'ನಿರ್ಭಯಾ ಅತ್ಯಾಚಾರಿಗಳನ್ನು ನಾನೇ ಗಲ್ಲಿಗೇರಿಸುತ್ತೇನೆ'; ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ರಕ್ತದಲ್ಲಿ ಪತ್ರ ಬರೆದ ಅಂತರಾಷ್ಟ್ರೀಯ ಕ್ರೀಡಾಪಟು

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ವರ್ತಿಕಾ ಸಿಂಗ್​​, ಪುರುಷರು ಮಹಿಳೆ ಮೇಲೆ ಅತ್ಯಾಚಾರ ಎಸಗಿದರೆ ಮರಣದಂಡನೆ ಶಿಕ್ಷೆ ವಿಧಿಸಬಹುದೆಂಬ ಸಂದೇಶ ನೀಡಲು, ನಿರ್ಭಯಾ ಅತ್ಯಾಚಾರಿಗಳನ್ನು ತನ್ನ ಕೈಯಿಂದಲೇ ನೇಣಿಗೇರಿಸಬೇಕು.

ಅಂತರಾಷ್ಟ್ರೀಯ ಕ್ರೀಡಾಪಟು ವರ್ತಿಕಾ ಸಿಂಗ್​

ಅಂತರಾಷ್ಟ್ರೀಯ ಕ್ರೀಡಾಪಟು ವರ್ತಿಕಾ ಸಿಂಗ್​

  • Share this:
ನವದೆಹಲಿ(ಡಿ.15): "ನಿರ್ಭಯಾ ಅತ್ಯಾಚಾರಿಗಳನ್ನು ನನ್ನ ಕೈಯಿಂದಲೇ ನೇಣಿಗೇರಿಸಬೇಕು" ಎಂದು ಅಂತರಾಷ್ಟ್ರೀಯ ಕ್ರೀಡಾಪಟು(ಶೂಟರ್​​) ವರ್ತಿಕಾ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ರಕ್ತದಲ್ಲಿ ಪತ್ರ ಬರೆದು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ನಿರ್ಭಯಾ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅತ್ಯಾಚಾರಿಗಳನ್ನು ಶೀಘ್ರದಲ್ಲೇ ನೇಣಿಗೇರಿಸಲಾಗುತ್ತದೆ ಎಂಬ ಸುದ್ದಿ ಇದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ವರ್ತಿಕಾ ಸಿಂಗ್​​, ಪುರುಷರು ಮಹಿಳೆ ಮೇಲೆ ಅತ್ಯಾಚಾರ ಎಸಗಿದರೆ ಮರಣದಂಡನೆ ಶಿಕ್ಷೆ ವಿಧಿಸಬಹುದೆಂಬ ಸಂದೇಶ ನೀಡಲು, ನಿರ್ಭಯಾ ಅತ್ಯಾಚಾರಿಗಳನ್ನು ತನ್ನ ಕೈಯಿಂದಲೇ ನೇಣಿಗೇರಿಸಬೇಕು. ಈ ಕೆಲಸ ಪ್ರಾರಂಭಿಸಲು ನನಗೆ ನಟಿಯರು, ಕಾನೂನು ತಜ್ಞರು ಮತ್ತು ಸೆಲೆಬ್ರಿಟಿಗಳ ಬೆಂಬಲ ಬೇಕು ಎಂದು ಹೇಳಿದರು.

ನೇಣುಗೇರಿಸುವ ಕೆಲಸಕ್ಕೆ ಇಬ್ಬರು ಬೇಕೆಂದು ತಿಹಾರ್ ಜೈಲಿಂದ ಮನವಿ; ನಿರ್ಭಯಾ ಅತ್ಯಾಚಾರಿಗಳಿಗೆ ಶೀಘ್ರದಲ್ಲೇ ಗಲ್ಲುಶಿಕ್ಷೆ?

ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆಯಾಗಲಿದೆ. ಸದ್ಯ ತಿಹಾರ್​ ಜೈಲಿನಲ್ಲಿರುವ ಅಪರಾಧಿಗಳನ್ನು ನೇಣಿಗೇರಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ತಿಹಾರ್​ ಜೈಲಿನ ಅಧಿಕಾರಿಗಳು ಬಿಹಾರದ ಬಕ್ಸಾರ್​​ ಜೈಲಿನ ಅಧಿಕಾರಿಗಳಿಗೆ ಅಪರಾಧಿಗಳನ್ನು ನೇಣಿಗೇರಿಸಲು ಹಗ್ಗಗಳನ್ನು ಸಿದ್ದ ಮಾಡಿಕೊಳ್ಳುವಂತೆ ಹೇಳಿದ್ದಾರೆ. ಜೊತೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ ನೇಣಿಗೇರಿಸುವ ಕೆಲಸದವರನ್ನು ಒಸಗಿಸುವಂತೆ ಕೇಳಿದ್ದಾರೆ ಎನ್ನಲಾಗಿದೆ.

ಏನಿದು ಪ್ರಕರಣ?

2012ರ ಡಿಸೆಂಬರ್​​​ 16 ರಂದು ದೆಹಲಿಯಲ್ಲಿ ತನ್ನ ಗೆಳೆಯನೊಂದಿಗೆ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಪ್ಯಾರಾಮೆಡಿಕಲ್​ ವಿದ್ಯಾರ್ಥಿನಿಯ ಮೇಲೆ 6 ಮಂದಿ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಇದನ್ನು ತಡೆಯಲು ಬಂದ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದರು. ಮೃಗೀಯವಾಗಿ ಅತ್ಯಾಚಾವೆಸಗಿದ್ದ ಅಪರಾಧಿಗಳು ಯುವತಿಯನ್ನು ಚಲಿಸುತ್ತಿದ್ದ ಬಸ್‌ನಿಂದಲೇ ಹೊರಗೆಸೆದಿದ್ದರು. ಈ ಘೋರ ಕೃತ್ಯದಿಂದ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದ ನಿರ್ಭಯಾ ಚಿಕಿತ್ಸೆ ಫಲಕಾರಿಯಾಗದೆ ಡಿ. 29ರಂದು ಸಿಂಗಾಪುರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ; ದೆಹಲಿಯಲ್ಲಿ 3 ಬಸ್​ಗಳಿಗೆ ಬೆಂಕಿ ಹಚ್ಚಿ ಆಕ್ರೋಶ

6 ಜನ ಆರೋಪಿಗಳಲ್ಲಿ ರಾಮ್ ಸಿಂಗ್ ಎಂಬಾತ 2013ರಲ್ಲಿ ಕೇಸ್​ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೇ ತಿಹಾರ್ ಜೈಲಿನಲ್ಲಿ ನೇಣು ಹಾಕಿ ಆತ್ಮಹತ್ಯೆಗೆ ಶರಣಾಗಿದ್ದ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಬಾಲಾಪರಾಧಿಯಾಗಿದ್ದರಿಂದ ಗರಿಷ್ಠ 3 ವರ್ಷ ಶಿಕ್ಷೆ ನೀಡಿ, 2015ರಲ್ಲಿ ಬಿಡುಗಡೆಗೊಳಿಸಿದ್ದರು.

ಉಳಿದ ನಾಲ್ವರು ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯವು 2013ರಲ್ಲಿ ತ್ವರಿತ ಗಲ್ಲು ಶಿಕ್ಷೆ ವಿಧಿಸಿತ್ತು. ಬಳಿಕ 2014ರ ಮಾರ್ಚ್​​​​ನಲ್ಲಿ ದೆಹಲಿ ಹೈಕೋರ್ಟ್​​​ ಆರೋಪಿಗಳಿಗೆ ಗಲ್ಲು ಶಿಕ್ಷೆಯನ್ನು ಖಚಿತಪಡಿಸಿತು. 2017ರಲ್ಲಿ ಸುಪ್ರೀಂಕೋರ್ಟ್​​ ದೆಹಲಿ ಹೈಕೋರ್ಟ್​​​​ ತೀರ್ಪನ್ನು ಎತ್ತಿ ಹಿಡಿದಿತ್ತು.2018ರ ಜುಲೈನಲ್ಲಿ ಮೂವರು ಆರೋಪಿಗಳು 2017ರ ತೀರ್ಪನ್ನು ಮರುಪರಿಶೀಲಿಸುವಂತೆ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್​ ತಿರಸ್ಕರಿಸಿತ್ತು. ಮರುಪರಿಶೀಲನಾ ಅರ್ಜಿಯ ತೀರ್ಪು ಪ್ರಕಟಿಸಿದ ಸುಪ್ರೀಂ, ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿತ್ತು.
Published by:Latha CG
First published: