ವಾರಾಣಸಿಯಿಂದ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್​ ಸ್ಪರ್ಧಿ ಪ್ರಿಯಾಂಕಾ ಗಾಂಧಿ ಅಲ್ಲ, ಅಜಯ್​ ರಾಯ್​

ಇದು ಪಕ್ಷದ ಹೈಕಮಾಂಡ್​ ನಿರ್ಧಾರ. ನಾವು ಪಕ್ಷದ ಕಾರ್ಯಕರ್ತರಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಿದರೂ ಅವರ ಪರವಾಗಿ ಪ್ರಚಾರ ಮಾಡಲು ಸಿದ್ಧರಿದ್ದೇವೆ ಎಂದು ಹೇಳಿದ ಅವರು, ಪ್ರಿಯಾಂಕಾ ಗಾಂಧಿ ಅವರು ತಮ್ಮ ಪರ ಪ್ರಚಾರ ಮಾಡಲಿದ್ದಾರೆ ಎಂದು ಅಜಯ್​ ರೈ ತಿಳಿಸಿದರು.

HR Ramesh | news18
Updated:April 25, 2019, 2:01 PM IST
ವಾರಾಣಸಿಯಿಂದ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್​ ಸ್ಪರ್ಧಿ ಪ್ರಿಯಾಂಕಾ ಗಾಂಧಿ ಅಲ್ಲ, ಅಜಯ್​ ರಾಯ್​
ಪ್ರಿಯಾಂಕಾ ಗಾಂಧಿ, ಪ್ರಧಾನಿ ಮೋದಿ ಮತ್ತು ಅಜಯ್​ ರೈ
HR Ramesh | news18
Updated: April 25, 2019, 2:01 PM IST
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪರ್ಧಿಸುವ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಮತ್ತೆ ಅಜಯ್ ರಾಯ್​ ಕಣಕ್ಕೆ ಇಳಿಯಲಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಕೇಳಿಬಂದಿದ್ದ ಪ್ರಿಯಾಂಕಾ ಗಾಂಧಿ ಸ್ಪರ್ಧೆಯ ಊಹಾಪೋಹಕ್ಕೆ ಕಾಂಗ್ರೆಸ್ ತೆರೆ ಎಳೆದಿದೆ.   

ನ್ಯೂಸ್​ 18 ನೊಂದಿಗೆ ಮಾತನಾಡಿದ ಕಾಂಗ್ರೆಸ್​ ಅಭ್ಯರ್ಥಿ ಅಜಯ್​ ರಾಯ್​, ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ನಾನೇ ಸ್ಪರ್ಧಿಸುವಂತೆ ಪಕ್ಷದಿಂದ ಸೂಚನೆ ನೀಡಲಾಗಿದೆ. ಇದು ಪಕ್ಷದ ಹೈಕಮಾಂಡ್​ ನಿರ್ಧಾರ. ನಾವು ಪಕ್ಷದ ಕಾರ್ಯಕರ್ತರಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಿದರೂ ಅವರ ಪರವಾಗಿ ಪ್ರಚಾರ ಮಾಡಲು ಸಿದ್ಧರಿದ್ದೇವೆ ಎಂದು ಹೇಳಿದ ಅವರು, ಪ್ರಿಯಾಂಕಾ ಗಾಂಧಿ ಅವರು ತಮ್ಮ ಪರ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು.

ಹಾಗೆಯೇ ಉತ್ತರಪ್ರದೇಶದ ಮತ್ತೊಂದು ಬಿಜೆಪಿ ಭದ್ರಕೋಟೆಯಾದ ಗೋರಖ್​ಪುರದಿಂದ ಮಧುಸೂದನ್​ ಅವರಿಗೆ ಕಾಂಗ್ರೆಸ್​ ಟಿಕೆಟ್ ನೀಡಿ, ಇಂದು ಹೆಸರು ಪ್ರಕಟಿಸಿದೆ.

 

ಕಾಂಗ್ರೆಸ್​ ಇಂದು ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿ


ಕಳೆದ 2014ರ ಲೋಕಸಭಾ ಚುನಾವಣೆಯಲ್ಲೂ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್​ನಿಂದ ಅಜಯ್​ ರೈ ಕಣಕ್ಕೆ ಇಳಿದಿದ್ದರು. ಈ ಚುನಾವಣೆಯಲ್ಲಿ ಮೋದಿ ಅವರು 5.81 ಲಕ್ಷ ಮತಗಳಿಂದ ಗೆಲುವು ದಾಖಲಿಸಿದ್ದರು. ಅಜಯ್ ಅವರು 75,614 ಮತಗಳನ್ನು ಪಡೆದಿದ್ದರು.
Loading...

ಇದನ್ನು ಓದಿ: ವಾರಾಣಸಿಯಲ್ಲಿ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿಯಲು ಪ್ರಿಯಾಂಕಾ ಗಾಂಧಿ ಸಜ್ಜು?ವಾರಾಣಸಿಯಿಂದ ಸ್ಪರ್ಧೆ ಮಾಡುತ್ತಿರುವ ಪ್ರಧಾನಿ ಮೋದಿ ಅವರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಇಂದು ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಬೃಹತ್ ರೋಡ್​ ಶೋ ನಡೆಸಿದ್ದಾರೆ.  ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಹಾರ ಸಿಎಂ ನಿತೀಶ್​ ಕುಮಾರ್, ಶಿವಸೇನಾ ಮುಖ್ಯಸ್ಥ ಉದ್ಧವ್​ ಠಾಕ್ರೆ ಮತ್ತು ಪಂಜಾಬ್​ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್​ ಬದಲ್​ ಹಾಜರಿದ್ದರು.

First published:April 25, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...