parliament monsoon session 2021: ಮಳೆಗಾಲದ ಅಧಿವೇಶ ನಡೆಯುತ್ತಿದ್ದು ಕೊರೊನಾ ಸಾವಿನ ಕುರಿತು ಕೇಂದ್ರ ಸರ್ಕಾರ ನೀಡಿರುವ ಉತ್ತರ ಅಚ್ಚರಿ ಮೂಡಿಸಿದೆ. ಕೊರೊನಾ 2ನೇ ಅಲೆಯಲ್ಲಿ ಯಾವ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಸತ್ತಿಲ್ಲ ಎಂದು ಸದನದಲ್ಲಿ ಸರ್ಕಾರ ಹೇಳಿದೆ. ಹೆಚ್ಚಿನ ಸೋಂಕಿತರು ಆಮ್ಲಜನಕದ ಕೊರತೆಯಿಂದ ರಸ್ತೆಗಳಲ್ಲಿ, ಆಸ್ಪತ್ರೆಗಳಲ್ಲಿ ಸಾವನ್ನಪ್ಪಿರುವುದು ನಿಜವೇ ಎಂಬ ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್ ಪ್ರಶ್ನೆಗೆ ಕೇಂದ್ರ ಸರ್ಕಾರ ಉತ್ತರಿಸಿದೆ. ಕೊರೊನಾ 2ನೇ ಅಲೆಯಲ್ಲಿ ಆಕ್ಸಿಜನ್ಗೆ ಅತ್ಯಧಿಕ ಬೇಡಿಕೆ ಸೃಷ್ಟಿಯಾಗಿತ್ತು ಎಂಬುವುದನ್ನು ಒಪ್ಪಿಕೊಂಡ ಸರ್ಕಾರ ಆಕ್ಸಿಜನ್ ಕೊರತೆಯಿಂದ ಯಾರೂ ಸತ್ತಿಲ್ಲ ಎಂದು ಸದನಕ್ಕೆ ಹೇಳಿದೆ.
ರಾಜ್ಯಸಭೆಯಲ್ಲಿ ಮಾತನಾಡಿದ ಆರೋಗ್ಯ ಇಲಾಖೆ ರಾಜ್ಯ ಖಾತೆ ಸಚಿವೆ ಭಾರತಿ ಪರ್ವಿನ್, ಆರೋಗ್ಯ ವಿಚಾರ ರಾಜ್ಯ ಸರ್ಕಾರದ ಅಧೀನದಲ್ಲಿ ಬರುತ್ತದೆ. ಯಾವುದೇ ರಾಜ್ಯ ಸರ್ಕಾರ, ಕೇಂದ್ರಾಡಳಿತ ಪ್ರದೇಶ ಆಕ್ಸಿಜನ್ ಕೊರತೆಯಿಂದ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರಕ್ಕೆ ವರದಿ ಸಲ್ಲಿಸಿಲ್ಲ. ಆದರೆ ಕೆಲ ಸರ್ಕಾರಗಳು ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯನ್ನು ಮರು ತಿದ್ದುಪಡಿ ಮಾಡಿ ಕಳುಹಿಸಿದ್ದಾರೆ ಎಂದು ಸಚಿವೆ ಸದನಕ್ಕೆ ಮಾಹಿತಿ ನೀಡಿದರು.
ಇನ್ನು ಆಕ್ಸಿಜನ್ ಕೊರತೆ, ಪೂರೈಕೆಯು ಆಸ್ಪತ್ರೆ ಹಾಗೂ ಆಕ್ಸಿಜನ್ ಪೂರೈಕೆದಾರರ ನಡುವಿನ ವಿಚಾರ. ಇದರಲ್ಲಿ ಸರ್ಕಾರದ ಪಾತ್ರ ಇರುವುದಿಲ್ಲ. ಆದರೂ ಕೊರೊನಾ 2ನೇ ಅಲೆ ವೇಳೆ ದೇಶಾದ್ಯಂತ ಹಿಂದೆಂದಿಗಿಂತಲೂ ಹೆಚ್ಚಿನ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಕ್ಸಿಜನ್ ವಿತರಣೆಗೆ ಮುಂದಾಗಿತ್ತು ಎಂದಿದ್ದಾರೆ.
ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ: 42 ಲಕ್ಷ ಅನರ್ಹ ರೈತರ ಖಾತೆಗೆ ಹೋಗಿದೆ 3 ಸಾವಿರ ಕೋಟಿ ಹಣ
ಕೊರೊನಾ 2ನೇ ಅಲೆ ವೇಳೆ ಸಾವಿರಾರು ಜನ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂದು ನಿತ್ಯವೂ ವರದಿಯಾಗಿದೆ. ಆದರೆ ಯಾವುದೇ ಸಾವು ಆಕ್ಸಿಜನ್ ಕೊರತೆಯಿಂದ ಆಗಿಲ್ಲ ಎಂಬ ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರತಿಪಕ್ಷಗಳನ್ನು ಕೆರಳಿಸಿದೆ. ಆಕ್ಸಿಜನ್ ಕೊರತೆಯಿಂದ ಜನ ಸತ್ತಿದ್ದರಿಂದಲೇ ವಿಶ್ವದ ಹಲವು ರಾಷ್ಟ್ರಗಳು ಆಕ್ಸಿಜನ್ ಕಳುಹಿಸಿಕೊಟ್ಟಿದ್ದು. ಸೋಂಕಿತರು ಸಾವನ್ನು ಕಂಡೇ ಇಡೀ ವಿಶ್ವ ಭಾರತದ ನೆರವಿಗೆ ಬಂದಿದ್ದು. ಕೇವಲ ಕಾಗದದ ಮೇಲೆ ಆಕ್ಸಿಜನ್ ಕೊರತೆಯಿಂದ ಸತ್ತಿಲ್ಲ ಎಂದು ನಮೂದಿಸಿದಾಕ್ಷಣಕ್ಕೆ ಸತ್ಯ ಮರೆ ಮಾಚಲು ಸಾಧ್ಯವೇ ಎಂದು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ