ಅಶ್ಲೀಲ ಚಿತ್ರಗಳ ನಿರ್ಮಾಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಮುಂಬೈ ಪೊಲೀಸರು ಬುಧವಾರ ಹೇಳಿದ್ದಾರೆ, ಪ್ರಸ್ತುತ ಅವರ ಪತಿ ರಾಜ್ ಕುಂದ್ರಾ ಅವರನ್ನು ಬಂಧಿಸಲಾಗಿದ್ದು. ಪ್ರಾಥಮಿಕ ತನಿಖೆಯಲ್ಲಿ ಶಿಲ್ಪಾಶೆಟ್ಟಿ ಅವರೂ ಭಾಗಿಯಾಗಿರುವುದು ಕಂಡು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂಬೈ ಅಪರಾಧ ವಿಭಾಗವು ಶಿಲ್ಪಾ ಶೆಟ್ಟಿಯ ಪಾತ್ರದ ಬಗ್ಗೆ ಇನ್ನೂ ಕೂಲಂಕುಷವಾಗಿ ವಿಶ್ಲೇಷಿಸುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಈ ಅಶ್ಲೀಲ ದಂಧೆಯಲ್ಲಿ ಶಿಲ್ಪಾ ಶೆಟ್ಟಿ ಅವರು ಭಾಗಿಯಾಗಿಲ್ಲ ಎನ್ನುವದು ಇನ್ನಷ್ಟೇ ತಿಳಿಯಬೇಕಿದೆ. ಪ್ರಾಥಮಿಕ ತನಿಖೆಯಲ್ಲಿ ನಮಗೆ ಯಾವುದೇ ಸುಳಿವು ಸಿಕ್ಕಿಲ್ಲ . ಆದರೆ ನಾವು ಇನ್ನೂ ವಿಶೇಷ ತಂಡ ರಚಿಸಿ ಇದರ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತೇವೆ "ಎಂದು ಮುಂಬೈ ಅಪರಾಧ ವಿಭಾಗದ ಅಧಿಕಾರಿಯೊಬ್ಬರು ಸಿಎನ್ಎನ್-ನ್ಯೂಸ್ 18 ಗೆ ತಿಳಿಸಿದ್ದಾರೆ.
"ನಾವು ಶೆಟ್ಟಿ ಮತ್ತು ಕುಂದ್ರಾ ಜಂಟಿಯಾಗಿ ಹೊಂದಿರುವ ಅವರ ಬ್ಯಾಂಕ್ ಖಾತೆಗಳ ವ್ಯವಹಾರಗಳನ್ನು ಪರಿಶೀಲಿಸುತ್ತಿದ್ದೇವೆ. ಹಾಗೂ ಆದಾಯದ ಮೂಲಗಳನ್ನು ಸಹ ಸಂಗ್ರಹಿಸಲಾಗುತ್ತಿದೆ ಹಾಗೂ ಇದನ್ನು ಕೂಲಂಕುಷವಾಗಿ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಸ್ತುತ, ಕುಂದ್ರಾ ಅವರು ಮುಖ್ಯ ಆರೋಪಿಯಾಗಿರುವುದರಿಂದ ಅವರೇ ಪ್ರಸ್ತುತ ತನಿಖೆಯ ಕೇಂದ್ರಬಿಂದುವಾಗಿದ್ದಾರೆ ಎಂದು ಒತ್ತಿಹೇಳಿದ ಅಧಿಕಾರಿ, "ಶಿಲ್ಪಾ ಶೆಟ್ಟಿ ಕುಂದ್ರಾ ಅವರಿಗೆ ಈಗ ಯಾವುದೇ ಸಮನ್ಸ್ ನೀಡುವುದಿಲ್ಲ" ಎಂದು ಹೇಳಿದರು.
ಹಣಕಾಸಿನ ವಹಿವಾಟಿನ ದಾಖಲೆಗಳು ಸಾವಿರಾರು ಸಂಖ್ಯೆಯಲ್ಲಿವೆ. ನಿಖರವಾದ ಗಳಿಕೆಯನ್ನು ಪಡೆಯಲು ನಾವು ವಿವರಗಳನ್ನು ವಿಶ್ಲೇಷಿಸುತ್ತಿದ್ದೇವೆ. ಇದನ್ನು ಅಪರಾಧದ ಆದಾಯವೆಂದು ಪರಿಗಣಿಸಲಾಗುತ್ತದೆ. ಇಲ್ಲಿಯವರೆಗೆ ನಾವು ವಿವಿಧ ಖಾತೆಗಳಲ್ಲಿ 7.5 ಕೋಟಿ ರೂಗಳನ್ನು ಸ್ಥಗಿತಗೊಳಿಸಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.
ಕುಂದ್ರಾ ತನ್ನ ಆ್ಯಪ್ ‘ಹಾಟ್ಶಾಟ್ಸ್’ ಅನ್ನು ಯುಕೆ ಮೂಲದ ಕೆನ್ರಿನ್ ಪ್ರೈವೇಟ್ ಲಿಮಿಟೆಡ್ಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ. ಆದರೆ ಇದು ಅವವ ಸಂಬಂಧಿ ಪ್ರದೀಪ್ ಬಕ್ಷಿ ಒಡೆತನದಲ್ಲಿ ಇದೆ ಎಂದು ಹೇಳಿದ್ದರು. ಅದರ ಎಲ್ಲಾ ಚಟುವಟಿಕೆಗಳು ಮುಂಬೈಯಿಂದ ನಿಯಂತ್ರಿಸಲ್ಪಡುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಕುಂದ್ರಾ ಮತ್ತು ಆತನ ಸಹಚರ ರಿಯಾನ್ ಥಾರ್ಪ್ ಅವರನ್ನು ಜುಲೈ 23 ರವರೆಗೆ ಬಂಧನದಲ್ಲಿ ಇಡಲಾಗಿದ್ದು. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಒಂಬತ್ತು ಜನರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಅಶ್ಲೀಲ ಚಿತ್ರಗಳಿಂದ ದಿನಕ್ಕೆ 6 ರಿಂದ 8 ಲಕ್ಷ ಗಳಿಸುತ್ತಿದ್ದ ರಾಜ್ ಕುಂದ್ರಾ!
‘ಹಾಟ್ಶಾಟ್ಸ್’ ಆ್ಯಪ್ ಮೂಲಕ ಅಶ್ಲೀಲ ವಿಡಿಯೋಗಳ ಪ್ರಸಾರದಲ್ಲಿ ಕುಂದ್ರಾ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ‘ಹಾಟ್ಶಾಟ್’ ಆ್ಯಪ್ ಪ್ರಸ್ತುತ ಎಲ್ಲಿಯೂ ಸಿಗುವುದಿಲ್ಲ, ಇದನ್ನು ಗೂಗಲ್ ಪ್ಲೇಸ್ಟೋರ್ ಮತ್ತು ಆ್ಯಪಲ್ ಸ್ಟೋರ್ಗಳು ತೆಗೆದು ಹಾಕಿವೆ. ಕುಂದ್ರಾ ಹಾಟ್ಶಾಟ್ ಆ್ಯಪ್ಗೆ ಬೇಕಾದ ಕಟೆಂಟ್ಗಳನ್ನು ಕೊಡುತ್ತಿದ್ದರು ಹಾಗೂ ಯುಕೆಯಲ್ಲಿ ಇರುವ ತನ್ನ ವಿಹಾನ್ ಇಂಡಸ್ಟ್ರೀಸ್ ಕಚೇರಿಯಿಂದ ನಿಯಂತ್ರಿಸಲಾಗುತ್ತಿತ್ತು ಎಂದು ಹೇಳಲಾಗಿದೆ.. 2019 ರಲ್ಲಿ ‘ಹಾಟ್ಶಾಟ್’ ಆ್ಯಪ್ಅನ್ನು $25,000 ಡಾಲರ್ಗೆ ಮಾರಾಟ ಮಾಡಿದ್ದೇನೆ ಎಂದು ಕುಂದ್ರಾ ಹೇಳಿದ್ದರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ