HOME » NEWS » National-international » NON GANDHI SHOULD BE CONGRESS PARTY CHIEF SAYS PRIYANKA GANDHI AFTER RAHUL GANDHI SCT

Priyanka Gandhi: ಗಾಂಧಿ ಕುಟುಂಬದ ಹೊರಗಿನವರೇ ಕಾಂಗ್ರೆಸ್ ಅಧ್ಯಕ್ಷರಾಗಲಿ; ಪ್ರಿಯಾಂಕಾ ಗಾಂಧಿ

AICC President: ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿಯನ್ನು ನಮ್ಮ ನಾಯಕ ಎಂದು ಒಪ್ಪಿಕೊಳ್ಳಲು ಸಿದ್ಧರಿದ್ದೇವೆ. ಕಾಂಗ್ರೆಸ್ ಅಧ್ಯಕ್ಷರಾಗುವವರು ಒಂದುವೇಳೆ ನೀನು ಉತ್ತರ ಪ್ರದೇಶದ ಜವಾಬ್ದಾರಿ ತೆಗೆದುಕೊಳ್ಳುವುದು ಬೇಡ, ಅಂಡಮಾನ್ ನಿಕೋಬಾರ್​​ಗೆ ಹೋಗು ಎಂದರೂ ಅದನ್ನು ಖುಷಿಯಿಂದ ಒಪ್ಪಿಕೊಳ್ಳುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

Sushma Chakre | news18-kannada
Updated:August 19, 2020, 12:47 PM IST
Priyanka Gandhi: ಗಾಂಧಿ ಕುಟುಂಬದ ಹೊರಗಿನವರೇ ಕಾಂಗ್ರೆಸ್ ಅಧ್ಯಕ್ಷರಾಗಲಿ; ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ ವಾದ್ರಾ
  • Share this:
ನವದೆಹಲಿ (ಆ. 19): ಕಾಂಗ್ರೆಸ್ ಪಕ್ಷಕ್ಕೆ (ಎಐಸಿಸಿ) ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ರಾಹುಲ್ ಗಾಂಧಿ ಅಭಿಪ್ರಾಯಕ್ಕೆ ಪ್ರಿಯಾಂಕಾ ಗಾಂಧಿ ಸಂಪೂರ್ಣ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್​ನಲ್ಲೀಗ ಮತ್ತೊಮ್ಮೆ ಪಕ್ಷದ ಉತ್ತರಾಧಿಕಾರಿ ಯಾರೆಂಬ ಬಗ್ಗೆ ಚರ್ಚೆಗಳು ಶುರುವಾಗಿವೆ. ಸದ್ಯದ ಮಟ್ಟಿಗೆ ಸೋನಿಯಾ ಗಾಂಧಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ನಿರ್ವಹಿಸುತ್ತಿದ್ದಾರೆ.

ನಮ್ಮ ಕುಟುಂಬ ಯಾರೊಬ್ಬರೂ ಕಾಂಗ್ರೆಸ್​ ಪಕ್ಷಕ್ಕೆ ಅಧ್ಯಕ್ಷರಾಗುವುದಿಲ್ಲ ಎಂದು ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಅದಕ್ಕೆ ನನ್ನ ಸಂಪೂರ್ಣ ಸಹಮತವಿದೆ. ಕಾಂಗ್ರೆಸ್ ಪಕ್ಷ ತನ್ನದೇ ದಾರಿಯಲ್ಲಿ ಸಾಗಬೇಕು. ಅದಕ್ಕೆ ನಮ್ಮ ಕುಟುಂಬಕ್ಕೆ ಸೇರಿರದ ವ್ಯಕ್ತಿ ಅಧ್ಯಕ್ಷರಾಗಬೇಕು ಎಂದು ನನಗೆ ಅನಿಸುತ್ತದೆ ಎಂದು ಕೂಡ ಪ್ರಿಯಾಂಕಾ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

'ಇಂಡಿಯಾ ಟುಮಾರೋ: ಭಾರತದ ಮುಂದಿನ ತಲೆಮಾರಿನ ರಾಜಕೀಯ ನಾಯಕರ ಜೊತೆಗಿನ ಮಾತುಕತೆ' ಎಂಬ ಪುಸ್ತಕಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಿಯಾಂಕಾ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿಯನ್ನು ನಾವು ನಮ್ಮ ನಾಯಕ (ಬಾಸ್) ಎಂದು ಒಪ್ಪಿಕೊಳ್ಳಲು ಸಿದ್ಧರಿದ್ದೇವೆ. ಒಂದುವೇಳೆ ನಮ್ಮ ಪಕ್ಷದ ಅಧ್ಯಕ್ಷರಾಗುವವರು 'ನೀನು ಉತ್ತರ ಪ್ರದೇಶದ ಜವಾಬ್ದಾರಿ ತೆಗೆದುಕೊಳ್ಳುವುದು ಬೇಡ, ಅಂಡಮಾನ್ ನಿಕೋಬಾರ್​​ಗೆ ಹೋಗು' ಎಂದು ಹೇಳಿದರೂ ನಾನು ಅದನ್ನು ಸ್ವೀಕರಿಸಲು ಸಿದ್ಧಳಿದ್ದೇನೆ. ನಮ್ಮ ಪಕ್ಷದ ಅಧ್ಯಕ್ಷರು ಯಾರೇ ಆದರೂ ಅವರ ಆದೇಶವನ್ನು ನಾನು ಖಂಡಿತ ಪಾಲಿಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ ಹಲವೆಡೆ ಉತ್ತಮ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನ್ನು ಅನುಭವಿಸಿದ ನಂತರ ಆ ಸೋಲಿನ ನೈತಿಕ ಹೊಣೆ ಹೊತ್ತು ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅಧಿಕಾರ ವಹಿಸಿಕೊಂಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ನೇಮಕ ಆಗುವವರೆಗೂ ಸೋನಿಯಾ ಗಾಂಧಿಯವರೇ ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಸ್ಪಷ್ಟಪಡಿಸಿತ್ತು.

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಸಮಸ್ಯೆಯಿದೆ ಎಂದು ಖುದ್ದು ಕಾಂಗ್ರೆಸ್ ನಾಯಕರೇ ಹಲವು ಬಾರಿ ಅಸಮಾಧಾನ ಹೊರಹಾಕಿದ್ದರು. ಕಳೆದ ತಿಂಗಳು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಸರ್ಕಾರದ ಪತನಕ್ಕೆ ಬಿಜೆಪಿ ತಂತ್ರ ರೂಪಿಸುತ್ತಿದೆ ಎಂದು ಆರೋಪಿಸಿದ್ದರು. ಅದಕ್ಕೆ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರೇ ತಮಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಆತಂಕ ಶುರುವಾಗಿದೆ. ನಮ್ಮ ಪಕ್ಷದ ನಾಯಕರೆನ್ನಲ್ಲ ಬಿಜೆಪಿಯ ಕುದುರೆ ವ್ಯಾಪಾರದಲ್ಲಿ ಕಳೆದುಕೊಂಡ ಮೇಲಾದರೂ ನಾವು ಎಚ್ಚೆತ್ತುಕೊಳ್ಳುತ್ತೇವಾ? ಎಂದು ಗೊತ್ತಿಲ್ಲ ಎಂದು ಟ್ವಿಟ್ಟರ್​ನಲ್ಲಿ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಆನ್​ಲೈನ್​ ಔಷಧ ಮಾರಾಟ ಕ್ಷೇತ್ರಕ್ಕೆ ಕಾಲಿಟ್ಟ ರಿಲಯನ್ಸ್​; ನೆಟ್​ಮೆಡ್ಸ್​ನ ಶೇ.60 ಷೇರು ಖರೀದಿನ್ಯೂಸ್​18 ಜೊತೆಗಿನ ಸಂದರ್ಶನವೊಂದರಲ್ಲಿ ಕೇರಳದ ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಕೂಡ ಕಾಂಗ್ರೆಸ್​ ಅಧ್ಯಕ್ಷ ಸ್ಥಾನದ ಬಗ್ಗೆ ಪ್ರಸ್ತಾಪಿಸಿದ್ದರು. ಒಂದುವೇಳೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಒಪ್ಪದೆ ಇದ್ದರೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದು ಒಳ್ಳೆಯದು. ಹಾಗೇ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸ್ಥಾನಗಳಿಗೂ ಪಾರದರ್ಶಕ ಚುನಾವಣೆ ನಡೆದರೆ ಉತ್ತಮ. ಇದರಿಂದ ಯಾರಿಗೂ ಅಸಮಾಧಾನ ಇರುವುದಿಲ್ಲ ಎಂದು ಹೇಳಿದ್ದರು.ಕಾಂಗ್ರೆಸ್​ನಿಂದ ಅಮಾನತುಗೊಂಡಿರುವ ಸಂಜಯ್ ಝಾ ಇತ್ತೀಚೆಗಷ್ಟೇ ನೂರಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಪಕ್ಷದ ನಾಯಕತ್ವ ಬದಲಾವಣೆಗೆ ಒತ್ತಾಯಿಸಿ ಪತ್ರ ಬರೆದಿದ್ದರು. ಹಾಗೇ, ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆ ಮೂಲಕ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು, ಆ ಚುನಾವಣೆ ಪಾರದರ್ಶಕವಾಗಿರಬೇಕು ಎಂದು ಪತ್ರ ಬರೆದಿದ್ದರು ಎಂದು ಟ್ವೀಟ್ ಮೂಲಕ ಹೇಳಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಸಂಜಯ್ ಝಾ ಅವರ ಹೇಳಿಕೆಯನ್ನು ಕಾಂಗ್ರೆಸ್ ಅಲ್ಲಗಳೆದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಪ್ರಿಯಾಂಕಾ ಗಾಂಧಿ ವಾದ್ರಾ ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿ ಕಾಂಗ್ರೆಸ್ ಅಧ್ಯಕ್ಷರಾದರೆ ಉತ್ತಮ ಎಂದು ಹೇಳಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ.
Published by: Sushma Chakre
First published: August 19, 2020, 11:16 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories