ಶಬರಿಮಲೆ ಪ್ರಕರಣ;​ ಇಂದಿನಿಂದ ಸುಪ್ರೀಂಕೋರ್ಟ್​ನಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿ ಸಲ್ಲಿಕೆ ಆಗಿದ್ದ ಮೇಲ್ಮನವಿಯನ್ನು ಅಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಐದು ಸದಸ್ಯರ ಪೀಠ ವಿಚಾರಣೆ ನಡೆಸಿತ್ತು. ನವೆಂಬರ್​ 14ರಂದು ತೀರ್ಪು ನೀಡಿದ್ದ ಪೀಠ, ಈ ಪ್ರಕರಣವನ್ನು 9 ಸದಸ್ಯರ ಪೀಠಕ್ಕೆ ವರ್ಗಾವಣೆ ಮಾಡಿತ್ತು.

news18-kannada
Updated:January 13, 2020, 8:12 AM IST
ಶಬರಿಮಲೆ ಪ್ರಕರಣ;​ ಇಂದಿನಿಂದ ಸುಪ್ರೀಂಕೋರ್ಟ್​ನಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ (ಜ.13): ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶದ ವಿಚಾರವಾಗಿ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​​ನ ಒಂಭತ್ತು ಸದಸ್ಯರ ಪೀಠ ನಡೆಸಲಿದೆ.

ಮುಖ್ಯನ್ಯಾಯಮೂರ್ತಿ ಎಸ್​ಎ ಬೋಬ್ಡೆ ನೇತೃತ್ವದ 9 ಸದಸ್ಯರ ಪೀಠ 60 ಮರು ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಮಾಡಲಿದೆ. ನ್ಯಾ. ಆರ್​ ಭಾನುಮತಿ, ನ್ಯಾ. ಅಶೋಕ್​ ಭೂಷಣ್​, ನ್ಯಾ. ನಾಗೇಶ್ವರ್​ ರಾವ್​, ನ್ಯಾ. ಎಂ.ಎಂ. ಶಾಂತಗೌಡರ್​, ನ್ಯಾ. ಎಸ್​.ಎ ನಜೀರ್​, ನ್ಯಾ. ಆರ್​. ಸುಭಾಶ್​ ರೆಡ್ಡಿ, ನ್ಯಾ. ಬಿ.ಆರ್​. ಗವೈ ಮತ್ತು ನ್ಯಾ. ಸೂರ್ಯ ಕಾಂತ್​ ಈ ಪೀಠದಲ್ಲಿದ್ದಾರೆ.

ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿ ಸಲ್ಲಿಕೆ ಆಗಿದ್ದ ಮೇಲ್ಮನವಿಯನ್ನು ಅಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಐದು ಸದಸ್ಯರ ಪೀಠ ವಿಚಾರಣೆ ನಡೆಸಿತ್ತು. ನವೆಂಬರ್​ 14ರಂದು ತೀರ್ಪು ನೀಡಿದ್ದ ಪೀಠ, ಈ ಪ್ರಕರಣವನ್ನು 9 ಸದಸ್ಯರ ಪೀಠಕ್ಕೆ ವರ್ಗಾವಣೆ ಮಾಡಿತ್ತು.

ಇದನ್ನೂ ಓದಿ: ಶಬರಿಮಲೆಗೆ ಮಹಿಳೆಯರ ಪ್ರವೇಶ; ಯಾವುದೇ ಆದೇಶ ನೀಡದೆ 7 ನ್ಯಾಯಮೂರ್ತಿಗಳ ಪೀಠಕ್ಕೆ ಪ್ರಕರಣ ವರ್ಗಾವಣೆ ಮಾಡಿದ ಸುಪ್ರೀಂ

"ಧರ್ಮದಲ್ಲಿ ಗಂಡು ಹೆಣ್ಣಿಗೆ ಸಮಾನ ಹಕ್ಕಿದೆ. ಗಂಡು-ಹೆಣ್ಣು ಇಬ್ಬರು ಸಮಾಜದಲ್ಲಿ ಸರಿಸಮಾನರು. ಧರ್ಮದ ವಿಮರ್ಶೆಗೆ ಅರ್ಜಿ ಹಾಕಲಾಗಿದೆ," ಎಂದು ರಂಜನ್​ ಗೋಗೋಯ್​ ಅಭಿಪ್ರಾಯಪಟ್ಟರು. ನಂತರ ಪ್ರಕರಣವನ್ನು 9 ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದರು. ನ್ಯಾ. ಚಂದ್ರಚೂಡ್​, ನ್ಯಾ. ನಾರಿಮನ್​ಅವರು ಶಬರಿಮಲೆ ದೇಗುಲ ಮಹಿಳೆಯರ ಪ್ರವೇಶಕ್ಕೆ ನಿರಾಕರಣೆ ಮಾಡಿದ್ದರು. ಉಳಿದ ಮೂವರು ನ್ಯಾಯಮೂರ್ತಿಗಳು ಮಹಿಳೆಯರ ಪ್ರವೇಶವನ್ನು ಬೆಂಬಲಿಸಿದರು.
Published by: Rajesh Duggumane
First published: January 13, 2020, 8:12 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading