HOME » NEWS » National-international » NIMHANS RECRUITMENT 2020 NOTIFICATION HAS BEEN RELEASED FOR 6 JUNIOR RESEARCH STAFF NURSE MANAGER AND ASSISTANT POSTS HG

NIMHANS Recruitment 2020: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಉತ್ತೀರ್ಣರಾದವರಿಗೆ ಅವಕಾಶ!

ವಿದ್ಯಾರ್ಹತೆ: ಎಂ.ಫಿಲ್, ಎಂ.ಎಸ್ಸಿ, ಪದವಿ, ಮತ್ತು ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

news18-kannada
Updated:December 13, 2020, 3:11 PM IST
NIMHANS Recruitment 2020: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಉತ್ತೀರ್ಣರಾದವರಿಗೆ ಅವಕಾಶ!
ಪ್ರಾತಿನಿಧಿಕ ಚಿತ್ರ.
  • Share this:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಖಾಲಿ ಇರುವ 6 ಜ್ಯೂನಿಯರ್ ರಿಸರ್ಚ್ ಫೆಲೋ, ಸ್ಟಾಫ್ ನರ್ಸ್, ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಆರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ತಿಳಿಸಿದ್ದು, ಡಿಸೆಂಬರ್​ 18ರೊಳಗೆ ಆರ್ಜಿ ಸಲ್ಲಿಸಲು ತಿಳಿಸಿದೆ.

ವಿದ್ಯಾರ್ಹತೆ:

ಎಂ.ಫಿಲ್, ಎಂ.ಎಸ್ಸಿ, ಪದವಿ, ಮತ್ತು ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 35 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

- ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ಸ್ಟಾಫ್ ನರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000 ರೂ ನೀಡಲಿದೆ- ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000ರೂ ನೀಡಲಿದೆ

-ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000ರೂ ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ ಹೇಗೆ?:

ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ neuromodulation.crc@gmail.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 18,2020ರೊಳಗೆ ಅರ್ಜಿಯನ್ನು ತಲುಪಿಸಬೇಕು.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://nimhans.ac.in/ ಭೇಟಿ ನೀಡಿ
Published by: Harshith AS
First published: December 13, 2020, 3:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories