Navjot Singh Sidhu: ನವಜೋತ್ ಸಿಂಗ್ ಸಿಧುಗೆ ಪಂಜಾಬ್ ಡಿಸಿಎಂ ಪಟ್ಟ?; ಅಸಮಾಧಾನ ಶಮನಕ್ಕೆ ಮುಂದಾದ ಕಾಂಗ್ರೆಸ್

Navjot Singh Sidhu: ಮೂಲಗಳ ಪ್ರಕಾರ, ಅತೃಪ್ತ ಶಾಸಕ ನವಜೋತ್ ಸಿಂಗ್ ಸಿಧು ಅವರಿಗೆ ಕಾಂಗ್ರೆಸ್​ ಪಂಜಾಬ್​ನ ಉಪಮುಖ್ಯಮಂತ್ರಿ ಸ್ಥಾನ ನೀಡುವ ಲೆಕ್ಕಾಚಾರ ನಡೆಸಿದೆ ಎನ್ನಲಾಗುತ್ತಿದೆ. ಸಿಧು ಇಂದು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ.

ನವಜೋತ್ ಸಿಂಗ್ ಸಿಧು

ನವಜೋತ್ ಸಿಂಗ್ ಸಿಧು

  • Share this:
ನವದೆಹಲಿ (ಮಾ. 17): ಮಾಜಿ ಸಚಿವ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರನ್ನು ಇಂದು ಭೇಟಿಯಾಗಲಿದ್ದು, ಈ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಮೂಲಗಳ ಪ್ರಕಾರ, ಅತೃಪ್ತ ಶಾಸಕ ನವಜೋತ್ ಸಿಂಗ್ ಸಿಧು ಅವರಿಗೆ ಕಾಂಗ್ರೆಸ್​ ಪಂಜಾಬ್​ನ ಉಪಮುಖ್ಯಮಂತ್ರಿ ಸ್ಥಾನ ನೀಡುವ ಲೆಕ್ಕಾಚಾರ ನಡೆಸಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಸಿಎಂ ಜೊತೆಗಿನ ನವಜೋತ್ ಸಿಂಗ್ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. 2022ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಕಾಂಗ್ರೆಸ್​ ಅಥವಾ ನವಜೋತ್ ಸಿಂಗ್ ಸಿಧು ಯಾವುದೇ ಸ್ಪಷ್ಟನೆ ನೀಡಿಲ್ಲ.

ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ಸಂಪುಟದಲ್ಲಿ ನವಜೋತ್ ಸಿಂಗ್ ಸಿಧು ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. 2022ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ನವಜೋತ್ ಸಿಂಗ್ ಸಿಧು ಪ್ರಮುಖ ಪಾತ್ರ ವಹಿಸಲಿದ್ದಾರೆ ಎನ್ನಲಾಗುತ್ತಿದೆ. ಇಂದು ಮಧ್ಯಾಹ್ನ ಸಿಎಂ ಅಮರೀಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಭೇಟಿಯಾಗಲಿದ್ದಾರೆ ಎಂದು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದೆ.

2004ರಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ನವಜೋತ್ ಸಿಂಗ್ ಸಿಧು 2017ರಲ್ಲಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು. ಬಳಿಕ ಅಮೃತಸರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸಿಎಂ ಅಮರೀಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು. ಅದನ್ನು ಶಮನ ಮಾಡಲು ಕಾಂಗ್ರೆಸ್ ಮುಂದಾಗಿತ್ತು.

ಸಿಧು ಮತ್ತು ಸಿಎಂ ಅಮರೀಂದರ್ ಸಿಂಗ್ ಇಬ್ಬರೂ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ, ಈ ಬಾರಿಯ ಚುನಾವಣಾ ಪ್ರಚಾರದ ಜವಾಬ್ದಾರಿಯನ್ನು ಇವರಿಬ್ಬರಿಗೆ ನೀಡಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗುತ್ತಿದೆ.
Published by:Sushma Chakre
First published: