ದೆಹಲಿ ವಿಧಾನಸಭಾ ಚುನಾವಣೆ: 30 ಮಂದಿ ನಾಮಪತ್ರ ವಾಪಸ್​​: ಅಖಾಡದಲ್ಲಿ ಉಳಿದವರೆಷ್ಟು?

ಇನ್ನು ಚುನಾವಣಾ ಆಯೋಗದ ಪ್ರಕಾರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 1 ಕೋಟಿ 46 ಲಕ್ಷ 92 ಸಾವಿರದ 136 ಮತದಾರರಿದ್ದಾರೆ. ಮತ ಚಲಾವಣೆಗಾಗಿ 13, 750 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಹಾಗೆಯೇ ದೆಹಲಿಯಾದ್ಯಂತ ಭದ್ರತೆಗಾಗಿ 90 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದೆ.

Ganesh Nachikethu | news18-kannada
Updated:January 25, 2020, 7:07 AM IST
ದೆಹಲಿ ವಿಧಾನಸಭಾ ಚುನಾವಣೆ: 30 ಮಂದಿ ನಾಮಪತ್ರ ವಾಪಸ್​​: ಅಖಾಡದಲ್ಲಿ ಉಳಿದವರೆಷ್ಟು?
ಸಿಎಂ ಅರವಿಂದ್​​ ಕೇಜ್ರಿವಾಲ್​​
  • Share this:
ನವದೆಹಲಿ(ಜ.25): ದೆಹಲಿ ವಿಧಾನಸಭೆ ಚುನಾವಣೆ ನಾಮಪತ್ರ ಹಿಂಪಡೆಯುವ ದಿನಾಂಕ ಮುಕ್ತಾಯಗೊಂಡಿದೆ. ನಿನ್ನೆ ಶುಕ್ರವಾರ 30 ಮಂದಿ ನಾಮಪತ್ರ ವಾಪಸ್ಸು ಪಡೆಯುವ ಮೂಲಕ ಕಣದಿಂದ ಹಿಂದೆ ಸರಿದಿದ್ಧಾರೆ. ಇಲ್ಲಿನ ಒಟ್ಟು 70 ಕ್ಷೇತ್ರಗಳಲ್ಲಿ ಒಟ್ಟು 668 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇನ್ನು ಚುನಾವಣಾ ಆಯೋಗದ ಪ್ರಕಾರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 1 ಕೋಟಿ 46 ಲಕ್ಷ 92 ಸಾವಿರದ 136 ಮತದಾರರಿದ್ದಾರೆ. ಮತ ಚಲಾವಣೆಗಾಗಿ 13, 750 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಹಾಗೆಯೇ ದೆಹಲಿಯಾದ್ಯಂತ ಭದ್ರತೆಗಾಗಿ 90 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದೆ.

ದೆಹಲಿಯ ಆರನೇ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ಫೆಬ್ರವರಿ 8ರಂದು ಏಕ ಹಂತದಲ್ಲಿ ಚುನಾವಣೆ ನಡೆಯಲಿದೆ. ಫೆ. 11ರಂದು ಮತ ಎಣಿಕೆ ಆಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ತಿಳಿಸಿದ್ದಾರೆ. ಈ ಮಧ್ಯೆ ಇಲ್ಲಿನ ವಿಧಾನಸಭೆ ಚುನಾವಣೆ ಗೆಲ್ಲಲು ಮುಖ್ಯಮಂತ್ರಿ ಅರವಿಂದ್​​​ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಮತ್ತು ಕಾಂಗ್ರೆಸ್​​​ ಕಸರತ್ತು ನಡೆಸುತ್ತಿದೆ. ಈ ಮಧ್ಯೆಯೇ ನವದೆಹಲಿ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಸಿಎಂ ಅರವಿಂದ್​​ ಕೇಜ್ರಿವಾಲ್​​ರನ್ನು ಸೋಲಿಸಲು ಕಾಂಗ್ರೆಸ್​ ಮತ್ತು ಬಿಜೆಪಿ ಸೇರಿದಂತೆ ಹಲವರು ಯತ್ನಿಸುತ್ತಿದ್ಧಾರೆ.

ಇದನ್ನೂ ಓದಿ: ಎಚ್​​ಡಿಕೆ, ಪ್ರಕಾಶ್​​​ ರಾಜ್​​​, ನಿಜಗುಣಾನಂದ ಸ್ವಾಮಿ ಸೇರಿದಂತೆ 15 ಮಂದಿಗೆ ಕೊಲೆ ಬೆದರಿಕೆ

ದೆಹಲಿ ವಿಧಾನಸಭೆ 70 ಸದಸ್ಯರ ಬಲ ಹೊಂದಿದೆ. 2015ರಲ್ಲಿ ನಡೆದ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಬರೋಬ್ಬರಿ 67 ಸ್ಥಾನಗಳನ್ನು ಗೆದ್ದು ಬಹುತೇಕ ಕ್ಲೀನ್ ಸ್ವೀಪ್ ಮಾಡಿತ್ತು. ಅದಕ್ಕೂ ಹಿಂದೆ 2013ರಲ್ಲಿ ನಡೆದ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿತ್ತು. ಬಿಜೆಪಿ 31, ಆಪ್ ಪಕ್ಷ 28 ಹಾಗೂ ಕಾಂಗ್ರೆಸ್ 8 ಸ್ಥಾನ ಗಳಿಸಿದ್ದವು. ಬಿಜೆಪಿ ಸರ್ಕಾರ ರಚಿಸಲು ಮುಂದೆ ಬರಲಿಲ್ಲ. ರಾಷ್ಟ್ರಪತಿ ಆಳ್ವಿಕೆ ಸನ್ನಿಹಿತ ಎಂದನಿಸುತ್ತಿರುವಂತೆಯೇ ಕಾಂಗ್ರೆಸ್ ಪಕ್ಷದ ಬಾಹ್ಯ ಬೆಂಬಲದೊಂದಿಗೆ ಆಮ್ ಆದ್ಮಿ ಅಧಿಕಾರ ರಚಿಸಿತ್ತು. ಕೆಲವೇ ತಿಂಗಳ ಹಿಂದಷ್ಟೇ ಜನ್ಮತಾಳಿದ್ದ ಆಮ್ ಆದ್ಮಿ ಪಕ್ಷ ಒಂದೇ ವರ್ಷದ ಅಂತರದಲ್ಲಿ ರಾಜ್ಯವೊಂದರ ಅಧಿಕಾರ ಹಿಡಿದು ಹೊಸ ಇತಿಹಾಸ ಸೃಷ್ಟಿಸಿತು. ಅರವಿಂದ್ ಕೇಜ್ರಿವಾಲ್ ದಿಲ್ಲಿ ‘ದೊರೆ’ಯಾದರು.
First published: January 25, 2020, 7:07 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading