ಆರೋಗ್ಯ ಕಾರ್ಯಕರ್ತರು ಇನ್ಮೇಲೆ ಕೋವಿಡ್ ಲಸಿಕೆಗೆ ನೋಂದಣಿ ಮಾಡಿಕೊಳ್ಳುವಂತಿಲ್ಲ: ಕೇಂದ್ರ ಸರ್ಕಾರ

ಇನ್ಮುಂದೆ ಯಾವುದೇ ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್ಲೈನ್ ವರ್ಕರ್ಸ್ ಕೋವಿಡ್ ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಅನೇಕ ಕಡೆ ಈ ವರ್ಗದ ಫಲಾನುಭವಿಗಳು ನಿಯಮಗಳನ್ನು ಮೀರುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Covid Vaccination (ಏಪ್ರಿಲ್ 04): ಇನ್ಮುಂದೆ ಯಾವುದೇ ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್​ಲೈನ್ ವರ್ಕರ್ಸ್ ಕೋವಿಡ್ ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಅನೇಕ ಕಡೆ ಈ ವರ್ಗದ ಫಲಾನುಭವಿಗಳು ನಿಯಮಗಳನ್ನು ಮೀರುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದೆ.

ಜನವರಿ 16ರಂದು ದೇಶದಾದ್ಯಂತ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡಲು ಆರಂಭಿಸಲಾಯ್ತು. ಫೆಬ್ರವರಿ 2ರಿಂದ ಫ್ರಂಟ್​​ಲೈನ್ ವರ್ಕರ್ಸ್ ಅಥವಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವ ಕಾರ್ಯಕ್ರಮ ಶುರುವಾಯಿತು. ಮಾರ್ಚ್ 1ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷಕ್ಕಿಂದ ಹೆಚ್ಚಿನ ಅನಾರೋಗ್ಯ ಪೀಡಿತರಿಗೆ ಲಸಿಕೆ ನೀಡಲು ಆರಂಭಿಸಲಾಯಿತು.

ಸರ್ಕಾರದ ನಿರ್ಧಾರದ ಬಗ್ಗೆ ವಿವರಿಸಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಮೊದಲು ಲಸಿಕೆ ನೀಡಲಾಯಿತು. ಲಸಿಕೆ ಪಡೆಯಲು ನೋಂದಣಿ ದಿನಾಂಕವನ್ನು ಈಗಾಗಲೇ ಅನೇಕ ಬಾರಿ ಮುಂದೂಡಲಾಗಿದೆ. ನಂತರ ಫೆಬ್ರವರಿ 25ರಂದು ಆರೋಗ್ಯ ಕಾರ್ಯಕರ್ತರಿಗೆ ಮತ್ತು ಮಾರ್ಚ್ 6ರಂದು ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆಗಾಗಿ ನೋಂದಣಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಎಂದು ತಿಳಿಸಲಾಗಿತ್ತು. ಇಷ್ಟೆಲ್ಲಾ ಆಗಿ ಒಂದು ತಿಂಗಳು ಕಳೆದಿದೆ. ಈ ನಡುವೆ 60 ವರ್ಷಕ್ಕಿಂತ ಹೆಚ್ಚಿನವರಿಗೆ ಲಸಿಕೆ ನೀಡುವ ಸಂದರ್ಭದಲ್ಲೂ ಈ ಎರಡು ವರ್ಗಕ್ಕೆ ನೋಂದಣಿ ಮಾಡಿಸಿಕೊಳ್ಳುವ ಅವಕಾಶ ನೀಡಲಾಗಿತ್ತು.

ಈ ನಡುವೆ ದೇಶದ ನಾನಾ ಮೂಲೆಗಳಿಂದ ಲಸಿಕೆಯ ದುರುಪಯೋಗವಾಗುತ್ತಿರುವ ಕುರಿತು ಮಾಹಿತಿ ಬಂದಿದೆ. ಅನೇಕ ಲಸಿಕಾ ಕೇಂದ್ರಗಳಲ್ಲಿ ಅನರ್ಹ ವ್ಯಕ್ತಿಗಳು ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರ ಸೋಗಿನಲ್ಲಿ ಲಸಿಕೆ ಪಡೆದಿರುವುದು ಗಮನಕ್ಕೆ ಬಂದಿದ್ದು ಇದು ಸಂಪೂರ್ಣವಾಗಿ ನಿಯಮಬಾಹಿರವಾಗಿದೆ ಎಂದು ರಾಜೇಶ್ ಭೂಷಣ್ ಹೇಳಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರ ನೋಂದಣಿ ಸಂಖ್ಯೆಯಲ್ಲಿ ಧಿಡೀರನೆ ಶೇಕಡಾ 24ರಷ್ಟು ಹೆಚ್ಚಳ ಕಂಡುಬಂದಿದೆ. ಈ ಸಂಬಂಧ ತಜ್ಞರ ಸಭೆಯಲ್ಲಿ ಚರ್ಚಿಸಿದಾಗ ನಾನಾ ರಾಜ್ಯಗಳಲ್ಲಿ ನಡೆಯುತ್ತಿರುವ ನಿಯಮಬಾಹಿರ ಪ್ರಕರಣಗಳು ಬೆಳಕಿಗೆ ಬಂದವು. ಆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಈಗಾಗಲೇ ನೋಂದಣಿ ಮಾಡಿಸಿಕೊಂಡಿರುವ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಯಾವುದೇ ಸಮಸ್ಯೆ ಇಲ್ಲದೆ ಲಸಿಕೆ ದೊರೆಯಲಿದೆ. ಜೊತೆಗೆ 45 ವರ್ಷಕ್ಕಿಂದ ಮೇಲ್ಪಟ್ಟ ಎಲ್ಲರಿಗೂ ಈಗಿನಂತೆಯೇ ಲಸಿಕಾ ಕಾರ್ಯಕ್ರಮ ಮುಂದುವರೆಯಲಿದೆ ಎಂದು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.
Published by:Soumya KN
First published: