ಈಗಲೇ ಎಚ್ಚೆತ್ತುಕೊಳ್ಳದಿದ್ದಲ್ಲಿ ಗೋವಾ ಕೂಡ ಕೇರಳ ಸ್ಥಿತಿ ಎದುರಿಸಬೇಕಾಗುತ್ತದೆ; ಮಾಧವ್ ಗಾಡ್ಗಿಲ್

news18
Updated:August 20, 2018, 9:37 AM IST
ಈಗಲೇ ಎಚ್ಚೆತ್ತುಕೊಳ್ಳದಿದ್ದಲ್ಲಿ ಗೋವಾ ಕೂಡ ಕೇರಳ ಸ್ಥಿತಿ ಎದುರಿಸಬೇಕಾಗುತ್ತದೆ; ಮಾಧವ್ ಗಾಡ್ಗಿಲ್
news18
Updated: August 20, 2018, 9:37 AM IST
ನ್ಯೂಸ್ 18 ಕನ್ನಡ

ಪಣಜಿ (ಗೋವಾ) ಆಗಸ್ಟ್ 20 : ಪರಿಸರ ಸುರಕ್ಷತೆ ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದಲ್ಲಿ ಮುಂದೊಂದು ದಿನ ಗೋವಾ ಕೂಡ ಕೇರಳದ ಪ್ರವಾಹ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಪರಿಸರ ತಜ್ಞ ಮಾಧವ್ ಗಾಡ್ಗೀಳ್ ಎಚ್ಚರಿಕೆ ನೀಡಿದ್ದಾರೆ.

ಗೋವಾದಲ್ಲಿಯೂ ಎಲ್ಲ ರಾಜ್ಯಗಳಂತೆ ಅನಿಯಮಿತ ಲಾಭಕ್ಕಾಗಿ ಪರಿಸರ ನಾಶ ಮಾಡಲಾಗುತ್ತಿದೆ. ಪಶ್ಚಿಮಘಟ್ಟದ ಅರಣ್ಯ ಪ್ರದೇಶಗಳಲ್ಲಿ ಎಲ್ಲ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಗೋವಾದಲ್ಲಿ ಕೇರಳದಲ್ಲಿ ಇರುವಷ್ಟು ಪಶ್ಚಿಮಘಟ್ಟಗಳು ಇಲ್ಲದೇ ಇದ್ದರೂ ಗೋವಾದಲ್ಲಿ ಮಳೆಯಿಂದ ಅಪಾರ ಹಾನಿ ಸಂಭವಿಸಲಿದೆ ಎಂದು ಅವರು ಹೇಳಿದ್ದಾರೆ.

ಗೋವಾದಲ್ಲಿ35 ಸಾವಿರ ಕೋಟಿ ರೂಪಾಯಿ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ನ್ಯಾಯಮೂರ್ತಿ ಎಂ.ಬಿ. ಶಾ ಅವರ ನಿಯೋಗ ತಿಳಿಸಿದೆ. ಇದು ಪ್ರಕೃತಿ ಮೇಲೆ ತೀರಾ ಪರಿಣಾಮ ಬೀರಲಿದ್ದು, ಈಗಲೇ ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದೆ ಭಾರೀ ಗಂಡಾಂತರ ಎದುರಿಸಬೇಕಾಗುತ್ತದೆ ಎಂದು ಗಾಡ್ಗೀಳ್ ಎಚ್ಚರಿಕೆ ನೀಡಿದರು.

ಗೋವಾದಲ್ಲಿ ಲಾಭದ ಉದ್ದೇಶಕ್ಕಾಗಿ ಪರಿಸರಕ್ಕೆ ವ್ಯಾಪಕ ಹಾನಿ ಉಂಟು ಮಾಡಲಾಗಿದೆ. ಗಣಿಗಾರಿಕೆಗೆ ಸರ್ಕಾರವೇ ಕುಮ್ಮಕ್ಕು ನೀಡಿದೆ. ಒಂದು ವೇಳೆ ಪರಿಸರ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ಮುಂದೊಂದು ದಿನ ಈಗ ಕೇರಳದಲ್ಲಿ ಉಂಟಾಗಿರುವ ಪ್ರವಾಹ ಸ್ಥಿತಿ ಗೋವಾವನ್ನು ಕಾಡುವುದರಲ್ಲಿ ಯಾವುದೇ ಅಚ್ಚರಿ ಇಲ್ಲ ಎಂದು ಗಾಡ್ಗೀಳ್ ಹೇಳಿದ್ದಾರೆ.

ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಸಮರ್ಪಕವಾಗಿ ಕಾರ್ಯನಿರ್ವಹಿಸದಿರಲಿ ಕೇಂದ್ರ ಸರ್ಕಾರವೇ ಕಾರಣವಾಗಿದೆ. ಪರಿಸರ ನೀತಿಗಳನ್ನು ಸಡಿಲಿಸಿರುವುದೇ ಪರಿಸರ ನಾಶಕ್ಕೆ ಪ್ರಮುಖ ಕಾರಣ ಎಂದು ಆರೋಪಿಸಿದರು.
Loading...

2011ರಲ್ಲಿ ಪಶ್ಚಿಮಘಟ್ಟಗಳ ಅಧ್ಯಯನಕ್ಕೆ ಸರ್ಕಾರ ನೇಮಿಸಿದ್ದ ಸಮಿತಿಯ ನೇತೃತ್ವವನ್ನು ಮಾಧವ್ ಗಾಡ್ಗೀಲ್ ವಹಿಸಿದ್ದರು. ಸಮಿತಿ ನೀಡಿದ ವರದಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.
First published:August 20, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...