರ್ ಆಪ್ತ ಸಹಾಯಕ ರಮೇಶ್​ ಆತ್ಮಹತ್ಯೆ ಸಂಬಂಧ ಆದಾಯ ತೆರಿಗೆ ಇಲಾಖೆ ನೀಡಿದ ಸ್ಪಷ್ಟನೆ ಏನು?

ಕರ್ನಾಟಕದಲ್ಲಿ ಡಾ.ಜಿ.ಪರಮೇಶ್ವರ್ ಅವರ ಮನೆ ಮೇಲೆ ಐಟಿ ದಾಳಿ ವಿಚಾರವಾಗಿ ಮಾತನಾಡಿದ ಶ್ರೀನಿವಾಸ್, ನಿರ್ಮಲಾ ಸೀತಾರಾಮನ್  ರಾಜ್ಯಸಭೆಗೆ ಕರ್ನಾಟಕದಿಂದಲೇ ಆಯ್ಕೆಯಾಗಿ ಈಗ ಆ ರಾಜ್ಯಕ್ಕೆ ಮೋಸ ಮಾಡಿದ್ದಾರೆ. ರಾಜ್ಯಕ್ಕೆ ಬಂದರೆ ಅವರಿಗೆ ಬಹಿಷ್ಕಾರ ಹಾಕಬೇಕು. ಐಟಿ ದಾಳಿಯಿಂದ ಪರಮೇಶ್ವರ್ ಸಹಾಯಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಇದಕ್ಕೆಲ್ಲಾ  ಕೇಂದ್ರ ಸರ್ಕಾರವೇ ಕಾರಣ. ಇದರ ಜವಾಬ್ದಾರಿಯನ್ನು ಕೇಂದ್ರವೇ ಹೊರಬೇಕು ಎಂದು ಆರೋಪಿಸಿದರು.

ದಿನೇಶ್ ಗುಂಡೂರಾವ್ ಆಕ್ರೋಶ:

ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ಮಾಡಲಾಗುತ್ತಿದೆ. ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಮೇಶ್ ಸಾವಿಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.
Loading...


First published:October 12, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...