ನನಗೆ ಯಾವುದೇ ಕಾಯಿಲೆಯಿಲ್ಲ, ಆರೋಗ್ಯವಾಗಿದ್ದೇನೆ; ಆರೋಗ್ಯದ ಬಗ್ಗೆ ಎದ್ದಿದ್ದ ಊಹಾಪೋಹಗಳಿಗೆ ತೆರೆ ಎಳೆದ ಅಮಿತ್ ಶಾ

ಇಂತಹ ಗಾಳಿ ಸುದ್ದಿಗಳನ್ನು  ಹಬ್ಬಿಸುವುದನ್ನು ನಿಲ್ಲಿಸಿ ಎಂದು ನಾನು ಜನರಲ್ಲಿ ಮನವಿ ಮಾಡುತ್ತಿದ್ದೇನೆ. ಮತ್ತು ನನ್ನ ಕೆಲಸ ಮಾಡಲು ಬಿಡಿ ಎಂದು ಅಮಿತ್ ಶಾ ಅವರು ಮನವಿ ಮಾಡಿದ್ದಾರೆ.

ಅಮಿತ್​ ಶಾ

ಅಮಿತ್​ ಶಾ

 • Share this:
  ನವದೆಹಲಿ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯದ ಬಗ್ಗೆ ಎದ್ದಿರುವ ಊಹಾಪೋಹಗಳಿಗೆ ಸ್ವತಃ ಅಮಿತ್ ಶಾ ಅವರೇ ಸ್ಪಷ್ಟನೆ ನೀಡಿದ್ದು, ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ. ಆರೋಗ್ಯವಾಗಿ ಇದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

  ಅಮಿತ್ ಶಾ ಅವರ ಆರೋಗ್ಯದ ವಿಷಯವಾಗಿ ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ಗಾಳಿಸುದ್ದಿಗಳು ಹರಿದಾಡಲು ಆರಂಭಿಸಿದ್ದವು. ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ ಎಂದು ಸ್ಪಷ್ಟಪಡಿಸುತ್ತಿದ್ದೇನೆ. ಯಾವುದೇ ರೋಗದಿಂದ ಬಳಲುತ್ತಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ.

  ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೆಲವು ಜನರು ನನ್ನ ಆರೋಗ್ಯದ ಬಗ್ಗೆ ಗಾಳಿಸುದ್ದಿ ಹಬ್ಬಿಸುತ್ತಿದ್ದರು. ವಾಸ್ತವದಲ್ಲಿ, ತುಂಬಾ ಮಂದಿ ನನ್ನ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿ ಶುಭಹಾರೈಸಿ ಟ್ವೀಟ್ ಸಹ ಮಾಡಿದ್ದಾರೆ ಎಂದು 55 ವರ್ಷದ ಅಮಿತ್ ಶಾ ಅವರು ಹೇಳಿದ್ದಾರೆ.

  ಭಾರತ ಕೊರೋನಾ ವೈರಸ್ ಸಾಂಕ್ರಾಮಿಕ ವಿರುದ್ಧ ಹೋರಾಡುತ್ತಿದೆ. 60 ಸಾವಿರ ಜನರು ಸೋಂಕಿನಿಂದ ಬಳಲುತ್ತಿದ್ದಾರೆ. 1900ಕ್ಕೂ ಅಧಿಕ ಜನರು ಮಾರಕ ಸೋಂಕಿಗೆ ಬಲಿಯಾಗಿದ್ದಾರೆ. ಗಾಳಿಸುದ್ದಿಯ ಬಗ್ಗೆ ನಾನು ಅಷ್ಟಾಗಿ ತಲೆಕೆಡಿಸಿಕೊಳ್ಳದೆ, ಗೃಹ ಸಚಿವನಾಗಿ ನಾನು ನನ್ನ ಕೆಲಸದಲ್ಲಿ ನಿರತನಾಗಿದ್ದೇನೆ ಎಂದು ಹೇಳಿದ್ದಾರೆ. ಕಳೆದ ಎರಡು ದಿನಗಳಿಂದ ಬಿಜೆಪಿಯ ಲಕ್ಷಾಂತರ ಕಾರ್ಯಕರ್ತರು ಅಮಿತ್ ಶಾ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ ಅವರು ಈ ಸ್ಪಷ್ಟನೆ ನೀಡಿದ್ದಾರೆ.  ಇದನ್ನು ಓದಿ: ‘ವಲಸೆ ಕಾರ್ಮಿಕರ ಬಗ್ಗೆ ಮಾತಾಡುವ ಹಕ್ಕು ನಿಮಗಿಲ್ಲ‘ - ಅಮಿತ್​ ಷಾ ಆರೋಪಕ್ಕೆ ಮಮತಾ ಬ್ಯಾನರ್ಜಿ ತಿರುಗೇಟು

  ಇಂತಹ ಗಾಳಿ ಸುದ್ದಿಗಳನ್ನು  ಹಬ್ಬಿಸುವುದನ್ನು ನಿಲ್ಲಿಸಿ ಎಂದು ನಾನು ಜನರಲ್ಲಿ ಮನವಿ ಮಾಡುತ್ತಿದ್ದೇನೆ. ಮತ್ತು ನನ್ನ ಕೆಲಸ ಮಾಡಲು ಬಿಡಿ ಎಂದು ಅಮಿತ್ ಶಾ ಅವರು ಮನವಿ ಮಾಡಿದ್ದಾರೆ.
  First published: