ನವದೆಹಲಿ(ಜ.24): ತನ್ನ ಮನೆಯಲ್ಲಿ ಮೂವರು ಉಗ್ರರಿಗೆ ನೀಡಿದ್ದ ಜಮ್ಮು-ಕಾಶ್ಮೀರದ ಮಾಜಿ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ದೇವೇಂದರ್ ಸಿಂಗ್ ಸೇರಿದಂತೆ ಇತರೆ ನಾಲ್ವರನ್ನು 15 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ(ಎನ್ಐಎ) ವಶಕ್ಕೆ ನೀಡಲಾಗಿದೆ. ಕೇಂದ್ರ ಗೃಹ ಸಚಿವಾಲಯ ಸೂಚನೆಯಂತೆಯೇ ದೇವೆಂದರ್ ಸಿಂಗ್ ಜತೆಗೆ ನಾಲ್ವರ ಉಗ್ರರ ವಿಚಾರಣೆ ಆರಂಭಿಸಿರುವ ಎನ್ಐಎ ತಂಡವೂ ಮಾಹಿತಿ ಸಂಗ್ರಹಿಸುತ್ತಿದೆ. ಇಲ್ಲಿಯವರೆಗೂ ದೇವಿಂದರ್ ಸಿಂಗ್ ಭಾಗಿಯಾಗಿರಬಹುದಾದ ಉಗ್ರ ಚಟುವಟಿಕೆಗಳ ಕುರಿತಾಗಿ ಎನ್ಐಎ ತಂಡ ವಿಚಾರಣೆ ನಡೆಸುತ್ತಿದೆ.
ಒಂದು ದಿನದ ಹಿಂದೆಯಷ್ಟೇ ದೇವೇಂದರ್ ಸಿಂಗ್ ಅವರಿಂದ ಜಪ್ತಿ ಮಾಡಲಾದ ಸಾಮಾಗ್ರಿಗಳ ಪಟ್ಟಿಯನ್ನು ಜಮ್ಮು-ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದರು. ದೇವೆಂದರ್ ಸಿಂಗ್ ಮನೆ ಮತ್ತು ಕಚೇರಿ ಪರಿಶೀಲನೆ ವೇಳೆ ಬರೋಬ್ಬರಿ 32 ಸಾಮಾಗ್ರಿಗಳ ಜಪ್ತಿ ಮಾಡಲಾಗಿದೆ. ಪ್ತಿಯಾದ ಸಾಮಾಗ್ರಿಗಳ ಪೈಕಿ ಅತ್ತರ್ ಶೀಶೆಯಿಂದ ಹಿಡಿದು ಎಕೆ 47 ರೈಫಲ್ ತನಕ ಇದೆ ಎಂದು ಪೊಲೀಸರು ತಿಳಿಸಿದ್ದರು.
ಈ ಹಿಂದೆಯೇ ಉಗ್ರರಿಗೆ ಮನೆಯಲ್ಲಿ ಆಶ್ರಯ ನೀಡಿದ್ದ ಜಮ್ಮು-ಕಾಶ್ಮೀರದ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ದೇವೇಂದರ್ ಸಿಂಗ್ರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು. ಇಲ್ಲಿನ ಬಾದಾಮಿ ಬಾಗ್ ಕಂಟೋನ್ಮೆಂಟ್ ಬಳಿಯ ಎಕ್ಸ್ ವಿ ಕಾರ್ಪ್ಸ್ ಸೇನೆಯ ಪ್ರಧಾನ ಕಚೇರಿಯ ಪಕ್ಕದ ತನ್ನ ಮನೆಯಲ್ಲಿ ಮೂವರು ಉಗ್ರರಿಗೆ ದೇವೇಂದರ್ ಸಿಂಗ್ ಆಶ್ರಯ ನೀಡಿದ್ದರು. ಹಾಗಾಗಿ ದೇವೇಂದ್ರ ಸಿಂಗ್ರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದರು.
ಜನವರಿ 12ನೇ ತಾರೀಕಿನಂದು ಭಾನುವಾರ ಜಮ್ಮು-ಕಾಶ್ಮೀರದ ಡಿಎಸ್ಪಿ ದೇವೇಂದರ್ ಸಿಂಗ್ ಸೇರಿದಂತೆ ಇಬ್ಬರು ಉಗ್ರರ ಬಂಧನವಾಗಿತ್ತು. ದಕ್ಷಿಣ ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಲಷ್ಕರ್– ಇ ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರ ಜತೆಗೆ ಹಿರಿಯ ಪೊಲೀಸ್ ಅಧಿಕಾರಿ ದೇವೇಂದರ್ ಸಿಂಗ್ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆಯಡಿ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡ ಜಮ್ಮು-ಕಾಶ್ಮೀರದ ಪೊಲೀಸರು ವಿಚಾರಣೆ ಮುಂದುವರೆಸಿದ್ದರು.
ಇದನ್ನೂ ಓದಿ: ದೆಹಲಿ ವಿಧಾನಸಭಾ ಚುನಾವಣೆ: ಸಿಎಂ ಅರವಿಂದ್ ಕೇಜ್ರಿವಾಲ್ ಎದುರು 93 ಅಭ್ಯರ್ಥಿಗಳು ಕಣಕ್ಕೆ
ದೇವೇಂದರ್ ಸಿಂಗ್ ಟಾಪ್ ರ್ಯಾಂಕರ್. ಕಳೆದ ವರ್ಷ ಆಗಸ್ಟ್ 15ರಂದು ದೇವಿಂದರ್ ಸಿಂಗ್ಗೆ ಶೌರ್ಯ ಪ್ರಶಸ್ತಿಯನ್ನು ನೀಡಲಾಯ್ತು.
ಶ್ರೀನಗರ ಇಂಟರ್ನ್ಯಾಷನಲ್ ಏರ್ಪೋರ್ಟ್ನಲ್ಲಿ ಆಯಂಟಿ ಹೈಜಾಕಿಂಗ್ ಸ್ಕ್ವಾಡ್ನಲ್ಲಿ ಡಿಎಸ್ಪಿ ಕಾರ್ಯನಿರ್ವಹಿಸುತ್ತಿದ್ದರು. ಆದರೀಗ ಇಬ್ಬರು ಉಗ್ರೊಂದಿಗೆ ಸಿಕ್ಕಿಬಿದ್ದಿದ್ಧಾರೆ.
ಪ್ರಾಥಮಿಕ ತನಿಖೆಯಿಂದ ಪೊಲೀಸರಿಗೆ ತಿಳಿದುಬಂದ ಮಾಹಿತಿ ಎಂದರೆ, ಉಗ್ರಗಾಮಿಗಳನ್ನು ಸಾಗಿಸಲು ದವಿಂದರ್ 12 ಲಕ್ಷಕ್ಕೆ ಡೀಲ್ ಕುದುರಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿಯ ಕಾರನ್ನು ಯಾರೂ ತಡೆದು ತಪಾಸನೆ ನಡೆಸುವುದಿಲ್ಲವಾದ್ದರಿಂದ ಅವರು ತಮ್ಮ ಕಾರಿನಲ್ಲೇ ಅವರನ್ನು ಸಾಗಿಸುತ್ತಿದ್ದರು. ಹಿಜ್ಬುಲ್ ಕಮಾಂಡರ್ ಆಗಿರುವ ನಾವೀದ್ ಮುಷ್ತಾಕ್ ಅವರು ಹಿಂದೆ ಪೊಲೀಸ್ ಇಲಾಖೆಯಲ್ಲೇ ಇದ್ದವರು. ಈಗ ಉಗ್ರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. 370ನೇ ವಿಧಿ ರದ್ದಾದ ಬಳಿಕ ಸೇಬು ಸಾಗಿಸುವ ಟ್ರಕ್ ಡ್ರೈವರ್ಗಳ ಹತ್ಯೆಯಲ್ಲಿ ಇವರ ಕೈವಾಡ ಇರುವ ಶಂಕೆ ಇದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ