NBCC Recruitment 2020: ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ: ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,500ರೂ ವೇತನವನ್ನು ಸಿಗಲಿದೆ.

Jobs

Jobs

  • Share this:
    ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ (ಎನ್‌ಬಿಸಿಸಿ) ಖಾಲಿ ಇರುವ ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. 15 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ. ನವೆಂಬರ್​ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

    ವಿದ್ಯಾರ್ಹತೆ: ಎಂಬಿಎ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವಯೋಮಿತಿ: 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

    ವೇತನ: ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,500ರೂ ವೇತನವನ್ನು ಸಿಗಲಿದೆ.

    ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ: ಅರ್ಜಿಸಲ್ಲಿಸುವವರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಅರ್ಜಿ ಸಲ್ಲಿಸುವುದು ಹೇಗೆ?:

    ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.nbccindia.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ. ನಂತರ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 10,2020ರೊಳಗೆ ಕಚೇರಿಗೆ ತಲುಪಿಸಬೇಕು.

    ಕಚೇರಿ ವಿಳಾಸ:

    General Manager (HRM), NBCC (I) Limited, NBCC bhawan, 2nd floor, corporate office, Near lodhi hotel, lodhi road, new delhi-110003
    First published: