48 ಗಂಟೆ ಒಳಗೆ ವಿಶ್ವಾಸ ಮತಯಾಚನೆ ನಡೆಸುವಂತೆ ಸೂಚಿಸಿ; ಸುಪ್ರೀಂ ಮೆಟ್ಟಿಲೇರಿದ ಮಧ್ಯಪ್ರದೇಶ ಬಿಜೆಪಿ

ಪಕ್ಷೇತರರು ಸೇರಿದಂತೆ ಕಾಂಗ್ರೆಸ್​ನ 22 ಶಾಸಕರು ರಾಜೀನಾಮೆ ನೀಡಿದ್ದಾರೆ. ಈಗ ವಿಶ್ವಾಸಮತಯಾಚನೆ ಮುಂದೂಡಲ್ಪಟ್ಟಿದೆ.  ಹೀಗಾಗಿ ರಾಜೀನಾಮೆ ನೀಡಿದ 22 ಶಾಸಕರ ಮನವೊಲಿಸಲು ಕಮಲನಾಥ್​ಗೆ 10 ದಿನ ಸಮಯಾವಕಾಶ ದೊರೆತಿದೆ.

ಸುಪ್ರೀಂ ಕೋರ್ಟ್​.

ಸುಪ್ರೀಂ ಕೋರ್ಟ್​.

  • Share this:
    ಭೋಪಾಲ್ (ಮಾ.16)​: ಮಧ್ಯಪ್ರದೇಶ ಬಜೆಟ್​ ಅಧಿವೇಶನ ಮಾ.26ಕ್ಕೆ ಮುಂದೂಡಲ್ಪಟ್ಟಿದೆ. ಈ ಮೂಲಕ ವಿಶ್ವಾಸ ಮತಯಾಚನೆ ಸಾಬೀತು ಮಾಡಲು ಮುಖ್ಯಮಂತ್ರಿ ಕಮಲ್​ ನಾಥ್​ಗೆ ಇನ್ನೂ 10 ದಿನ ಕಾಲಾವಕಾಶ ದೊರೆತಿದೆ. ಈ ಮಧ್ಯೆ ಬಿಜೆಪಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ.

    ಶನಿವಾರ ಮಧ್ಯಪ್ರದೇಶದ ರಾಜ್ಯಪಾಲರನ್ನು ಭೇಟಿಯಾಗಿದ್ದ ಬಿಜೆಪಿ ನಾಯಕರು, ಸಿಎಂ ಕಮಲನಾಥ್ ಅವರಿಗೆ ಸೋಮವಾರ ಸದನದಲ್ಲಿ ವಿಶ್ವಾಸಮತ ಯಾಚಿಸಿ ಬಹುಮತ ಸಾಬೀತು ಪಡಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದರು. ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಲಾಲ್​ಜೀ ಟಂಡನ್ ಅವರ ಬಳಿ ಮನವಿ ಮಾಡಿತ್ತು. ಅಂತೆಯೇ ಇಂದು ವಿಶ್ವಾಸ ಮತಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಭಾವಿಸಲಾಗಿತ್ತು. ಆದರೆ, ಅಧಿವೇಶನವನ್ನು ಸ್ಪೀಕರ್​ ಎನ್​.ಪಿ ಪ್ರಜಾಪತಿ ಮುಂದೂಡಿದ್ದಾರೆ.

    230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಪ್ರಸ್ತುತ 228 ಶಾಸಕರಿದ್ದಾರೆ. ಬಹುಮತಕ್ಕೆ 115 ಸ್ಥಾನಗಳ ಅವಶ್ಯಕತೆ ಇದೆ. ಬಿಎಸ್​ಪಿಯ ಇಬ್ಬರು ಶಾಸಕರು, ಸಮಾಜವಾದಿ ಪಕ್ಷದ ಓರ್ವ ಶಾಸಕ ಹಾಗೂ ನಾಲ್ವರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 121 ಸದಸ್ಯರ ಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಿತ್ತು. ಆದರೆ, ಇದೀಗ ಪಕ್ಷೇತರರು ಸೇರಿದಂತೆ ಕಾಂಗ್ರೆಸ್​ನ 22 ಶಾಸಕರು ರಾಜೀನಾಮೆ ನೀಡಿದ್ದಾರೆ. ಹಾಲಿ ಕಾಂಗ್ರೆಸ್​ನಲ್ಲಿ ಕೇವಲ 92 ಶಾಸಕರಿದ್ದಾರೆ. ಈಗ ವಿಶ್ವಾಸಮತಯಾಚನೆ ಮುಂದೂಡಲ್ಪಟ್ಟಿದ್ದು,  ಹೀಗಾಗಿ ರಾಜೀನಾಮೆ ನೀಡಿದ 22 ಶಾಸಕರ ಮನವೊಲಿಸಲು ಕಮಲನಾಥ್​ಗೆ 10 ದಿನ ಸಮಯಾವಕಾಶ ದೊರೆತಿದೆ.

    ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ನಾಳೆ ವಿಶ್ವಾಸಮತ ಯಾಚನೆಗೆ ರಾಜ್ಯಪಾಲರ ಸೂಚನೆ; ಕಮಲನಾಥ್​ ಸರ್ಕಾರಕ್ಕೆ ಅಗ್ನಿಪರೀಕ್ಷೆ

    ನಾಳೆ ಬಿಜೆಪಿ ಅರ್ಜಿ ವಿಚಾರಣೆ:

    ವಿಶ್ವಾಸಮತ ಸಾಬೀತು ಮಾಡಲು ಕಮಲ್​ ನಾಥ್​ಗೆ 10 ದಿನ ಕಾಲಾವಕಾಶ ದೊರೆತ ಬೆನ್ನಲ್ಲೇ ಬಿಜೆಪಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ. ಮುಂದಿನ 48 ಗಂಟೆ ಒಳಗೆ ವಿಶ್ವಾಸಮತ ಯಾಚನೆಗೆ ನಿರ್ದೇಶನ ನೀಡಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಸೇರಿ 9 ಬಿಜೆಪಿ ಶಾಸಕರು ಸುಪ್ರಿಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ.
    First published: