National Herald Case: ಇಂದು ಇಡಿ ವಿಚಾರಣೆ ಇಲ್ಲ, ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ

ದೆಹಲಿಯಲ್ಲಿ ಯಾವ ರೀತಿ ಪ್ರತಿಭಟನೆ ನಡೆಸಬೇಕೆಂದು ಚರ್ಚೆ ನಡೆಸಲು ಇಂದು ಬೆಳಿಗ್ಗೆ ಎಐಸಿಸಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಪ್ರತಿಭಟನೆಯ ಸ್ವರೂಪ ನಿರ್ಧಾರ ಆಗಲಿದ್ದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಭಾಗವಹಿಸುವ ಸಾಧ್ಯತೆ ಇದೆ.

  • Share this:

ನವದೆಹಲಿ(ಜೂ. 16): ನ್ಯಾಷನಲ್ ಹೆರಾಲ್ಡ್ (National Herald) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (Enforcement Directorate) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಹಾಗೂ ಅವರ ಪುತ್ರ ಸಂಸದ ರಾಹುಲ್ ಗಾಂಧಿ (Rahul Gandhi) ಅವರಿಗೆ ಫೆಡರಲ್ ಏಜೆನ್ಸಿ ಮುಂದೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿತ್ತು.‌ ಕೊವಿಡ್ ಪಾಸಿಟಿವ್ (Covid Positive) ಆದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ವಿಚಾರಣೆಯಿಂದ ವಿನಾಯಿತಿ ಪಡೆದಿದ್ದಾರೆ. ರಾಹುಲ್ ಗಾಂಧಿ ಅವರು ಜೂನ್ 13ರಿಂದ ನಿರಂತರವಾಗಿ 3 ದಿನ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿದ್ದಾರೆ. 3 ದಿನದ ಬಳಿಕ ಇಂದು ಒಂದು ದಿನದ ವಿನಾಯಿತಿ ಸಿಕ್ಕಿದ್ದು ನಾಳೆ (ಜೂನ್ 17l)  ಮತ್ತೆ ವಿಚಾರಣೆಗೆ ಬರುವಂತೆ ಅವರಿಗೆ ಸೂಚನೆ ನೀಡಲಾಗಿದೆ‌.


ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ


ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವೈಫಲ್ಯಗಳನ್ನು, ಅದರಲ್ಲೂ ಚೀನಾದ ಸೇನೆ ಭಾರತದ ಗಡಿಯೊಳಗೆ ನುಸುಳುತ್ತಿರುವ ಬಗ್ಗೆ, ಮೋದಿ ಸರ್ಕಾರದ ಕೆಟ್ಟ ಆರ್ಥಿಕ ನೀತಿಯ ಬಗ್ಗೆ, ನಿರುದ್ಯೋಗದ ಬಗ್ಗೆ, ಆರ್ ಎಸ್ ಎಸ್ ನಿಲುವಿನ ಬಗ್ಗೆ ಗಟ್ಟಿ ದನಿಯಲ್ಲಿ ಮಾತನಾಡುತ್ತಾರೆ. ಅದೇ ಕಾರಣಕ್ಕೆ ಅವರ ವಿರುದ್ಧ ದ್ವೇಷ ಸಾಧಿಸುತ್ತಿರುವ ಕೇಂದ್ರ ಸರ್ಕಾರ ಈಗ ಅನಾವಶ್ಯಕವಾಗಿ ಕಿರುಕುಳ ನೀಡಲೆಂದೇ ಇಡಿ ವಿಚಾರಣೆ ನಡೆಸುತ್ತಿದೆ.


10 ಗಂಟೆಗೂ ಹೆಚ್ಚು ಕಾಲ  3 ದಿನ ವಿಚಾರಣೆ


ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿಲ್ಲದಿದ್ದರೂ‌ ಪ್ರತಿ ದಿನ 10 ಗಂಟೆಗೂ ಹೆಚ್ಚು ಕಾಲ  3 ದಿನ ವಿಚಾರಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ಸಂಸ್ಥೆ (CBI), ಆದಾಯ ತೆರಿಗೆ ಇಲಾಖೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


ಕೇಂದ್ರ ಸರ್ಕಾರದ ನಡೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ


ರಾಜಕೀಯ ದ್ವೇಷಕ್ಕಾಗಿ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕರೆ ಕೊಟ್ಟಿದೆ‌. ಈಗಾಗಲೇ ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಗಳಿಗೆ ರಾಜ್ಯ ರಾಜಧಾನಿ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ನಿರ್ದೇಶನ ನೀಡಿರುವ ಎಐಸಿಸಿ ದೆಹಲಿಯಲ್ಲಿ ಯಾವ ರೀತಿ ಪ್ರತಿಭಟನೆ ನಡೆಸಬೇಕೆಂದು ಚರ್ಚೆ ನಡೆಸಲು ಇಂದು ಬೆಳಿಗ್ಗೆ ಎಐಸಿಸಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಪ್ರತಿಭಟನೆಯ ಸ್ವರೂಪ ನಿರ್ಧಾರ ಆಗಲಿದ್ದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಭಾಗವಹಿಸುವ ಸಾಧ್ಯತೆ ಇದೆ.


ಎಐಸಿಸಿ ಸುತ್ತಲಿನ ರಸ್ತೆಗಳು ಬಂದ್


ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಬಹುದು, ಅಥವಾ ಎಐಸಿಸಿ ಕಚೇರಿಯಿಂದ ಇಡಿ ಕಚೇರಿ, ರಾಷ್ಟ್ರಪತಿ ಭವನ ಅಥವಾ ಸಂಸತ್ ಭವನಕ್ಕೆ ಮೆರವಣಿಗೆ ಮಾಡಬಹುದು ಎಂಬ ಹಿನ್ನೆಲೆಯಲ್ಲಿ ಪೊಲೀಸರು ದೆಹಲಿಯ ಪ್ರಮುಖ ರಸ್ತೆಗಳ ಸಂಚಾರವನ್ನು ನಿಷೇಧಿಸಿದ್ದಾರೆ.  ಅದರಲ್ಲೂ ಎಐಸಿಸಿ ಕಚೇರಿಗೆ ಹೋಗುವ ಅಕ್ಬರ್ ರಸ್ತೆ, ಮೌಲಾನಾ ಆಜಾದ್ ರಸ್ತೆ, ಜನಪತ್ ರಸ್ತೆ, ಅಬ್ದುಲ್ ಕಲಾಂ ರಸ್ತೆ, ಮೋತಿಲಾಲ್ ಓರಾ ರಸ್ತೆಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧ ಮಾಡಿದ್ದಾರೆ‌.


ಇದನ್ನೂ ಓದಿ: National Herald Case: ಸತತ 3ನೇ ದಿನ ಇಡಿ ವಿಚಾರಣೆಗೆ ಹಾಜರಾಗಲಿರುವ ರಾಹುಲ್ ಗಾಂಧಿ


ಲೋಕಸಭಾ ಸ್ಪೀಕರ್ ಭೇಟಿ ಮಾಡಲಿರುವ ಅಧೀರ್ ರಂಜನ್


ಕಾಂಗ್ರೆಸ್ ಸಂಸದರಿಗೆ ದೆಹಲಿಯಲ್ಲಿ ಪ್ರತಿಭಟನೆ ಮಾಡಲು ಅವಕಾಶ ನೀಡುತ್ತಿಲ್ಲ. ಪ್ರತಿಭಟನೆ ಮಾಡಲು ಮುಂದಾಗುವವರನ್ನು ಬಂಧಿಸಲಾಗುತ್ತಿದೆ. ಸಂಸದರ ಮೇಲೆ‌ ಮ್ಯಾನ್ ಹ್ಯಾಂಡಲ್ ಮಾಡಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಲಿದ್ದಾರೆ.

top videos
    First published: