ಎನ್ಇಇಟಿ ಹಾಗೂ ಜೆಇಇ ಪ್ರವೇಶ ಪರೀಕ್ಷೆಯನ್ನು ಮುಂದೂಡಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಜೊತೆಗೆ ರಾಹುಲ್ ಗಾಂಧಿ ಸಹ ಈಗ ವಿದ್ಯಾರ್ಥಿಗಳ ಪರವಾಗಿ ನಿಂತಿದ್ದಾರೆ. ಮೊದಲು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಸೂಕ್ತ ಪರಿಹಾರ ಕಂಡುಕೊಂಡ ನಂತರ ಪರೀಕ್ಷೆ ನಡೆಸಿ ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.
ಕೊರೋನಾ ಆತಂಕದ ನಡುವೆಯೇ ವೈದ್ಯಕೀಯ ಶಿಕ್ಷಣ ಕೋರ್ಸ್ ಪ್ರವೇಶ ಪರೀಕ್ಷೆ (NEET) ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಪರೀಕ್ಷೆ( JEE) ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿಗಳು ಸಹ ಒಲ್ಲದ ಮನಸ್ಸಿನಿಂದ ಈ ಸಲ ಪರೀಕ್ಷೆಗೆ ತಯಾರಿ ನಡೆಸಿದ್ದಾರೆ. ಸಾಕಷ್ಟು ಮಂದಿ ಪರೀಕ್ಷಾ ಕೇಂದ್ರಗಳಿಗೆ ತಪುಪದ ಸ್ಥಿತಿಯಲ್ಲಿದ್ದಾರೆ. ಇಂತಹ ವಿದ್ಯಾರ್ಥಿಗಳ ನೆರವಿಗೆ ನಿಂತಿದ್ದಾರೆ ನಟ ಸೋನು ಸೂದ್.
ಇದನ್ನೂ ಓದಿ: ರಿಯಾಗೆ ಭೂಗತ ಜಗತ್ತಿನ ಜೊತೆಗೆ ನಂಟಿರುವ ಕುರಿತು ಮಾತನಾಡಿರುವ ಛೋಟಾ ಶಕೀಲ್ ..!
ತೀವ್ರ ವಿರೋಧದ ನಡುವೆಯೂ ವೈದ್ಯಕೀಯ ಶಿಕ್ಷಣ ಕೋರ್ಸ್ ಪ್ರವೇಶ ಪರೀಕ್ಷೆ (NEET) ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಪರೀಕ್ಷೆ( JEE) ನಡೆಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಕೇಂದ್ರ ಸರ್ಕಾರ ಆದೇಶದ ಮೇರೆಗೆ ವೈದ್ಯಕೀಯ ಶಿಕ್ಷಣ ಕೋರ್ಸ್ ಪ್ರವೇಶ ಪರೀಕ್ಷೆ ಸೆ.13ರಂದು ನಡೆಯಲಿದೆ. ಎಂಜಿನಿಯರಿಂಗ್ ಪ್ರವೇಶದ ಜೆಇಇ ಪರೀಕ್ಷೆ ಸೆ. 1 ರಿಂದ 6ರವರೆಗೆ ನಿಗದಿಯಾಗಿದೆ. ಜತೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಬುಧವಾರ ಪ್ರವೇಶ ಪತ್ರಗಳನ್ನು ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ