ಬೆಂಗಳೂರು (ಅ. 16): ಎನ್ಟಿಎ (ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ) ನಡೆಸುವ ನೀಟ್ (ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರೆನ್ಸ್ ಟೆಸ್ಟ್) ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಸಂಜೆ 4 ಗಂಟೆಯ ವೇಳೆಗೆ ಎನ್ಟಿಎ ಫಲಿತಾಂಶವನ್ನು ಘೋಷಿಸಲಿದೆ. ದೇಶಾದ್ಯಂತ ಸುಮಾರು 14.37 ಲಕ್ಷ ಅಭ್ಯರ್ಥಿಗಳು ನೀಟ್ ಪರೀಕ್ಷೆಯನ್ನು ಬರೆದಿದ್ದರು. ಕೊರೋನಾದಿಂದಾಗಿ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದವರಿಗೆ ಅಕ್ಟೋಬರ್ 14ರಂದು ಪರೀಕ್ಷೆ ನಡೆಸಲಾಗಿತ್ತು. ಆ ಪರೀಕ್ಷೆಗಳ ಫಲಿತಾಂಶ ಇಂದು ಸಂಜೆ ಪ್ರಕಟವಾಗಲಿದೆ.
ನೀಟ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶವನ್ನು ntaneet.nic.in ವೆಬ್ಸೈಟ್ನಲ್ಲಿ ವೀಕ್ಷಿಸಬಹುದು ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಅಡ್ಮಿಟ್ ಕಾರ್ಡ್ನಲ್ಲಿ ತಮ್ಮ ರೋಲ್ ನಂಬರ್ ದಾಖಲಿಸಬೇಕು. ನಂತರ ಫಲಿತಾಂಶವನ್ನು ವೀಕ್ಷಿಸಬಹುದು. ನೀಟ್ ಪರೀಕ್ಷೆಗಳ ಫಲಿತಾಂಶವನ್ನು ಅಕ್ಟೋಬರ್ 12ರಂದು ಪ್ರಕಟಿಸಲಾಗುವುದು ಎಂದು ಪರೀಕ್ಷಾ ಮಂಡಳಿ ತಿಳಿಸಿತ್ತು. ಆದರೆ, ಬಳಿಕ ಅಕ್ಟೋಬರ್ 16ರಂದು ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿತ್ತು. ಕೊರೋನಾ ಪ್ರೋಟೋಕಾಲ್ ನಡುವೆಯೂ ಸೆಪ್ಟೆಂಬರ್ 14ರಂದು ನೀಟ್ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. NEET ಪರೀಕ್ಷೆ ಫಲಿತಾಂಶ ಪ್ರಕಟವಾದ ನಂತರ nta.ac.in, ntaneet.nic.in ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಅಥವಾ ಇಲ್ಲಿ ಕ್ಲಿಕ್ ಮಾಡುವ ಮೂಲಕವೂ ಫಲಿತಾಂಶ ವೀಕ್ಷಿಸಬಹುದು.
ವೆಬ್ಸೈಟ್ನಲ್ಲಿರುವ ಡೌನ್ಲೋಡ್ ರಿಸಲ್ಟ್ ಎಂಬಲ್ಲಿ ಕ್ಲಿಕ್ ಮಾಡಿ
ನಿಮ್ಮ ರಿಜಿಸ್ಟ್ರೇಷನ್ ನಂಬರ್, ರೋಲ್ ನಂಬರ್ ನಮೂದಿಸಿ.
ಆಗ ನಿಮ್ಮ ಫಲಿತಾಂಶ ವೆಬ್ಸೈಟ್ನ ಸ್ಕ್ರೀನ್ ಮೇಲೆ ಕಾಣುವುದು.
ಆ ಫಲಿತಾಂಶದ ಸ್ಕ್ರೀನ್ ಅನ್ನು ಡೌನ್ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದಿಟ್ಟುಕೊಳ್ಳಿ.
ಎಂಬಿಬಿಎಸ್/ ಬಿಎಸ್ಡಿ ಕೋರ್ಸ್ಗಳಿಗೆ ಅಭ್ಯರ್ಥಿಗಳು ನೀಟ್ನಲ್ಲಿ ಶೇ. 50ರಷ್ಟು ಅಂಕ ಪಡೆದು ತೇರ್ಗಡೆಯಾಗಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳು ಶೇ. 40 ಅಂಕ ಪಡೆಯಬೇಕು. ಪಿಡಬ್ಲ್ಯುಡಿ ಅಭ್ಯರ್ಥಿಗಳು ಶೇ 45 ಅಂಕ ಪಡೆಯಬೇಕು.
Published by:Sushma Chakre
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ