HOME » NEWS » National-international » NEWBORN RECOVERED FROM GANGA RIVER MAK

Viral Photo| ಗಂಗಾನದಿಯಲ್ಲಿ ನವಜಾತ ಶಿಶುವನ್ನು ಪೆಟ್ಟಿಗೆಯಲ್ಲಿಟ್ಟು ತೇಲಿಬಿಟ್ಟ ಪಾಲಕರು; ಪೋಟೋ ವೈರಲ್!

ಮಗು ಪತ್ತೆಯಾದ ಮೇಲೆ ಪೊಲೀಸರಿಗೆ ಮಾಹಿತಿ ನೀಡಿ ಮಗುವನ್ನು ಆಶಾ ಜ್ಯೋತಿ ಕೇಂದ್ರಕ್ಕೆ ಕರೆದುಕೊಂಡು ಹೋಗಿ ನಂತರ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

news18-kannada
Updated:June 16, 2021, 5:08 PM IST
Viral Photo| ಗಂಗಾನದಿಯಲ್ಲಿ ನವಜಾತ ಶಿಶುವನ್ನು ಪೆಟ್ಟಿಗೆಯಲ್ಲಿಟ್ಟು ತೇಲಿಬಿಟ್ಟ ಪಾಲಕರು; ಪೋಟೋ ವೈರಲ್!
ಗಂಗೆಯಲ್ಲಿ ತೇಲಿಬಂದ ಶಿಶು.
  • Share this:
ಗಾಜಿಪುರ (ಜೂನ್ 16); ಕೊರೋನಾ ಸಾಂಕ್ರಾಮಿಕ ಎರಡನೇ ಅಲೆ ಉತ್ತರ ಪ್ರದೇಶದಲ್ಲಿ ದೊಡ್ಡ ಮಟ್ಟದ ಸಾವು-ನೋವಿಗೆ ಕಾರಣವಾಗಿದೆ. ಅಲ್ಲದೆ, ಜನರನ್ನು ಆರ್ಥಿಕವಾಗಿಯೂ ಸಂಕಷ್ಟಕ್ಕೆ ದೂಡಿದೆ. ಹೀಗಾಗಿ ಶವಗಳ ಅಂತ್ಯ ಸಂಸ್ಕಾರಕ್ಕೂ ಹಣ ಇಲ್ಲದ ಅನೇಕರು ತಮ್ಮವರ ಶವಗಳನ್ನು ಗಂಗಾ ನದಿಯಲ್ಲಿ ತೇಲಿಬಿಟ್ಟಿದ್ದರು. ಕಳೆದ ತಿಂಗಳು ನೂರಾರು ಶವಗಳು ಗಂಗೆಯಲ್ಲಿ ತೇಲಿದ್ದು, ದೊಡ್ಡ ಮಟ್ಟದ ಸುದ್ದಿಗೆ ಕಾರಣವಾಗಿತ್ತು. ಆದರೆ, ಇದೀಗ ಗಂಗೆಯಲ್ಲಿ ನವಜಾತ ಶಿಶುವೊಂದು ತೇಲಿ ಬಂದಿದೆ. ಬುಧವಾರ ಮರದ ಪೆಟ್ಟಿಗೆಯೊಂದು ತೇಲಿ ಬಂದಿದ್ದು ಇದರಲ್ಲಿ 22 ದಿನಗಳ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಎಂದಿನಂತೆ ಜನರ ಸಂಚಾರವಿದ್ದ ಗಾಜಿಪುರದ ದಾದ್ರಿ ಘಾಟ್‌ನಲ್ಲಿ ದೋಣಿ ನಡೆಸುತ್ತಿದ್ದ ನಾವಿಕನಿಗೆ ನವಜಾತ ಶಿಶು ಅಳುತ್ತಿರುವ ಕೂಗು ಕೇಳಿದೆ. ಘಾಟ್‌ನಲ್ಲಿ ಯಾವುದೇ ಮಗು ಕಾಣಿಸದಿದ್ದರಿಂದ ನದಿಯ ಕಡೆಗೆ ಗಮನ ನೀಡಿದ್ದಾರೆ. ನದಿಯಲ್ಲಿ ತೇಲಿ ಬರುತ್ತಿದ್ದ ಮರದ ಪೆಟ್ಟಿಗೆಯಿಂದ ಅಳುವಿನ ಸದ್ದು ಬಂದಿದೆ. ಪೆಟ್ಟಿಗೆ ತೆಗೆದು ನೋಡಿದಾಗ ಒಳಗಡೆ ಹೆಣ್ಣು ಮಗು ಪತ್ತೆಯಾಗಿದೆ.

ಗಂಗಾ ನದಿಯಲ್ಲಿ ಮರದ ಪೆಟ್ಟಿಗೆಯಲ್ಲಿ ಪತ್ತೆಯಾಗಿರುವ ನವಜಾತ ಶಿಶುವಿನ ಸಂಪೂರ್ಣ ಜವಾಬ್ದಾರಿಯನ್ನು ಉತ್ತರ ಪ್ರದೇಶ ಸರ್ಕಾರ ವಹಿಸಿಕೊಂಡಿದೆ. ಹೆಣ್ಣು ಶಿಶುವನ್ನು ಉಳಿಸಿದ ನಾವಿಕನಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಧನ್ಯವಾದ ಸಲ್ಲಿಸಿದ್ದಾರೆ. ಜೊತೆಗೆ ನಾವಿಕನಿಗೆ ವಸತಿ ಸೌಕರ್ಯ ನೀಡಿಲಿದೆ ಮತ್ತು ಅರ್ಹ ಯೋಜನೆಗಳಿಗೆ ಶಿಫಾರಸು ಮಾಡಿದೆ.

ಇದನ್ನೂ ಓದಿ: ಮುಸ್ಲೀಂ ವೃದ್ಧನ ಮೇಲೆ ಹಲ್ಲೆ ಪ್ರಕರಣ; ಪ್ರಶ್ನಿಸಿದ್ದ ಪತ್ರಕರ್ತರು, ಕಾಂಗ್ರೆಸ್ ನಾಯಕರು, ಟ್ವಿಟರ್​ ಮೇಲೆ ಕೇಸ್!

ನದಿಯಲ್ಲಿ ತೇಲಿಬಂದ ಮರದ ಪೆಟ್ಟಿಗೆಯಲ್ಲಿ ದುಪ್ಪಟ್ಟಾದಲ್ಲಿ ಸುತ್ತಿದ್ದ ನವಜಾತ ಶಿಶುವಿನೊಂದಿಗೆ, ದೇವರ ಪೋಟೋಗಳು, ಪೂಜಾ ಸಾಮಗ್ರಿಗಳು ಮತ್ತು ಮಗುವಿನ ಕುಂಡಲಿ, ಜಾತಕ ಪತ್ತೆಯಾಗಿವೆ. ಶಿಶುವಿನ ಹೆಸರನ್ನು ಜಾತಕದಲ್ಲಿ ಗಂಗಾ ಎಂದು ಬರೆಯಲಾಗಿದ್ದು, ಜಾತಕದಲ್ಲಿ ಮಗುವಿನ ವಯಸ್ಸು ಕೇವಲ ಮೂರು ವಾರಗಳು ಎಂದು ಬರೆದಿದೆ ಎನ್ನಲಾಗಿದೆ.

ಮಗು ಪತ್ತೆಯಾದ ಮೇಲೆ ಪೊಲೀಸರಿಗೆ ಮಾಹಿತಿ ನೀಡಿ ಮಗುವನ್ನು ಆಶಾ ಜ್ಯೋತಿ ಕೇಂದ್ರಕ್ಕೆ ಕರೆದುಕೊಂಡು ಹೋಗಿ ನಂತರ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Corona Vaccine| ಕೋವಿಡ್​ ಲಸಿಕೆ ಕುರಿತ ಕಟ್ಟುಕಥೆಗಳನ್ನು ನಂಬಬೇಡಿ; ಇಲ್ಲಿದೆ ಆರೋಗ್ಯ ಸಚಿವಾಲಯ ನೀಡಿರುವ ಸತ್ಯಾಂಶ!ಕೊರೋನಾ ಎರಡನೇ ಅಲೆಯಲ್ಲಿ ಕೊರೊನಾ ಸೋಂಕಿತರ ಮೃತದೇಹಗಳು ಗಂಗಾ ನದಿಯಲ್ಲಿ ತೇಲಿ ಬಂದು ಉತ್ತರ ಪ್ರದೇಶ ಮತ್ತು ಬಿಹಾರದ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. ಗಂಗಾ ನದಿಯಲ್ಲಿ ಶವಗಳು ತೇಲಿದ ಪ್ರಕರಣ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಒಳಗಾಗಿತ್ತು. ಆದರೆ, ಇದೀಗ ಹೆಣ್ಣು ಶಿಶುವೊಂದು ತೇಲಿಬಂದಿದ್ದು, ಈ ಸಂಬಂಧ ಪೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
Youtube Video

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by: MAshok Kumar
First published: June 16, 2021, 5:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories