ಪೊಲೀಸರು ಕರ್ತವ್ಯದ ವೇಳೆ ಮೊಬೈಲ್-ಸಾಮಾಜಿಕ ಜಾಲತಾಣ ಬಳಸದಂತೆ ಆದೇಶಿಸಿದ ಬಿಹಾರದ ಸರ್ಕಾರ

ಪೊಲೀಸರು ಕರ್ತವ್ಯದಲ್ಲಿದ್ದಾಗ ತಮ್ಮ ಸ್ಮಾರ್ಟ್‌ಫೋನ್‌ಗಳು ಮತ್ತು ಮೊಬೈಲ್ ಪೋನ್‌ಗಳಲ್ಲಿ ಹೆಚ್ಚು ಕಾರ್ಯನಿರತರಾಗಿರುತ್ತಾರೆ ಎಂದು ಪೊಲೀಸ್ ಸಿಬ್ಬಂದಿ ಬಗ್ಗೆ ಹಲವಾರು ದೂರುಗಳು ಮತ್ತು ವರದಿಗಳು ಬಂದಿವೆ ಹಾಗಾಗಿ ಈ ಆದೇಶ ನೀಡಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

 • Share this:
  ಪಾಟ್ನಾ (ಜೂನ್ 02); ಪೊಲೀಸರು ಕೆಲಸದಲ್ಲಿರುವಾಗ ಮೊಬೈಲ್​ ಹೆಚ್ಚಾಗಿ ಬಳಸುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಬಿಹಾರ ಪೊಲೀಸರು ಮುಂದಿಟ್ಟಿದ್ದಾರೆ. ಇದಕ್ಕೆ ಪರಿಹಾರವನ್ನೂ ಮುಂದಿಟ್ಟಿರುವ ಇಲಾಖೆ, "ಟ್ರಾಫಿಕ್ ಡ್ಯೂಟಿ, ವಿಐಪಿ ಅಥವಾ ವಿವಿಐಪಿ ಕರ್ತವ್ಯದಲ್ಲಿರುವಾಗ ವಿಶೇಷ ಪರಿಸ್ಥಿತಿ ಹೊರತು ಪಡಿಸಿ ಮೊಬೈಲ್ ಫೋನ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಬಾರದು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿರಬಾರದು" ಎಂದು ಬಿಹಾರದ ಪೊಲೀಸರಿಗೆ ಆದೇಶಿಸಲಾಗಿದೆ. ಬಿಹಾರ ಡಿಜಿಪಿ (ಪೊಲೀಸ್ ಮಹಾನಿರ್ದೇಶಕ) ಎಸ್.ಕೆ. ಸಿಂಘಾಲ್ ಮಂಗಳವಾರ ಆದೇಶವನ್ನು ಜಾರಿಗೊಳಿಸಿದ್ದಾರೆ. ರಾಜ್ಯದ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಇದನ್ನು ತಿಳಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದ ಪೊಲೀಸ್ ಅಧಿಕಾರಿಗಳು ಅಥವಾ ಸಿಬ್ಬಂದಿ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

  ಪೊಲೀಸರು ಕರ್ತವ್ಯದಲ್ಲಿದ್ದಾಗ ತಮ್ಮ ಸ್ಮಾರ್ಟ್‌ಫೋನ್‌ಗಳು ಮತ್ತು ಮೊಬೈಲ್ ಪೋನ್‌ಗಳಲ್ಲಿ ಹೆಚ್ಚು ಕಾರ್ಯನಿರತರಾಗಿರುತ್ತಾರೆ ಎಂದು ಪೊಲೀಸ್ ಸಿಬ್ಬಂದಿ ಬಗ್ಗೆ ಹಲವಾರು ದೂರುಗಳು ಮತ್ತು ವರದಿಗಳು ಬಂದಿವೆ ಹಾಗಾಗಿ ಈ ಆದೇಶ ನೀಡಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.

  "ನಗರದ ವಿವಿಧ ಭಾಗಗಳಲ್ಲಿ ಪೊಲೀಸರು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಆಟವಾಡು ವುದು, ಮಾತನಾಡುವುದು ಅಥವಾ ಪರಸ್ಪರ ಸಂದೇಶ ಕಳುಹಿಸುವುದರಲ್ಲಿ ನಿರತರಾಗಿ ರುವುದನ್ನು ನಾವು ನೋಡಬಹುದು. ಇದೇ ಅವರ ಪ್ರಧಾನ ಕರ್ತವ್ಯವೆಂಬಂತೆ ಮಾಡುತ್ತಿರುತ್ತಾರೆ" ಎಂದು ಆದೇಶದಲ್ಲಿ ತಿಳಿಸಲಾಗಿದೆ.

  ಕಾನೂನು ಮತ್ತು ಸುವ್ಯವಸ್ಥೆಯ ಸಂದರ್ಭಗಳಿಗೆ ಸ್ಪಂದಿಸಲು ಪೊಲೀಸರು ಯಾವಾಗಲು ಸಿದ್ಧರಾಗಿರಬೇಕು. ಕರ್ತವ್ಯದಲ್ಲಿರುವ ಪೊಲೀಸರು ಯಾವಾಗಲು ಜಾಗರುಕರಾಗಿರಬೇಕು. ವಿಶೇಷವಾಗಿ ಕಾರ್ಯನಿರತ ಟ್ರಾಫಿಕ್ ಸಿಗ್ನಲ್‌ಗಳಲ್ಲಿ, ವಿಐಪಿ / ವಿವಿಐಪಿ ಭೇಟಿಗಳಿಗೆ ನಿಯೋಜಿಸಲ್ಪಟ್ಟ ಸಂದರ್ಭ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸುವಾಗ ಎಚ್ಚರ ಅಗತ್ಯ. ಅಲ್ಲಿ ಮೊಬೈಲ್‌ಗಳನ್ನು ಬಳಸುತ್ತಿರುವುದು ಕೆಟ್ಟ ಪರಿಣಾಮ ಬೀರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

  ಇದನ್ನೂ ಓದಿ ; Amit Shah: ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು ಗೃಹ ಸಚಿವ ಅಮಿತ್ ಶಾಗೆ IMA ಪತ್ರ!

  ಟ್ರಾಫಿಕ್ ಸಿಗ್ನಲ್‌ ಅಥವಾ ವಿಐಪಿ ಡ್ಯೂಟಿಯಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿರುವಾಗ, ತಮ್ಮ ಹಿರಿಯ ಅಧಿಕಾರಿಗಳಿಗೆ ತಮ್ಮ ಮೊಬೈಲ್ ಫೋನ್‌ಗಳನ್ನು ನೀಡಿ ನಂತರ ಹಾಜರಾಗಬೇಕು ಎಂದು ಸೆಪ್ಟೆಂಬರ್ 2019 ರಲ್ಲಿ ರಾಜಸ್ಥಾನ ಸರ್ಕಾರ ಆದೇಶಿಸಿದೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.         
  Published by:MAshok Kumar
  First published: