ಪಾಟ್ನಾ: ಬಿಹಾರದ (Bihar) ಪೂರ್ವ ಚಂಪಾರಣ್ (East Champaran) ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ(ಇಟ್ಟಿಗೆ ಗೂಡು) ಸಂಭವಿಸಿದ ಸ್ಫೋಟದಲ್ಲಿ ಸುಮಾರು ಒಂಭತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಮೋತಿಹಾರಿಯ (Motihari) ರಾಮ್ಗರ್ವಾ ಪ್ರದೇಶದಲ್ಲಿರುವ (Ramgarhwa area) ಇಟ್ಟಿಗೆ ಭಟ್ಟಿಯಲ್ಲಿ (Brick Kiln) ಈ ಘಟನೆ ನಡೆದಿದ್ದು, ಮೃತಪಟ್ಟವರಲ್ಲಿ ಇಟ್ಟಿಗೆ ಗೂಡು ಮಾಲೀಕ ಮೊಹಮ್ಮದ್ ಇಶ್ರಾರ್ ಕೂಡ ಒಬ್ಬರಾಗಿದ್ದಾರೆ. ಅಲ್ಲದೇ ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಹಾಗೂ ಪ್ರಧಾನಿ ನರೇಂದ್ರ ಮೋದಿ (Prim Minister Narendra Modi) ಸಂತಾಪ ಸೂಚಿಸಿದ್ದಾರೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ಅಧೀಕ್ಷಕ ಭೇಟಿ
ನಂತರ ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ಅಧೀಕ್ಷಕರು (ಎಸ್ಪಿ) ಆಗಮಿಸಿ ಪರಿಶೀಲನೆ ನಡೆಸಿದರು. ಸದ್ಯ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಬಿಹಾರ ಪೊಲೀಸ್ ಪ್ರಧಾನ ಕಚೇರಿ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ. ಇನ್ನೂ ಗಾಯಗೊಂಡವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Bihar | Seven people died, several others were injured due to the explosion in the chimney of the brick kiln in Narirgir of Ramgarhwa PS. Injured were admitted to a hospital. Rescue operation underway. ASP Raxaul, police teams present with SDRF teams at the spot: Motihari Police
— ANI (@ANI) December 24, 2022
ಘಟನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ
ಇದೀಗ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದೆ. ಈ ನಡುವೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
ಮೃತರಿಗೆ ಪರಿಹಾರ ಘೋಷಿಸಿದ ಮೋದಿ
ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಕಚೇರಿ ಕೂಡ ಈ ಘಟನೆ ಕುರಿತಂತೆ ಟ್ವೀಟ್ ಮಾಡಿದ್ದು, ಮೃತರಿಗೆ ಸಂತಾಪ ಸೂಚಿಸಲಾಗಿದೆ ಮತ್ತು ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರ ಘೋಷಿಸಲಾಗಿದೆ.
ಮೋತಿಹಾರಿಯ ಇಟ್ಟಿಗೆ ಭಟ್ಟಿಯಲ್ಲಿ ಸಂಭವಿಸಿದ ಅವಘಡದಿಂದ ಹಲವರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಪಿಎಂಎನ್ಆರ್ಎಫ್ನಿಂದ ಮೃತರ ಕುಟುಂಬಗಳಿಗೆ 2 ಲಕ್ಷ ರೂ.ಗಳನ್ನು ಪರಿಹಾರವಾಗಿ ಮತ್ತು ಗಾಯಾಳುಗಳಿಗೆ 50,000 ರೂಪಾಯಿ ಹಣವನ್ನು ಪರಿಹಾರವಾಗಿ ಘೋಷಿಸಲಾಗುತ್ತಿದೆ. ಎಲ್ಲಾ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಧಾನಿ ಮೋದಿ ಕಚೇರಿ ಟ್ವೀಟ್ ಮಾಡಿದೆ.
ಮೋತಿಹಾರಿ ಎಸ್ಆರ್ಪಿ ಆಸ್ಪತ್ರೆ ವೈದ್ಯ ರಿಯಾಕ್ಷನ್
ನರಿಗಿರ್ನ ಇಟ್ಟಿಗೆ ಗೂಡಿನ ಚಿಮಣಿಯಲ್ಲಿ ಸ್ಫೋಟದಿಂದಾಗಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ ಮತ್ತು ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ. ಏಳರಿಂದ ಎಂಟು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಮೂವರನ್ನು ವೆಂಟಿಲೇಟರ್ಗೆ ಸ್ಥಳಾಂತರಿಸಲಾಗಿದೆ ಎಂದು ಮೋತಿಹಾರಿ ಎಸ್ಆರ್ಪಿ ಆಸ್ಪತ್ರೆಯ ಆರೋಗ್ಯ ಅಧಿಕಾರಿ ಸುಜಿತ್ ಕುಮಾರ್ ತಿಳಿಸಿದ್ದಾರೆ.
ನಿನ್ನೆ ಸಿಕ್ಕಿಂನಲ್ಲಿ ಟ್ರಕ್ ಕಮರಿಗೆ ಬಿದ್ದು 16 ಯೋಧರು ಸಾವು
ಇದೇ ರೀತಿ ನಿನ್ನೆ ಸಿಕ್ಕಿಂನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 16 ಮಂದಿ ಸೈನಿಕರು ನಿನ್ನೆ ಪ್ರಾಣ ಕಳೆದುಕೊಂಡಿದ್ದರು. ಸಿಕ್ಕಿಂನಲ್ಲಿ ಸೈನಿಕರು ಪ್ರಯಾಣಿಸುತ್ತಿದ್ದ ಟ್ರಕ್ ಕಮರಿಗೆ ಬಿದ್ದು ಮೂವರು ಅಧಿಕಾರಿಗಳು ಸೇರಿದಂತೆ 16 ಮಂದಿ ಸೈನಿಕರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿತ್ತು.
ಇದನ್ನೂ ಓದಿ: Bihar Politics: ಬಿಜೆಪಿಯಿಂದ ದೂರ ಸರಿದಿದ್ದೇಕೆ ನಿತೀಶ್ ಕುಮಾರ್, ಬಯಲಾಯ್ತು ಶಾಕಿಂಗ್ ನಡೆ ಹಿಂದಿನ ಸತ್ಯ!
ಈ ವಾಹನವು ಮೂರು ವಾಹನಗಳ ಬೆಂಗಾವಲು ಪಡೆಯ ಭಾಗವಾಗಿತ್ತು. ಟ್ರಕ್ ಇಂದು ಬೆಳಗ್ಗೆ ಚಾಟೆನ್ನಿಂದ ಥಾಂಗು ಕಡೆಗೆ ಹೊರಟಿತ್ತು. ಆದರೆ ಝೀಮಾ ಮಾರ್ಗದ ಮಧ್ಯೆ ಅಪಘಾತಕ್ಕೀಡಾಗಿತ್ತು. ನಂತರ ಕೂಡಲೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿ, ಗಾಯಗೊಂಡ ನಾಲ್ವರು ಸೈನಿಕರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರದೃಷ್ಟವಶಾತ್ ಮೂವರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಮತ್ತು 13 ಸೈನಿಕರು ಅಪಘಾತಕ್ಕೆ ಬಲಿಯಾಗಿರುವುದಾಗಿ ಸೇನೆ ಹೇಳಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ