HOME » NEWS » National-international » NIVAR CYCLONE FEAR RED ALERT IN TAMIL NADU PUDUCHERRY PUBLIC HOLIDAY DECLARATION FOR TOMORROW MAK

ನಿವಾರ್​ ಸೈಕ್ಲೋನ್​ ಭೀತಿ; ತಮಿಳುನಾಡು-ಪುದುಚೇರಿಯಲ್ಲಿ ರೆಡ್​ ಅಲರ್ಟ್​, ನಾಳೆ ಸಾರ್ವಜನಿಕ ರಜೆ ಘೋಷಣೆ

ತಮಿಳುನಾಡಿನ 7 ಜಿಲ್ಲೆಗಳಲ್ಲಿ ಬಸ್​ಗಳ ಓಡಾಟ ನಿರ್ಬಂಧಿಸಲಾಗಿದೆ. ಪುದುಕೊಟ್ಟಲ್, ತಂಜಾವೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ತಿರುವಾರೂರು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ.

news18-kannada
Updated:November 24, 2020, 9:31 PM IST
ನಿವಾರ್​ ಸೈಕ್ಲೋನ್​ ಭೀತಿ; ತಮಿಳುನಾಡು-ಪುದುಚೇರಿಯಲ್ಲಿ ರೆಡ್​ ಅಲರ್ಟ್​, ನಾಳೆ ಸಾರ್ವಜನಿಕ ರಜೆ ಘೋಷಣೆ
ಪುದುಚೇರಿ ಕಡಲ ತೀರ.
  • Share this:
ಚೆನ್ನೈ (ನವೆಂಬರ್​ 24); ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ನಿವಾರ್​ ಚಂಡ ಮಾರುತ ನಾಳೆ ಗಂಟೆಗೆ 145 ಕಿ.ಮೀ ವೇಗದಲ್ಲಿ ತಮಿಳುನಾಡು ಮತ್ತು ಪುದುಚೇರಿ ಕರಾವಳಿ ಭಾಗಗಳಲ್ಲಿ ಅಪ್ಪಳಿಸಲಿವೆ ಎಂದು ಈಗಾಗಲೇ ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿವೆ. ಅಲ್ಲದೆ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ರೆಡ್ ಅಲರ್ಟ್, ಆಂಧ್ರಪ್ರದೇಶ ಮತ್ತು ತೆಲಂಗಾಣಗಳ ಕರಾವಳಿ ಭಾಗಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡು ಮತ್ತು ಪುದುಚೇರಿ ಸರ್ಕಾರ ಬುಧವಾರ ರಾಜ್ಯಾದ್ಯಂತ ಸಾರ್ವಜನಿಕ ರಜೆ ಘೋಷಿಸಿದೆ. ಅಲ್ಲದೆ, ಕರಾವಳಿ ತೀರದ ಜನರು ಮನೆಯಿಂದ ಹೊರ ಬರದಂತೆ ಸೂಚನೆ ನೀಡಲಾಗಿದ್ದು, ಅಗತ್ಯ ಸೇವೆಗಳು ಮಾತ್ರ ನಾಳೆ ಲಭ್ಯ ಇರಲಿವೆ ಎಂದು ಸ್ಪಷ್ಟಪಡಿಸಲಾಗಿದೆ. 

ಉತ್ತರ ತಮಿಳುನಾಡು, ಕರಾವಳಿ ಭಾಗ ಪುದುಚೇರಿ ಮತ್ತು ಕಾರೈಕಾಲ್‌ ಜಿಲ್ಲೆಗಳಲ್ಲಿ ನ. 24 ರಿಂದ ನ.26ರ ವರೆಗೆ, ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಮತ್ತು ರಾಯಲ್ ಸೀಮಾ ಮತ್ತು ಆಗ್ನೇಯ ತೆಲಂಗಾಣದಲ್ಲಿ ನ. 25 ಮತ್ತು ನ. 26 ರಂದು ವ್ಯಾಪಕ ಗುಡುಗು ಸಹಿತ ಮಳೆ ಬೀಳಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಸೈಕ್ಲೋನ್​ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ತಮಿಳುನಾಡು ಹಾಗೂ ಪುದುಚೇರಿಗೆ ಎಲ್ಲಾ ಸಹಕಾರ ನೀಡುಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.


"ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ ಅವರೊಂದಿಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುವ ಭರವಸೆ ನೀಡಲಾಗಿದೆ. ನಿವಾರ್ ಸೈಕ್ಲೋನ್ ಪೀಡಿತ ಪ್ರದೇಶಗಳಲ್ಲಿ ವಾಸಿಸುವವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ತಮಿಳುನಾಡಿನ 7 ಜಿಲ್ಲೆಗಳಲ್ಲಿ ಬಸ್​ಗಳ ಓಡಾಟ ನಿರ್ಬಂಧಿಸಲಾಗಿದೆ. ಪುದುಕೊಟ್ಟಲ್, ತಂಜಾವೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ತಿರುವಾರೂರು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ : ತೃತೀಯ ಲಿಂಗಿಯಾಗಿ ಬದಲಾಗಿದ್ದಕ್ಕೆ ಕೆಲಸ ಕಳೆದುಕೊಂಡ ಡಾಕ್ಟರ್​; ದಿಕ್ಕುತೋಚದೆ ಭಿಕ್ಷಾಟನೆ ಮಾಡಿದ ವೈದ್ಯೆ

ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ಸುಮಾರು 1,200 ರಾಷ್ಟ್ರೀಯ ವಿಪತ್ತು ಪಡೆಯ (ಎನ್‌ಡಿಆರ್‌ಎಫ್) ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ನಿವಾರ್ ಚಂಡಮಾರುತದ ದೃಷ್ಟಿಯಿಂದ 800 ಮಂದಿಯನ್ನು ಸಿದ್ದಗೊಳಿಸಲಾಗಿದೆ.

"ನಿವಾರ್ ಅತ್ಯಂತ ತೀವ್ರವಾದ ಚಂಡಮಾರುತವಾಗಿದ್ದು, ಬುಧವಾರ ಸಂಜೆ ಭೂಕುಸಿತ ಉಂಟಾಗುವ ನಿರೀಕ್ಷೆಯಿದೆ ಎಂದು ಎನ್‌ಡಿಆರ್‌ಎಫ್ ಮುಖ್ಯಸ್ಥ ಎಸ್.ಎನ್ ಪ್ರಧಾನ್ ಮಾಹಿತಿ ನೀಡಿದ್ದಾರೆ. ಅಲ್ಲದೆ, ಕರ್ನಾಟಕಕ್ಕೆ ನಿವಾರ್ ಚಂಡ ಮಾರುತದ ಭೀತಿ ಇಲ್ಲ. ಆದರೆ, ಬೆಂಗಳೂರು ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Published by: MAshok Kumar
First published: November 24, 2020, 9:30 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading